ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Farmers Protest Live Updates: ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ಗಲಭೆ; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

|
Google Oneindia Kannada News

ನವದೆಹಲಿ, ಜನವರಿ 26: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರ ಹೋರಾಟ 63ನೇ ದಿನಕ್ಕೆ ಕಾಲಿಟ್ಟಿದೆ. ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ರೈತರು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ಜಾಥಾ ಗಲಭೆಗೆ ತಿರುಗಿದೆ.

ದೆಹಲಿ ಮತ್ತು ಹರ್ಯಾಣ ನಡುವೆ ಇರುವ ಸಿಂಘು ಗಡಿಯಲ್ಲಿ ದೊಡ್ಡಮಟ್ಟದಲ್ಲಿ ಗದ್ದಲ ಉಂಟಾಗಿದೆ. ಜತೆಗೆ ದೆಹಲಿಯ ಪಶ್ಚಿಮ ಭಾಗದಲ್ಲಿನ ಟಿಕ್ರಿ ಗಡಿಯಲ್ಲಿಯೂ ಇದೇ ಉದ್ವಿಗ್ವ ಪರಿಸ್ಥಿತಿ ಉಂಟಾಗಿದ್ದು, ರೈತರು ಟ್ರ್ಯಾಕ್ಟರ್ ಗಳೊಂದಿಗೆ ರಾಜಧಾನಿಗೆ ನುಗ್ಗಿದ್ದಾರೆ. ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವ ಪಥಸಂಚಲನ ಮುಗಿದ ಬಳಿಕ ಮಧ್ಯಾಹ್ನ 12 ಗಂಟೆ ನಂತರ ರೈತರ ಟ್ರ್ಯಾಕ್ಟರ್ ಮೆರವಣಿಗೆಗೆ ಅನುಮತಿ ನೀಡಲಾಗಿತ್ತು. ಆದರೆ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೇ ಗಡಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ರೈತರು ಸೇರಿದ್ದರು.

ಗಣತಂತ್ರ ದಿನದ ಪರೇಡ್ ಮುಗಿದ ನಂತರ ದೆಹಲಿ ಹೊರಭಾಗದಲ್ಲಿ ರೈತರಿಗೆ ಟ್ರ್ಯಾಕ್ಟರ್ ಪರೇಡ್ ನಡೆಸಲು ಪೊಲೀಸರು ಷರತ್ತುಬದ್ದ ಅನುಮತಿ ನೀಡಿದ್ದರು. ಆದರೆ, ಹನ್ನೊಂದು ಗಂಟೆಯಾದರೂ ಪರೇಡ್ ಆರಂಭಿಸಲು ಪೊಲೀಸರು ಅನುಮತಿ ನೀಡಲಿಲ್ಲ. ಈ ಕಾರಣಕ್ಕೆ ರೈತರು ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.

Farmers Protest Live Updates, News in Kannada

ಕೇಂದ್ರ ಪರಿಚಯಿಸಿರುವ ಕೃಷಿ ಮಾರುಕಟ್ಟೆ ಕಾಯ್ದೆ, ಬೆಲೆ ಭರವಸೆಗಳ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ಸರಕು (ತಿದ್ದುಪಡಿ) ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ನವೆಂಬರ್ 26ರಿಂದಲೂ ದೆಹಲಿ ಗಡಿಗಳಲ್ಲಿ ಸುಮಾರು 40 ರೈತ ಸಂಘಟನೆಯ ರೈತ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ...

Newest FirstOldest First
11:55 PM, 26 Jan

ಕೆಂಪುಕೋಟೆಯಲ್ಲಿ ಸಿಲುಕಿದ್ದ 300 ಕಲಾವಿದರನ್ನು ರಕ್ಷಿಸಿದ ಪೊಲೀಸರು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಕೆಂಪುಕೋಟೆಗೆ ಪ್ರತಿಭಟನಾಕಾರರು ನುಗ್ಗಿದ ವೇಳೆ ಸಾಕಷ್ಟು ಆತಂಕ ಮನೆ ಮಾಡಿತ್ತು.
11:46 PM, 26 Jan

ದೆಹಲಿ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರದ ನೀತಿಯೇ ಕಾರಣ: ದೀದಿ

ಕೃಷಿ ಕಾಯ್ದೆಗಳ ವಿರುದ್ಧದದ ರೈತರ ಹೋರಾಟ ಹಿಂಸಾತ್ಮಕ ರೂಪ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರದ ವರ್ತನೆಯೇ ನೇರ ಕಾರಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
11:44 PM, 26 Jan

Video: ಭಯ ಹುಟ್ಟಿಸುತ್ತೆ ಕೆಂಪುಕೋಟೆಯಲ್ಲಿ ನಡೆದ ಈ ದೃಶ್ಯ!

ಭಾರತದ 72ನೇ ಗಣರಾಜ್ಯೋತ್ಸವದ ದಿನವೇ ದೆಹಲಿಯ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ನಡೆದುಕೊಂಡ ರೀತಿಯು ಎಂಥವರನ್ನೂ ಬೆಚ್ಚಿ ಬೀಳಿಸುವಂತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
11:36 PM, 26 Jan

ರೈತ ದಂಗೆ: ದೆಹಲಿಯಲ್ಲಿ 18 ಪೊಲೀಸರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ರೈತರ ಆಕ್ರೋಶದ ಕಿಚ್ಚಿಗೆ ರಾಷ್ಟ್ರ ರಾಜಧಾನಿ ಹೊತ್ತಿ ಉರಿದಿದೆ. 72ನೇ ಗಣರಾಜ್ಯೋತ್ಸವ ದಿನವು ಕಹಿ ನೆನಪಿಗೆ ಸಾಕ್ಷಿಯಾಗುವಂತಾ ಘಟನೆಯೊಂದು ನವದೆಹಲಿಯಲ್ಲಿ ನಡೆದು ಹೋಗಿದೆ.
11:23 PM, 26 Jan

72ನೇ ಗಣರಾಜ್ಯೋತ್ಸವ ದಿನದ ಹಿನ್ನೆಲೆ ಸಾಂಸ್ಕೃತಿ ಕಾರ್ಯಕ್ರಮಗಳಿಗಾಗಿ ದೆಹಲಿಗೆ ತೆರಳಿದ 300ಕ್ಕೂ ಹೆಚ್ಚು ಕಲಾವಿದರು ಕೆಂಪುಕೋಟೆಯಲ್ಲಿ ಸಿಲುಕಿಕೊಂಡಿದ್ದರು. ತೀವ್ರ ಆತಂಕದಲ್ಲಿದ್ದ ಕಲಾವಿದರನ್ನು ದೆಹಲಿ ಪೊಲೀಸರು ರಕ್ಷಿಸಿದ್ದಾರೆ.
11:20 PM, 26 Jan

ದೆಹಲಿಯಲ್ಲಿ ರೈತರ ಪ್ರತಿಭಟನೆ: ನಳಿನ್ ಕುಮಾರ್ ಕಟೀಲ್ ಸ್ಪೋಟಕ ಹೇಳಿಕೆ!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗಿದೆ. ಕಳೆದ 60 ದಿನಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರು, ಇಂದು ಸಹನೆ ಕಳೆದುಕೊಂಡಿದ್ದರು. ದೆಹಲಿಯಲ್ಲಿ ಪೊಲೀಸರೊಂದಿಗೆ ಘರ್ಷಣೆಯನ್ನೂ ರೈತರು ಮಾಡಿದರು. ಮತ್ತೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ಮಾಡಿದ್ದಾರೆ.
11:16 PM, 26 Jan

ಪ್ರಧಾನಿ, ಗೃಹ ಸಚಿವರೇ ಎಲ್ಲಿ ಅಡಗಿ ಕೂತಿದ್ದೀರಾ? 'ರಿಸೈನ್ ಅಮಿತ್ ಶಾ' ಫುಲ್ ಟ್ರೆಂಡಿಂಗ್

ನವದೆಹಲಿಯಲ್ಲಿ ಕಿಸಾನ್ ಗಣತಂತ್ರ ಪೆರೇಡ್ ನಲ್ಲಿ ನಡೆದ ಹಿಂಸಾಚಾರ ತಹಬಂದಿಗೆ ತರಲಾಗದ ಕೇಂದ್ರ ಗೃಹಖಾತೆ ಮತ್ತು ಸಚಿವ ಅಮಿತ್ ಶಾ, ಆ ಹುದ್ದೆಯಲ್ಲಿ ಇದ್ದರೆಷ್ಟು, ಬಿಟ್ಟರೆಷ್ಟು ಅವರು ರಾಜೀನಾಮೆ ನೀಡಬೇಕೆಂದು ಟ್ವಿಟ್ಟಿಗರು ಆಗ್ರಹಿಸಿದ್ದಾರೆ.
Advertisement
11:09 PM, 26 Jan

Video: ದೆಹಲಿಯಲ್ಲಿ ರೈತನ ಸಾವಿನ ಭಯಾನಕ ದೃಶ್ಯ!

ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಪ್ರತಿಭಟನೆಯು ನವದೆಹಲಿಯನ್ನು ರಣರಂಗವಾಗುವಂತೆ ಮಾಡಿತು. ಭಾರತದ 72ನೇ ಗಣರಾಜ್ಯೋತ್ಸವದ ದಿನವೇ ರೈತರು ಮತ್ತು ಪೊಲೀಸರ ನಡುವೆ ನಡೆದ ಸಂಘರ್ಷದ ಮಧ್ಯೆ ರೈತರೊಬ್ಬರು ಮೃತಪಟ್ಟಿದ್ದಾರೆ.
11:08 PM, 26 Jan

ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮುಖವಾಡ ಕಳಚಿತು

ಕೇಂದ್ರದ ನೂತನ ಕೃಷಿ ಕಾಯ್ದೆ ವಿರುದ್ದ ನವದೆಹಲಿಯಲ್ಲಿ ನಡೆಯುತ್ತಿರುವ ಕಿಸಾನ್ ಗಣತಂತ್ರ ಪೆರೇಡ್ ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಒಬ್ಬ ಹೋರಾಟಗಾರ ಪ್ರತಿಭಟನೆಯಲ್ಲಿ ಮೃತ ಪಟ್ಟಿದ್ದರೆ, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ.
10:28 PM, 26 Jan

ದೆಹಲಿಯ ಕೆಂಪು ಕೋಟೆ ಮೇಲೆ ಹಾರಿದ್ದು ಸಿಖ್ಖರ ಧಾರ್ಮಿಕ ಧ್ವಜ

ದೇಶದ ರಾಜಧಾನಿಯಲ್ಲಿ ಗಣರಾಜ್ಯೋತ್ಸವದ ಪರೇಡ್ ನಂತರ ನಿಯೋಜನೆಗೊಂಡಿದ್ದ ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ಗಲಭೆ ಉಂಟಾಗಿದ್ದು, ಬ್ಯಾರಿಕೇಡ್ ಗಳನ್ನು ಒಡೆದು ನಗರದ ಒಳನುಗ್ಗಿದ ರೈತರು ಕೆಂಪು ಕೋಟೆಯಲ್ಲಿ ಅಂತಿಮವಾಗಿ ಬಾವುಟ ಹಾರಿಸಿದ್ದರು.
10:23 PM, 26 Jan

ಕೆಂಪುಕೋಟೆ ಮೇಲೆ ರೈತಧ್ವಜ ಹಾರುವ ಮೊದಲು ನಡೆದಿದ್ದು ಏನು?

ಭಾರತದ 72ನೇ ಗಣರಾಜ್ಯೋತ್ಸವದ ಸಂಭ್ರಮದ ನಡುವೆ ರೈತರ ದಂಗೆಗೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಯಿತು. ತ್ರಿವರ್ಣಧ್ವಜ ಹಾರಾಡುವ ನವದೆಹಲಿ ಕೆಂಪುಕೋಟೆ ಮೇಲೆ ರೈತರು ನಿಶಾನ್ ಸಾಹೇಬ್ ಧ್ವಜವನ್ನು ಹಾರಿಸಿದರು.
10:13 PM, 26 Jan

ನಿಜವಾದ ರೈತರು ದೆಹಲಿ ಬಿಟ್ಟು ಗಡಿಗೆ ಬನ್ನಿ: ಅಮರಿಂದರ್ ಸಿಂಗ್

ನಿಜವಾದ ರೈತರು ಈಗಲೇ ದೆಹಲಿ ಬಿಟ್ಟು ಗಡಿಗೆ ಬನ್ನಿ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.
Advertisement
10:08 PM, 26 Jan

ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ಹಿಂಸಾಚಾರ; ಕೇಂದ್ರದ ನಡೆ ಖಂಡಿಸಿದ ಎಎಪಿ

ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಪರೇಡ್ ನಂತರ ನಡೆಯಬೇಕಿದ್ದ ರೈತರ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟಿದೆ. ಜಾಥಾ ವೇಳೆ ಗಲಭೆ ನಡೆದಿದ್ದು, ಗಣತಂತ್ರ ದಿನದಂದು ದೇಶದ ರಾಜಧಾನಿಯಲ್ಲಿ ಗಲಭೆ ನಡೆದಿರುವುದನ್ನು ಹಲವು ಪಕ್ಷಗಳು ಖಂಡಿಸಿವೆ. ಹಿಂಸಾಚಾರವನ್ನು ಎಂದಿಗೂ ನಾವು ಬೆಂಬಲಿಸುವುದಿಲ್ಲ ಎಂದು ತಿಳಿಸಿವೆ.
9:07 PM, 26 Jan

ದೆಹಲಿಯಲ್ಲಿ ಸಂಚಾರ ವ್ಯವಸ್ಥೆ ಈಗ ಸಾಮಾನ್ಯ ಸ್ಥಿತಿಗೆ ಬಂದಿದೆ: ದೆಹಲಿ ಪೊಲೀಸ್
8:32 PM, 26 Jan

ಶಾಸ್ತ್ರಿ ಪಾರ್ಕ್‌ನಿಂದ ಐಎಸ್‌ಬಿಟಿ, ಮುಕರ್ಬಾ ಚೌಕ್‌ನಿಂದ ಸಿಂಘು ಬಾರ್ಡರ್, ಲೋನಿ ಬಾರ್ಡರ್, ಚಿಂತಾಮಣಿ ಚೌಕ್, ಬರಾಪುಲಾ ಮತ್ತು ಡಿಎನ್‌ಡಿವರೆಗೆ ಸಂಚಾರ ಸಂಚಾರ ಈಗ ಸಾಮಾನ್ಯವಾಗಿದೆ: ದೆಹಲಿ ಸಂಚಾರ ಪೊಲೀಸ್
8:26 PM, 26 Jan

ದೆಹಲಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ರೈತರು ಹಲ್ಲೆ ನಡೆಸಿದ್ದರಿಂದ 83 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ: ದೆಹಲಿ ಪೊಲೀಸ್
8:24 PM, 26 Jan

ದೆಹಲಿಯಲ್ಲಿ ಸಹಜ ಸ್ಥಿತಿಗೆ ಮರಳಿದ ಗ್ರೇ ಮೆಟ್ರೋ ಮಾರ್ಗ, ಸಂಚಾರ ಆರಂಭ

ದೆಹಲಿಯಲ್ಲಿ ರೈತರ ಪ್ರತಿಭಟನೆಯಿಂದಾಗಿ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಗ್ರೇ ಮಾರ್ಗದ ಮೆಟ್ರೋ ಸಂಚಾರ ಆರಂಭಗೊಂಡಿದೆ ಎಂದು ಮೆಟ್ರೋ ಕಾರ್ಪೊರೇಷನ್ ತಿಳಿಸಿದೆ.
8:04 PM, 26 Jan

ವಿಕಾಸ್ ಮಾರ್ಗ, ದೆಹಲಿ ಗೇಟ್ ಮತ್ತು ಐ.ಎಸ್.ಬಿ.ಟಿ ಆನಂದ್ ವಿಹಾರ್ ಉತ್ತರ ಪ್ರದೇಶದ ಕಡೆಗೆ ಸಾಗುವ ಸಂಚಾರ ಈಗ ಸಾಮಾನ್ಯವಾಗಿದೆ: ದೆಹಲಿ ಸಂಚಾರ ಪೊಲೀಸ್
7:58 PM, 26 Jan

ಬುಧವಾರ ಸಂಜೆ 5 ಗಂಟೆಯವರೆಗೆ ಹರಿಯಾಣದ ಸೋನಿಪತ್, ಪಾಲ್ವಾಲ್ ಮತ್ತು ಜಜ್ಜರ್ ಜಿಲ್ಲೆಗಳಲ್ಲಿ ಇಂಟರ್ ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು: ಹರಿಯಾಣ ಸರ್ಕಾರ
7:54 PM, 26 Jan

ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಇಂದು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು "ಹೈ ಅಲರ್ಟ್'ನಲ್ಲಿ ಉಳಿಯುವಂತೆ ನಿರ್ದೇಶಿಸಿದ್ದಾರೆ: ಹರಿಯಾಣ ಸಿಎಂಒ
7:37 PM, 26 Jan

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕಿಸಾನ್ ಗಣರಾಜ್ಯೋತ್ಸವದ ಮೆರವಣಿಗೆಯನ್ನು ತಕ್ಷಣದಿಂದ ಜಾರಿಗೆ ತಂದಿದೆ ಮತ್ತು ಭಾಗವಹಿಸಿದ ಎಲ್ಲರಿಗೂ ತಕ್ಷಣವೇ ತಮ್ಮ ಪ್ರತಿಭಟನಾ ಸ್ಥಳಗಳಿಗೆ ಮರಳುವಂತೆ ಮನವಿ ಮಾಡಿದೆ. ಚಳುವಳಿ ಶಾಂತಿಯುತವಾಗಿ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಘೋಷಿಸಿದೆ. ಮತ್ತು ಮುಂದಿನ ಹಂತಗಳನ್ನು ಚರ್ಚಿಸಲಾಗುವುದು ಮತ್ತು ಶೀಘ್ರದಲ್ಲೇ ನಿರ್ಧರಿಸಲಾಗುವುದು: ಎಸ್‌ಕೆಎಂ
7:27 PM, 26 Jan

ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ಸಂಭವಿಸಿದ ಗಲಭೆ ಸಂದರ್ಭ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ದೆಹಲಿ ಜಂಟಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.
7:07 PM, 26 Jan

ರಾಷ್ಟ್ರದ ಘನತೆಗೆ ಕುಂದು ತರುವ ಯಾವುದೇ ಕೆಲಸ ಮಾಡಿಲ್ಲ; ರೈತ ಸಂಘಟನೆ

ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ನಡೆದ ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿರುವ ರೈತ ಸಂಘಟನೆಗಳು, ನಮ್ಮ ಶಾಂತಿಯುತ ಪ್ರತಿಭಟನೆಯಲ್ಲಿ ಕೆಲವು ಸಮಾಜ ವಿರೋಧಿ ಶಕ್ತಿಗಳು ಒಳನುಸುಳಿವೆ ಎಂದು ಆರೋಪಿಸಿವೆ.
7:06 PM, 26 Jan

ಕೆಂಪು ಕೋಟೆ ಮೇಲೆ ಹಾರಾಡಿದ ಧ್ವಜ ಯಾವುದು? ಕೇಂದ್ರದ ಆರೋಪ

ತ್ಯೇಕ ಖಲಿಸ್ತಾನಿ ರಾಜ್ಯಕ್ಕೆ ಬೇಡಿಕೆ ಇಟ್ಟಿದ್ದ ನಿಷೇಧಿತ ಸಂಘಟನೆ ಸಿಖ್ ಫಾರ್ ಜಸ್ಟೀಸ್, ಪ್ರತಿಭಟನೆ ವೇಳೆ ದೆಹಲಿಯ ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದ್ದಕ್ಕೆ ಪಂಜಾಬ್ ರೈತನಿಗೆ ಬಹುಮಾನ ಘೋಷಿಸಿದ್ದು, ಇದರಲ್ಲಿ ಖಲಿಸ್ತಾನಿಗಳ ಕೈವಾಡವಿದೆ ಎಂದು ಕೇಂದ್ರ ಆರೋಪಿಸಿದೆ.
7:03 PM, 26 Jan

ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ದೆಹಲಿಯ ಹಲವು ಪ್ರದೇಶದಲ್ಲಿ ಇಂದು ಗಲಭೆ ನಡೆದಿರುವ ಕಾರಣ ಹರಿಯಾಣ ಡಿಜಿಪಿ ಮನೋಜ್ ಯಾದವ್, ಹೈ ಅಲರ್ಟ್ ಘೋಷಿಸಿದ್ದು, ಎಲ್ಲಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ನಿಗಾ ವಹಿಸುವಂತೆ ನಿರ್ದೇಶಿಸಿದ್ದಾರೆ.
6:41 PM, 26 Jan

ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು ಐಟಿಒ ಪ್ರದೇಶದಲ್ಲಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ.
6:36 PM, 26 Jan

ದೆಹಲಿ: ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸಾವು

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ರೈತ ಮೃತಪಟ್ಟಿದ್ದಾರೆ. ಪ್ರತಿಭಟನಾ ಮೆರವಣಿಗೆ ವೇಳೆ ಘಟನೆ ನಡೆದಿದೆ.
6:18 PM, 26 Jan

ಟ್ರ್ಯಾಕ್ಟರ್ ಜಾಥಾ ಸಮಯ ಹಾಗೂ ಮಾರ್ಗಗಳನ್ನು ಅಂತಿಮಗೊಳಿಸುವ ಮುನ್ನ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿತ್ತು. ಆದರೆ ರೈತರು ಅವಧಿಗೆ ಮುನ್ನವೇ, ತಮ್ಮ ಮಾರ್ಗಗಳನ್ನು ಬಿಟ್ಟು ಟ್ರ್ಯಾಕ್ಟರ್ ಚಲಿಸಲು ಮುಂದಾದರು. ಇದು ಹಿಂಸಾಚಾರಕ್ಕೆ ಎಡೆಮಾಡಿಕೊಟ್ಟಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಹೇಳಿದ್ದಾರೆ.
6:16 PM, 26 Jan

ಕೆಲವು ಕಡೆಗಳಲ್ಲಿ ಪ್ರತಿಭಟನಾಕಾರರು ಹಿಂಸಾಚಾರ ನಡೆಸಿದ್ದಾರೆ. ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿಯಾಗಿದೆ. ರೈತರಿಗೆ ತಮ್ಮ ಸ್ಥಳಗಳಿಗೆ ಹಿಂದಿರುಗಿ ಶಾಂತಿ ಕಾಪಾಡಲು ಕೇಳಿಕೊಳ್ಳುತ್ತೇವೆ ಎಂದು ದೆಹಲಿ ಪೊಲೀಸ್ ಅಧಿಕಾರಿ ಈಶ್ ಸಿಂಘಾಲ್ ಮನವಿ ಮಾಡಿದ್ದಾರೆ.
6:14 PM, 26 Jan

ಪಂಜಾಬ್, ಹರಿಯಾಣ, ಉತ್ತರ ಪ್ರದೇಶದದ ರೈತರು ದೆಹಲಿಯಲ್ಲಿ ಶಿಸ್ತಿನಲ್ಲಿಯೇ ಪ್ರತಿಭಟನೆ ಮಾಡುತ್ತಿದ್ದರು. ಆದರೆ ಸರ್ಕಾರವೇ ಅವರನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಆರೋಪಿಸಿದ್ದಾರೆ. ಸರ್ಕಾರ ಈಗಲಾದರೂ ಉತ್ತಮ ನಿರ್ಧಾರ ತೆಗೆದುಕೊಳ್ಳಲಿ ಎಂದು ಆಗ್ರಹಿಸಿದ್ದಾರೆ.
READ MORE

English summary
Farmers' Protest LIVE Updates in Kannada: The farmers agitation has entered the 63rd day. Check out the live updates, breaking news, images and videos here
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X