ಹಾವೇರಿಯಲ್ಲಿ ಬಗರ್ ಹುಕುಂ ಭೂಮಿಗೆ ಆಗ್ರಹಿಸಿ ಅರೆಬೆತ್ತಲೆ ಪ್ರದರ್ಶನ

ಬಗರ್ ಹುಕುಂ ಭೂಮಿಗಾಗಿ ಆಗ್ರಹಿಸಿ ಹಾವೇರಿ ರೈತರಿಂದ ಪ್ರತಿಭಟನೆ. ಅರೆಬೆತ್ತಲೆಯಾಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು.

ಹಾವೇರಿ, ಜೂನ್ 12: ಬಗರ್ ಹುಕುಂ ಭೂಮಿಯ ಹಸ್ತಾಂತರಕ್ಕೆ ಆಗ್ರಹಿಸಿ ಹಾವೇರಿ ಭಾಗದ ರೈತರು ಸೋಮವಾರ ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗವಹಿಸಿದ್ದರು.

In Pics : ಕರ್ನಾಟಕ ಬಂದ್ ಗೆ ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆ

Farmer's protest in Haveri for Bagar Hukum

ಅರೆಬೆತ್ತಲೆಯಾಗಿ ತಲೆ ಮೇಲೆ ಕಲ್ಲು ಹೊತ್ತೊಯ್ಯುವ ಮೂಲಕ ರಾಜ್ಯ ಸರ್ಕಾರವು ತಮ್ಮ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯವನ್ನು ಸಾಂಕೇತಿಕವಾಗಿ ಬಿಂಬಿಸಲಾಗುತ್ತಿದೆ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರೊಬ್ಬರು ತಿಳಿಸಿದರು.

ಈ ಪ್ರತಿಭಟನೆಯ ವೇಳೆ, ಹಿರೇಕೆರೂರು ತಾಲೂಕಿನ ಆಲದಗೇರಿಯ ರೈತ ಶಿವಪ್ಪ ಹಲಗೇರಿ ವಿಷ ಸೇವಿಸಲು ಮಾಡಿದ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ಇದೇ ವೇಳೆ, ರಾಣಿಬೆನ್ನೂರು ಹನುಮಾಪುರದ ರೈತ ಕಾಳಪ್ಪ ಲಮಾಣಿ ಅವರು ಬೆತ್ತಲಾಗಿದ್ದಾರೆ. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+