Sugarcane Price Hike: ಕಬ್ಬಿನ ಬೆಲೆ ಹೆಚ್ಚಳ 'ಐತಿಹಾಸಿಕ' ಎಂದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, ಫೆಬ್ರವರಿ.22: ರೈತರ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರೊಬ್ಬರು ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ. ಫೆಬ್ರವರಿ 21 ರಂದು ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಘರ್ಷಣೆಯಲ್ಲಿ ಖಾನೌರಿ ಗಡಿ ಪ್ರದೇಶದಲ್ಲಿ ದುರಂತ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ರೈತ ಮುಖಂಡರು 'ದೆಹಲಿ ಚಲೋ' ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ.
ಘಟನೆ ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬಿನ ಬೆಲೆ ಹೆಚ್ಚಿಸಿ ಘೋಷಣೆ ಮಾಡಿದೆ. ಮುಂಬರುವ ಕಬ್ಬು ಖರೀದಿ ಹಂಗಾಮಿನಲ್ಲಿ ಖರೀದಿ ದರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಇದರ ನಂತರ ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಹೇಳಿಕೊಂಡಿದ್ದಾರೆ.

ರೈತರ ಕಲ್ಯಾಣಕ್ಕಾಗಿ ತಮ್ಮ ಸರ್ಕಾರ ತೆಗೆದುಕೊಂಡಿರುವ ಪ್ರತಿಜ್ಞೆಯನ್ನು ಈಡೇರಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಒತ್ತಿ ಹೇಳಿದ್ದಾರೆ. ಕಬ್ಬಿನ ಬೆಲೆಯಲ್ಲಿ "ಐತಿಹಾಸಿಕ" ಹೆಚ್ಚಳವು ಅಂತಹ ಪ್ರಯತ್ನಗಳ ಒಂದು ಭಾಗವಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ಕೋಟ್ಯಂತರ ಕಬ್ಬು ರೈತರಿಗೆ ಅನುಕೂಲವಾಗಲಿದೆ ಎಂದು ತಮ್ಮ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.
ಬುಧವಾರ ಕೇಂದ್ರ ಸಚಿವ ಸಂಪುಟ ಕೈಗೊಂಡ ಹಲವಾರು ನಿರ್ಧಾರಗಳ ಬಗ್ಗೆ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯು, ಮುಂದಿನ ಕಬ್ಬು ಹಂಗಾಮಿನ ವೇಳೆ ಅಂದರೆ 2024ರ ಅಕ್ಟೋಬರ್ 1ರಿಂದ 2025 ಸೆಪ್ಟಂಬರ್ 30ರ ಅವಧಿಗೆ ಕಬ್ಬು ಖರೀದಿ ದರವನ್ನು ಕ್ವಿಂಟಲ್‌ಗೆ 315 ರೂಪಾಯಿಯಿಂದ 340 ರೂಪಾಯಿಗೆ ಹೆಚ್ಚಿಸಲಾಗಿದೆ. ಅಂದರೆ ಪ್ರತಿ ಕ್ವಿಂಟಲ್‌ಗೆ 25 ರೂಪಾಯಿ ಹೆಚ್ಚಿಸಿದೆ.

"ಹೊಸ ಎಫ್‌ಆರ್‌ಪಿಯು ಕಬ್ಬು ರೈತರ ಏಳಿಗೆಯನ್ನು ಖಚಿತಪಡಿಸುತ್ತದೆ. ಭಾರತವು ಈಗಾಗಲೇ ವಿಶ್ವದಲ್ಲಿಯೇ ಕಬ್ಬಿನ ಅತ್ಯಧಿಕ ಬೆಲೆಯನ್ನು ಪಾವತಿಸುತ್ತಿದೆ ಎಂಬುದು ಗಮನಾರ್ಹವಾಗಿದೆ.ಅದರ ಹೊರತಾಗಿಯೂ ಸರ್ಕಾರವು ದೇಶೀಯ ಗ್ರಾಹಕರಿಗೆ ವಿಶ್ವದ ಅಗ್ಗದ ಸಕ್ಕರೆಯನ್ನು ಖಾತ್ರಿಪಡಿಸುತ್ತಿದೆ" ಎಂದಿದ್ದಾರೆ.
ರೈತರ ಮನವೊಲಿಸಲು ಬಿಜೆಪಿ ಹೊಸ ಕಾರ್ಯಕ್ರಮ
ಭಾರತೀಯ ಜನತಾ ಪಕ್ಷವು "ಗ್ರಾಮ ಪರಿಕ್ರಮ ಯಾತ್ರೆ" ಕಾರ್ಯಕ್ರಮದ ಮೂಲಕ ದೇಶಾದ್ಯಂತ 1.25 ಲಕ್ಷ ಹಳ್ಳಿಗಳ ರೈತರೊಂದಿಗೆ ಮಹತ್ವದ ಸಂವಾದ ನಡೆಸುತ್ತಿದೆ. ಈ ಕಾರ್ಯಕ್ರಮವು ಫೆಬ್ರವರಿ 12 ರಂದು ಪ್ರಾರಂಭವಾಗಿದ್ದು, ಮಾರ್ಚ್ 12 ರವರೆಗೆ ಮುಂದುವರಿಯುತ್ತದೆ. ಅಂದರೆ ಸಂಪೂರ್ಣ ಕಾರ್ಯಕ್ರಮವು ಒಂದು ತಿಂಗಳವರೆಗೆ ನಡೆಯುತ್ತದೆ.
ಲೋಕಸಭೆ ಚುನಾವಣೆಗೂ ಮುನ್ನ ರೈತರನ್ನು ಓಲೈಸಲು ಭಾರತೀಯ ಜನತಾ ಪಕ್ಷ ಸಂಪೂರ್ಣ ಸಿದ್ಧತೆ ನಡೆಸಿದ್ದು, ಅದಕ್ಕಾಗಿ ರೈತರೊಂದಿಗೆ ಸಂವಾದ ನಡೆಸಲು ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೆ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ಮೋದಿ ಸರ್ಕಾರದ ಹಳೆಯ ಭರವಸೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿವೆ.
ಸಂಯುಕ್ತ ಕಿಸಾನ್ ಮೋರ್ಚಾ ಸಭೆ
ಫೆಬ್ರವರಿ 21 ರಂದು ನಡೆದ ದುರಂತ ಘಟನೆ ನಂತರ ದೆಹಲಿ ಚಲೋ ಸ್ಥಗಿತವಾಗಿದ್ದು, ಈ ಬಗ್ಗೆ ರೈತ ನಾಯಕರು ಇಂದು ಸಭೆ ನಡೆಸುತ್ತಿದ್ದಾರೆ. 2020-21ರಲ್ಲಿ ರದ್ದಾದ ಮೂರು ಕೃಷಿ ಕಾನೂನುಗಳ ವಿರುದ್ಧ ಆಂದೋಲನದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಗಳ ಪರಿಸ್ಥಿತಿಯನ್ನು ಚರ್ಚಿಸಲು ಗುರುವಾರ ಸಭೆ ನಡೆಸಲಿದೆ.
-
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications