ಫರಿದಾಬಾದ್ ಲಾಕಪ್ ಡೆತ್: ಆರು ಪೊಲೀಸರ ವಿರುದ್ಧ ಕೊಲೆ ಪ್ರಕರಣ

ಫರಿದಾಬಾದ್, ಜುಲೈ. 25: ಪೊಲೀಸ್ ಕಸ್ಟಡಿಯಲ್ಲಿ ಆರೋಪಿಯೊಬ್ಬರು ಸಾವನ್ನಪ್ಪಿದ ನಂತರ ಎನ್‌ಐಟಿ ಫರಿದಾಬಾದ್ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಆರಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ. ರಾಜಸ್ಥಾನದ ಗೋಬಿಂದ್‌ಗಢ್ ಜಿಲ್ಲೆಯ ನಿವಾಸಿ ಶೈಕುಲ್ (30) ಭಾನುವಾರ ಪೊಲೀಸರ ಥಳಿತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

"ಸಂತ್ರಸ್ತ ಶೈಕುಲ್ ಅವರ ಸಹೋದರರ ದೂರಿನ ಮೇರೆಗೆ, ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ಅನ್ನು ಸೋಮವಾರ ಫರಿದಾಬಾದ್ ಹಳೆಯ ಪೊಲೀಸ್ ಠಾಣೆಯಲ್ಲಿ ಇಬ್ಬರು ಹೆಸರಿಸಲಾದ ಪೊಲೀಸರು ಮತ್ತು ಇತರರ ವಿರುದ್ಧ ದಾಖಲಿಸಲಾಗಿದೆ" ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಆರೋಪಿ ಪೊಲೀಸರನ್ನು ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ ಮತ್ತು ಅವರ ವಿರುದ್ಧ ಮ್ಯಾಜಿಸ್ಟ್ರೇಟ್ ತನಿಖೆಯನ್ನು ಸಹ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

faridabad-custodial-death

ಶೈಕುಲ್ ಬಂಧನಕ್ಕೂ ಮುನ್ನ ಫರಿದಾಬಾದ್ ಪೊಲೀಸರು ಶಕುಲ್ ಖಾನ್, ನರೇಂದ್ರ, ಧರ್ಮೇಂದ್ರ, ಸಬೀರ್ ಮತ್ತು ಅಲಿ ಮೊಹಮ್ಮದ್ ಎಂಬ ಐದು ಜನರನ್ನು ಜುಲೈ 20 ರಂದು ಬಂಧಿಸಿದ್ದರು. ಎಲ್ಲಾ ಆರೋಪಿಗಳನ್ನು ಫರಿದಾಬಾದ್ ನಿವಾಸಿ ಸುಬ್ರತಾ ಅವರಿಗೆ ಪ್ಲಾಟ್ ಮಾರಾಟದ ಹೆಸರಿನಲ್ಲಿ 1.90 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 13 ರಂದು ಸೈಬರ್ ಠಾಣೆ ಎನ್‌ಐಟಿ ಪೊಲೀಸರು ಘಟನೆಯ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ಜುಲೈ 21 ರಂದು ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ತೆಗೆದುಕೊಂಡರು. ರಿಮಾಂಡ್ ಅವಧಿಯಲ್ಲಿ, ಜುಲೈ 21 ರಂದು ಶೈಕುಲ್ ಅವರು ಸುಸ್ತು ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

faridabad-custodial-death

ಪೊಲೀಸ್ ತಂಡ ಅವರನ್ನು ಚಿಕಿತ್ಸೆಗಾಗಿ ಬಿಕೆ ಆಸ್ಪತ್ರೆಗೆ ಕರೆದೊಯ್ದಿದೆ. ವೈದ್ಯರು ಆತನಿಗೆ ಅಗತ್ಯ ಔಷಧಗಳನ್ನು ನೀಡಿ ವಾಪಸ್ ಕಳುಹಿಸಿದರು ಆದರೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಮರುದಿನ ಮತ್ತೆ ಆಸ್ಪತ್ರೆಗೆ ಕರೆದೊಯ್ದರು. ಮತ್ತೆ ಆಸ್ಪತ್ರೆಗೆ ದಾಖಲಾದ ಎರಡು ಗಂಟೆಗಳ ನಂತರ ಅವರು ನಿಧನರಾದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಮೃತರ ಕುಟುಂಬಸ್ಥರು ಭಾನುವಾರ ಶವದ ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿ, ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದರು. ಬಳಿಕ ಪ್ರಕರಣ ದಾಖಲಿಸುವ ಭರವಸೆ ನೀಡಿದ ನಂತರ ಅವರು ಒಪ್ಪಿದ ನಂತರ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ನುಹ್ ಕಾಂಗ್ರೆಸ್ ಶಾಸಕ ಅಫ್ತಾಬ್ ಅಹಮದ್ ಕೂಡ ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಲು ಬಿಕೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಪ್ರಕರಣದ ನ್ಯಾಯಯುತ ತನಿಖೆಗೆ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+