• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Chakka Jam: ಕೇಂದ್ರ ಸರ್ಕಾರಕ್ಕೆ 'ಚೆಕ್' ಕೊಡುತ್ತಾ "ಛಕ್ಕಾ ಜಾಮ್"?

|

ನವದೆಹಲಿ, ಫೆಬ್ರವರಿ.05: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ಫೆಬ್ರವರಿ.06ರಂದು ದೇಶಾದ್ಯಂತ "ಛಕ್ಕಾ ಜಾಮ್" (ರಾಷ್ಟ್ರೀಯ ಹೆದ್ದಾರಿ ತಡೆ) ಆಂದೋಲನಕ್ಕೆ ಭಾರತೀಯ ಕಿಸಾನ್ ಒಕ್ಕೂಟ ಸೇರಿದಂತೆ ಹಲವು ರೈತ ಸಂಘಟನೆಗಳು ಕರೆ ಕೊಟ್ಟಿವೆ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಛಕ್ಕಾ ಜಾಮ್ ಹೋರಾಟಕ್ಕೆ ಕರೆ ನೀಡಲಾಗಿದೆ.

ಛಕ್ಕಾ ಜಾಮ್: ನಡುರಸ್ತೆಯಲ್ಲಿ ಸಿಲುಕಿದ ಜನರಿಗೆ ರೈತರಿಂದ ಆಹಾರ, ನೀರಿನ ವ್ಯವಸ್ಥೆ ಛಕ್ಕಾ ಜಾಮ್: ನಡುರಸ್ತೆಯಲ್ಲಿ ಸಿಲುಕಿದ ಜನರಿಗೆ ರೈತರಿಂದ ಆಹಾರ, ನೀರಿನ ವ್ಯವಸ್ಥೆ

ವಿವಾದಿತ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಸಾವಿರಾರು ರೈತರ ಪ್ರತಿಭಟನೆ ನಡೆಸುತ್ತಿದ್ದಾರೆ. ಫೆಬ್ರವರಿ.06ರ ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಾಗುತ್ತದೆ. ಛಕ್ಕಾ ಜಾಮ್ ಆಂದೋಲನ ಎಂದರೇನು, ಕೇಂದ್ರದ ವಿರುದ್ಧ ಹೋರಾಟಕ್ಕೆ ರೈತರ ಸಿದ್ಧತೆ ಹೇಗಿದೆ, ರೈತರನ್ನು ನಿರ್ಬಂಧಿಸುವುದಕ್ಕೆ ಭದ್ರತಾ ಪಡೆ ಹೇಗೆಲ್ಲ ತಯಾರಿ ಮಾಡಿಕೊಳ್ಳುತ್ತಿದೆ ಎನ್ನುವುದರ ಕುರಿತು ವಿಸ್ತೃತ ವರದಿ ಇಲ್ಲಿದೆ.

ಅಕ್ಟೋಬರ್ ವರೆಗೂ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ

ಅಕ್ಟೋಬರ್ ವರೆಗೂ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ

ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ 73 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರ ಕೂಗಿಗೆ ನ್ಯಾಯ ಸಿಗದಿದ್ದಲ್ಲಿ ಅಕ್ಟೋಬರ್ ವರೆಗೂ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ತಿಕೈಟ್ ಎಚ್ಚರಿಕೆ ನೀಡಿದ್ದಾರೆ.

ಇದು ಘಾಜಿಪುರವೇ? ಭಾರತ-ಪಾಕ್ ಗಡಿಯೇ? ವಿಪಕ್ಷಗಳಿಂದ ತೀವ್ರ ಖಂಡನೆಇದು ಘಾಜಿಪುರವೇ? ಭಾರತ-ಪಾಕ್ ಗಡಿಯೇ? ವಿಪಕ್ಷಗಳಿಂದ ತೀವ್ರ ಖಂಡನೆ

