ರೈತರ ಪ್ರತಿಭಟನೆ 9ನೇ ದಿನಕ್ಕೆ; 6ನೇ ಸುತ್ತಿನ ಮಾತುಕತೆ ಡಿ.9ಕ್ಕೆ

ನವದೆಹಲಿ, ಡಿಸೆಂಬರ್ 6: ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ಜೊತೆಗಿನ 5ನೇ ಸುತ್ತಿನ ಮಾತುಕತೆ ವಿಫಲವಾಗಿದೆ. ರೈತರ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಡಿಸೆಂಬರ್ 8ರಂದು ಭಾರತ್ ಬಂದ್‌ಗೆ ಸಹ ಕರೆ ನೀಡಲಾಗಿದೆ.

ಉತ್ತರ ಪ್ರದೇಶ-ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸೆಂಬರ್ 9ರಂದು ರೈತರ ಜೊತೆ 6ನೇ ಸುತ್ತಿನ ಮಾತುಕತೆಗೆ ಕೇಂದ್ರ ಸರ್ಕಾರ ದಿನಾಂಕ ನಿಗದಿ ಮಾಡಿದೆ.

Farmers Protest Enteres 9th Day

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತೀರೋ?, ಇಲ್ಲವೋ? ಎಂಬುದಕ್ಕೆ ಹೌದು ಅಥವ ಇಲ್ಲ ಎಂಬ ಉತ್ತರವನ್ನು ಮಾತ್ರ ನೀಡಬೇಕು ಎಂದು ರೈತರು ಪಟ್ಟು ಹಿಡಿದರು. ಇದರಿಂದಾಗಿ ಶನಿವಾರ ನಡೆದ ಮಾತುಕತೆ ವಿಫಲವಾಗಿದೆ.

ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಕುರಿತು ಸಮಗ್ರವಾದ ಚರ್ಚೆ ಆಗಬೇಕಿದೆ. ಅದಕ್ಕೆ ಸ್ವಲ್ಪ ಸಮಯ ಬೇಕು ಎಂದು ಸರ್ಕಾರದ ಪ್ರತಿನಿಧಿಗಳು ಹೇಳಿದ್ದಾರೆ. ಆದ್ದರಿಂದ, ರೈತರ ಜೊತೆಗಿನ ಮಾತುಕತೆ ವಿಫಲವಾಗಿದ್ದು, ಡಿಸೆಂಬರ್ 9ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

ಡಿಸೆಂಬರ್ 8ರಂದು ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ರೈತರ ಜೊತೆಗಿನ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಭಾರತ್ ಬಂದ್ ನಡೆಯುವುದು ಬಹುತೇಕ ಖಚಿತವಾಗಿದೆ. ಎಡಪಕ್ಷಗಳು ಸಹ ಭಾರತ್ ಬಂದ್‌ಗೆ ಬೆಂಬಲ ನೀಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+