ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದಿ ಹೇರಿಕೆ ಖಂಡಿಸಿ ಡಿಎಂಕೆ ಕಚೇರಿಯ ಮುಂದೆ ರೈತ ಆತ್ಮಹತ್ಯೆ

|
Google Oneindia Kannada News

ಚೆನ್ನೈ, ನವೆಂಬರ್‌ 28: ತಮಿಳುನಾಡಿನ ಸೇಲಂ ಜಿಲ್ಲೆಯ 85 ವರ್ಷದ ರೈತರೊಬ್ಬರು ಹಿಂದಿ ಹೇರಿಕೆಯನ್ನು ಖಂಡಿಸಿ ಡಿಎಂಕೆ ಕಚೇರಿ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೆಟ್ಟೂರು ಪಕ್ಕದ ತಲೈಯೂರಿನಲ್ಲಿರುವ ಡಿಎಂಕೆ ಪಕ್ಷದ ಕಚೇರಿಯ ಮುಂದೆ ಹಿಂದಿ ಹೇರಿಕೆಯನ್ನು ವಿರೋಧಿಸಿ ಡಿಎಂಕೆಯ ಮಾಜಿ ಕೃಷಿ ಒಕ್ಕೂಟದ ಸಂಘಟಕ ತಂಗವೇಲ್ ಎಂಬ ರೈತರೊಬ್ಬರು ಪ್ರತಿಭಟನೆ ನಡೆಸಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಎಂಕೆಯ ಸಕ್ರಿಯ ಸದಸ್ಯರಾಗಿದ್ದ ತಂಗವೇಲ್ ಅವರು ಹಿಂದಿಯನ್ನು ಶಿಕ್ಷಣ ಮಾಧ್ಯಮವಾಗಿ ತರಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರದಿದಾಗಿ ಬೇಸರಗೊಂಡಿದ್ದರು.

ರೈಲ್ವೆ ಇಲಾಖೆ ಎಲ್ಲಾ ಪರೀಕ್ಷೆ ಕನ್ನಡದಲ್ಲೂ ನಡೆಸಿ: ಎಎಪಿ ಆಗ್ರಹರೈಲ್ವೆ ಇಲಾಖೆ ಎಲ್ಲಾ ಪರೀಕ್ಷೆ ಕನ್ನಡದಲ್ಲೂ ನಡೆಸಿ: ಎಎಪಿ ಆಗ್ರಹ

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬ್ಯಾನರ್‌ನಲ್ಲಿ ತಂಗವೇಲ್, "ನಮಗೆ ಹಿಂದಿ ಬೇಡ, ನಮ್ಮ ಮಾತೃಭಾಷೆ ತಮಿಳು. ಹಿಂದಿ ವಿದೂಷಕರ ಭಾಷೆ, ಹಿಂದಿ ಭಾಷೆ ಹೇರುವುದು ವಿದ್ಯಾರ್ಥಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಿಂದಿ ತೊಲಗಿ, ಹಿಂದಿ ತೊಲಗಿ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿ ತೊಲಗಿ ಎಂದು ಬರೆದುಕೊಂಡಿದ್ದರು.

Farmer commits suicide by setting himself on fire in front of DMK office condemning imposition of Hindi

ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ಸಿಎಂ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ರಾಜ್ಯದಲ್ಲಿ ಹಿಂದಿ ಹೇರಿದರೆ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಡಿಎಂಕೆ ಪಕ್ಷವು ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ. ಕೇಂದ್ರ ಸರ್ಕಾರ ಜನರ ಭಾವನೆಗಳನ್ನು ಕಡೆಗಣಿಸಿದರೆ ನಾವು ಮೂಕಪ್ರೇಕ್ಷಕನಾಗಿ ಉಳಿಯುವುದಿಲ್ಲ ಎಂದು ಡಿಎಂಕೆ ಪಕ್ಷವು ಬೃಹತ್ ಪ್ರತಿಭಟನೆಯನ್ನೂ ನಡೆಸಿತ್ತು.

SSC Job: ಆಯೋಗದ ಕನ್ನಡ ವಿರೋಧಿ ನೀತಿ ವಿರುದ್ಧ ಕಾನೂನು ಹೋರಾಟಕ್ಕೆ ಕಸಾಪ ಚಿಂತನೆSSC Job: ಆಯೋಗದ ಕನ್ನಡ ವಿರೋಧಿ ನೀತಿ ವಿರುದ್ಧ ಕಾನೂನು ಹೋರಾಟಕ್ಕೆ ಕಸಾಪ ಚಿಂತನೆ

ಹಿಂದಿ ಭಾಷಿಕ ರಾಜ್ಯಗಳಲ್ಲಿರುವ ಐಐಟಿಗಳಂತಹ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮ ಹಿಂದೂ ಮತ್ತು ದೇಶದ ಇತರ ಭಾಗಗಳಲ್ಲಿ ಇರಬೇಕು ಎಂದು ಸಂಸದೀಯ ಸಮಿತಿಯು ಶಿಫಾರಸು ಮಾಡಿದ ನಂತರ ಪ್ರತಿಭಟನೆ ಭುಗಿಲೆದ್ದಿದೆ. ವಿಶ್ವಸಂಸ್ಥೆಯ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದಾಗಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

English summary
An 85-year-old farmer from Salem district of Tamil Nadu set himself on fire outside the DMK office condemning the imposition of Hindi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X