ಛಕ್ಕಾ ಜಾಮ್ ನಡೆಸುವುದಕ್ಕೆ ಮುಖ್ಯ ಕಾರಣ

ಛಕ್ಕಾ ಜಾಮ್ ನಡೆಸುವುದಕ್ಕೆ ಮುಖ್ಯ ಕಾರಣ

ಕೇಂದ್ರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರಿಗೆ ನೀಡುತ್ತಿದ್ದ ಮೂಲಭೂತ ಸೌಲಭ್ಯಗಳನ್ನು ಕಡಿತಗೊಳಿಸಲಾಗಿದೆ. ಇಂಟರ್ ನೆಟ್ ಸೇವೆ, ನೀರು, ಶೌಚಾಲಯ, ಕನಿಷ್ಠ ವಿದ್ಯುತ್ ಸೌಲಭ್ಯವನ್ನು ಕಿತ್ತುಕೊಳ್ಳಲಾಗುತ್ತಿದೆ. ರೈತರನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದು ಆರೋಪಿಸಿ ರೈತರು ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸುವುದಾಗಿ ಘೋಷಿಸಿದ್ದಾರೆ.

ರಾಜಧಾನಿ ಗಡಿಯಲ್ಲಿ ಬ್ಯಾರಿಕೇಡ್ ಮತ್ತು ಕಬ್ಬಿಣದ ಸರಪಳಿ

ರಾಜಧಾನಿ ಗಡಿಯಲ್ಲಿ ಬ್ಯಾರಿಕೇಡ್ ಮತ್ತು ಕಬ್ಬಿಣದ ಸರಪಳಿ

ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಪ್ರತಿನಿತ್ಯ ಬದುಕುವುದೇ ಕಷ್ಟ ಎನ್ನುವಂತಾ ವಾತಾವರಣ ಸೃಷ್ಟಿಯಾಗಿದೆ. ದೆಹಲಿಯ ಗಡಿಯಲ್ಲಿ ಪ್ರತಿಭಟನಾ ಸ್ಥಳ, ಸುತ್ತಮುತ್ತಲಿನ ರಸ್ತೆಗಳ ಚಿತ್ರಣ ಸಂಪೂರ್ಣ ಬದಲಾಗಿದೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರನ್ನು ತಡೆಯುವುದಕ್ಕೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸಿಮೆಂಟ್ ರಸ್ತೆ ಮೇಲೆ ಕಬ್ಬಿಣದ ಸರಳು, ಕಾಂಕ್ರೀಟ್ ಗೋಡೆಗಳು, ಸಿಮೆಂಟ್ ರಸ್ತೆಗಳಲ್ಲಿ ತಲೆ ಎತ್ತಿರುವ ಮೊಳೆಗಳು ಇದರ ಜೊತೆಗೆ ಹಂತ ಹಂತವಾಗಿ ಬ್ಯಾರಿಕೇಡ್ ಹಾಕಲಾಗಿದೆ.

ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ಹೆದ್ದಾರಿ ತಡೆ

ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ಹೆದ್ದಾರಿ ತಡೆ

"ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ದೆಹಲಿಯಲ್ಲಿ ಪೊಲೀಸರು ತಡೆಯಬಹುದು. ದೆಹಲಿಯಲ್ಲಿ ನಾವು ಏನನ್ನೂ ಮಾಡುವುದಕ್ಕೆ ಹೋಗುವುದಿಲ್ಲ. ನಮ್ಮ ಸುತ್ತಲೂ ಪೊಲೀಸರು ಬಿಗಿ ಭದ್ರತೆ ಮಾಡಿಕೊಂಡಿರುತ್ತಾರೆ. ಅಲ್ಲದೇ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹರಿಯಾಣ ಗಡಿಯಿಂದ ದೆಹಲಿಗೆ ತೆರಳುವ ರೈತರನ್ನು ನಿರ್ಬಂಧಿಸಬಹುದು. ದೇಶದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಛಕ್ಕಾ ಜಾಮ್ ನಡೆಸಲಾಗುತ್ತದೆ" ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ತಿಕೈಟ್ ಹೇಳಿದ್ದಾರೆ.

ರೈತರಿಂದ ಪ್ರಯಾಣಿಕರಿಗೆ ನೀರು, ಆಹಾರ, ಚಹಾ ವಿತರಣೆ

ರೈತರಿಂದ ಪ್ರಯಾಣಿಕರಿಗೆ ನೀರು, ಆಹಾರ, ಚಹಾ ವಿತರಣೆ

ದೇಶಾದ್ಯಂತ "ಛಕ್ಕಾ ಜಾಮ್ ಆಂದೋಲನ" ನಡೆಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲೇ ವಾಹನಗಳನ್ನು ತಡೆದು ನಿಲ್ಲಿಸಲಾಗುತ್ತದೆ. 3 ಗಂಟೆಗಳವರೆಗೂ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಈ ವೇಳೆ ರಸ್ತೆಯಲ್ಲಿ ಸಿಲುಕಿದ ಪ್ರಯಾಣಿಕರಿಗೆ ತೊಂದರೆ ಆಗದಂತೆ ರೈತರೇ ಸಹಾಯ ಮಾಡುತ್ತಾರೆ. ನಡುರಸ್ತೆಯಲ್ಲಿ ಸಿಲುಕಿದ ಪ್ರಯಾಣಿಕರಿಗೆ ನೀರು, ಚಹಾ ಮತ್ತು ಆಹಾರವನ್ನು ರೈತರೇ ನೀಡುತ್ತಾರೆ ಎಂದು ಬಿಕೆಯು ಮುಖ್ಯಸ್ಥ ರಾಕೇಶ್ ತಿಕೈಟ್ ತಿಳಿಸಿದ್ದಾರೆ.

ದೇಶದ ಹಲವು ರೈಲು ಮಾರ್ಗಗಳ ಬದಲಾವಣೆ

ದೇಶದ ಹಲವು ರೈಲು ಮಾರ್ಗಗಳ ಬದಲಾವಣೆ

ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕೆ ದೆಹಲಿಯ ಅಕ್ಕ-ಪಕ್ಕದ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಆಗಮಿಸುವ ನಿರೀಕ್ಷೆಯಿತ್ತು. ಈ ಹಿನ್ನೆಲೆ ದೆಹಲಿಗೆ ಸಂಚರಿಸಲಿರುವ ಹಲವು ರೈಲುಗಳ ಮಾರ್ಗವನ್ನೇ ಬದಲಾವಣೆ ಮಾಡಲಾಗಿದೆ. ಜನವರಿ.26ರಂದು ನಡೆದ ಟ್ರ್ಯಾಕ್ಟರ್ ಜಾಥಾ ಸಂದರ್ಭದಲ್ಲಿನ ಹಿಂಸಾಚಾರದಿಂದ ಎಚ್ಚೆತ್ತುಕೊಂಡಿರುವ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಸುತ್ತಮುತ್ತಲಿನ ಗಡಿ ಪ್ರದೇಶದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಘಾಜಿಪುರ್ ಗಡಿ ಪ್ರದೇಶದಲ್ಲಿ ಬ್ಯಾರಿಕೇಡ್ ವ್ಯವಸ್ಥೆ

ಘಾಜಿಪುರ್ ಗಡಿ ಪ್ರದೇಶದಲ್ಲಿ ಬ್ಯಾರಿಕೇಡ್ ವ್ಯವಸ್ಥೆ

ಉತ್ತರ ಪ್ರದೇಶ ಮತ್ತು ದೆಹಲಿಯ ಗಡಿ ಪ್ರದೇಶದಲ್ಲಿರುವ ಘಾಜಿಪುರ್ ಗಡಿಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಪ್ರಾದೇಶಿಕ ಸಶಸ್ತ್ರ ಸಂರಚನೆ ಮತ್ತು ರಾಪಿಡ್ ಆಕ್ಟನ್ ಫೋರ್ಸ್ ಮತ್ತು ಪೊಲೀಸರು ಸೇರಿದಂತೆ ಸಾವಿರಾರು ಭದ್ರತಾ ಸಿಬ್ಬಂದಿಯನ್ನು ಘಾಜಿಪುರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಿಂದ ಭಾರತೀಯ ಕಿಸಾನ್ ಒಕ್ಕೂಟದ ರೈತರು ಇದೇ ಘಾಜಿಪುರ್ ಗಡಿ ಪ್ರದೇಶಕ್ಕೆ ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆ ಸ್ಥಳದಲ್ಲಿ ಪರಿಸ್ಥಿತಿ ಮೇಲೆ ನಿಗಾ ವಹಿಸುವುದಕ್ಕಾಗಿ ಡ್ರೋನ್ ಕ್ಯಾಮರಾಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೆದ್ದಾರಿಗೆ ಅಡ್ಡಲಾಗಿ ರೈತರನ್ನು ತಡೆಯುವ ನಿಟ್ಟಿನಲ್ಲಿ ಸಾಲು ಸಾಲಾಗಿ ವಿವಿಧ ಹಂತಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಒಂದರ ಮುಂದೆ ಒಂದರಂತೆ ನಾಲ್ಕೈದು ಸಾಲಿನಲ್ಲಿ ಬ್ಯಾರಿಕೇಡ್ ಹಾಕಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

ರೈತರನ್ನು ತಡೆಯಲು ತಂತಿಯ ಬೇಲಿ

ರೈತರನ್ನು ತಡೆಯಲು ತಂತಿಯ ಬೇಲಿ

ಹರಿಯಾಣ ಮತ್ತು ದೆಹಲಿ ಟಿಕ್ರಿ ಗಡಿ ಪ್ರದೇಶದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಸೀಮೆಂಟ್ ರಸ್ತೆಯ ಮೇಲೆ ರಸ್ತೆಗೆ ತೆರೆದುಕೊಂಡಿರುವಂತೆ ಕಬ್ಬಿಣದ ಸರಳುಗಳನ್ನು ಹಾಕಲಾಗಿದೆ. ಈ ರಸ್ತೆಯ ಮೇಲೆ ವಾಹನ ಸಂಚರಿಸುವುದಕ್ಕೆ ಸಾಧ್ಯವಿಲ್ಲದ ರೀತಿಯಲ್ಲಿ ರಸ್ತೆಯನ್ನು ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದೆ. ಅಲ್ಲದೇ, ಗಡಿಯಲ್ಲಿ ತಂತಿ ಬೇಲಿಗಳನ್ನು ಸಹ ಹಾಕಲಾಗಿದೆ.

ಸೀಮೆಂಟ್ ರಸ್ತೆಯಲ್ಲಿ ತಲೆ ಎತ್ತಿದ ಮೊಳೆಗಳು

ಸೀಮೆಂಟ್ ರಸ್ತೆಯಲ್ಲಿ ತಲೆ ಎತ್ತಿದ ಮೊಳೆಗಳು

ದೆಹಲಿ ಪೊಲೀಸ್ ಸಿಬ್ಬಂದಿ ಭದ್ರತೆ ನಡುವೆ ಫೆಬ್ರವರಿ.01ರ ಸೋಮವಾರ ಸಿಮೆಂಟ್ ಗೋಡೆಗಳ ನಿರ್ಮಾಣ ಮಾಡಲಾಯಿತು. ಮುಖ್ಯ ಹೆದ್ದಾರಿಯ ಸಮೀಪದಲ್ಲೇ ಸಿಮೆಂಟ್ ತಡೆಗೋಡೆಗಳು ಮತ್ತು ಅದರ ನಡುವೆ ಕಬ್ಬಿಣದ ಸರಳುಗಳನ್ನು ಕೊಕ್ಕೆ ರೀತಿಯಲ್ಲಿ ಹಾಕಲಾಗಿದೆ. ಇನ್ನೊಂದು ಕಡೆಯಲ್ಲಿ ದೆಹಲಿ ಮತ್ತು ಹರಿಯಾಣಕ್ಕೆ ಹೊಂದಿಕೊಂಡಿರುವ ಸಿಂಘು ಗಡಿಯನ್ನು ತಾತ್ಕಾಲಿಕ ಸೀಮೆಂಟ್ ತಡೆಗೋಡೆಗಳ ಮೂಲಕ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಿಂಘು ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಹೆದ್ದಾರಿಯಲ್ಲಿ ತಾತ್ಕಾಲಿಕ ಗೋಡೆಯನ್ನು ನಿರ್ಮಿಸಲಾಗಿದೆ. ಇದರ ಹೊರತಾಗಿ ಹೆದ್ದಾರಿಯಿಂದ ಸ್ವಲ್ಪ ಒಳಭಾಗದ ಬೀದಿಗೆ ಅಡ್ಡಲಾಗಿ ಸಣ್ಣ ಕಂದಕಗಳನ್ನು ಸಹ ಅಗೆದು ಹಾಕಲಾಗಿದೆ. ಇದಲ್ಲದೇ ಎರಡೂ ಬದಿಗಳಲ್ಲಿ ಸಿಮೆಂಟ್ ಬ್ಯಾರಿಕೇಡ್‌ಗಳನ್ನು ಹಾಕಲಾಯಿತು.

English summary
Farmers Announce Chakka Jam On Feb 6:Trains Diverted, Roads Blocked; All You Need To Know in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X