Wrestlers protest: ಕುಸ್ತಿಪಟುಗಳ ಪ್ರತಿಭಟನೆಗೆ ಮಹತ್ವದ ತಿರುವು ನೀಡಲಿದೆ ಇಂದಿನ ಮಹಾಪಂಚಾಯತ್!
ನವದೆಹಲಿ, ಜೂನ್. 01: ಪೊಲೀಸ್ ತನಿಖೆಯ ಬೆನ್ನಲ್ಲೇ ಕುಸ್ತಿಪಟುಗಳು ಭಾರತದ ಮಾಜಿ ರೆಸ್ಲಿಂಗ್ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಚರ್ಚಿಸಲು ರೈತರು ಗುರುವಾರ 'ಮಹಾಪಂಚಾಯತ್' ನಡೆಸಲಿದ್ದಾರೆ. ಮಹತ್ವದ ಮಹಾಪಂಚಾಯತ್‌ನಲ್ಲಿ ಪ್ರತಿಭಟನೆಯ ಮುಂದಿನ ಸ್ವರೂಪದ ಬಗ್ಗೆ ಚರ್ಚೆಗಳು ನಡೆಯಲಿವೆ.
ಈ ಪ್ರತಿಭಟನೆಯ ಇಲ್ಲಿಯವರೆಗಿನ ಅಂಶಗಳು
1. ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಕುಸ್ತಿಪಟುಗಳ ಪ್ರತಿಭಟನೆ ಕುರಿತು ಚರ್ಚಿಸಲು ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಎಲ್ಲಾ ಖಾಪ್‌ಗಳ ಮಹಾ ಸಭೆ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಹೇಳಿದೆ.

2. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ರಾಜಸ್ಥಾನ ಮತ್ತು ದೆಹಲಿಯ ವಿವಿಧ ಖಾಪ್‌ಗಳ ಹಲವಾರು ಪ್ರತಿನಿಧಿಗಳು ಮತ್ತು ಅವರ ಮುಖ್ಯಸ್ಥರು ಮಹಾಪಂಚಾಯತ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಕೆಯು ಮುಖಂಡ ನರೇಶ್ ಟಿಕಾಯತ್ ಹೇಳುತ್ತಾರೆ.
3. ಮಂಗಳವಾರ ಗಂಗಾ ನದಿಯಲ್ಲಿ ತಮ್ಮ ಪದಕಗಳನ್ನು ಬಿಡಲು ತೆರಳಿದ್ದ ಭಾರತದ ಕೆಲವು ಅತ್ಯುತ್ತಮ ಕುಸ್ತಿಪಟುಗಳನ್ನು ಮನವೊಲಿಸುವಲ್ಲಿ ರೈತ ಮುಖಂಡ ನರೇಶ್ ಟಿಕಾಯತ್ ಪ್ರಮುಖ ಪಾತ್ರ ವಹಿಸಿದ್ದಾರೆ.
4. ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಮಂಗಳವಾರ ಹರಿದ್ವಾರಕ್ಕೆ ತೆರಳಿ ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ತಮ್ಮ ಪದಕಗಳನ್ನು ನದಿಯಲ್ಲಿ ಮುಳುಗಿಸುವುದಾಗಿ ಬೆದರಿಕೆ ಹಾಕಿದ್ದರು. ರೈತ ಮುಖಂಡರು ಮನವೊಲಿಸಿದ ಬಳಿಕ ಪೊಲೀಸರಿಗೆ ಐದು ದಿನಗಳ ಗಡುವು ನೀಡಿ ತಮ್ಮನಿರ್ಧಾರದಿಂದ ಹಿಂದೆ ಸರಿದರು.

5. ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜನವರಿಯಿಂದ ಕುಸ್ತಿಪಟುಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
6. ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ತಮ್ಮ ಮೇಲಿನ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಘೋಷಿಸಿದ್ದಾರೆ.
7. ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ. ನಿಮ್ಮ ಬಳಿ (ಕುಸ್ತಿಪಟುಗಳು) ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು ಬುಧವರಾ ಘೋಷಿಸಿದ್ದಾರೆ.
8. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ಪ್ರತಿಭಟನಾ ನಿರತ ಕುಸ್ತಿಪಟುಗಳು "ಗೋಲ್‌ಪೋಸ್ಟ್‌ಗಳನ್ನು ಬದಲಾಯಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಇನ್ನು,ಮೊದಲ ಬಾರಿಗೆ ಈ ಬಗ್ಗೆ ಸರ್ಕಾರ ಪ್ರತಿಕ್ರಿಯಿಸಿದ್ದು, "ಕ್ರೀಡೆ ಅಥವಾ ಇತರ ಕ್ರೀಡಾಪಟುಗಳಿಗೆ ನೋವುಂಟು ಮಾಡುವ" ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಪುನರುಚ್ಚರಿಸಿದ್ದಾರೆ.
9. ಈ ಹಿಂದೆ ಕ್ರೀಡಾಪಟುಗಳೇ ವೇದಿಕೆ ರಾಜಕೀಯ ಮಾಡಲು ಅಲ್ಲ ಎಂದು ಹೇಳಿದ್ದಾರೆ. ಆದರೆ ನಂತರ ರಾಜಕೀಯ ಪಕ್ಷಗಳು ಬಂದು ಈ ವೇದಿಕೆಯನ್ನು ಹಂಚಿಕೊಂಡಿವೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿರುವ ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಹಲವು ವಿರೋಧ ಪಕ್ಷದ ನಾಯಕರು ಭೇಟಿ ನೀಡಿದ್ದರು.
10. ಅಂತಾರಾಷ್ಟ್ರೀಯ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW) ಆಡಳಿತ ಮಂಡಳಿ, ಭಾರತದಲ್ಲಿ ಕುಸ್ತಿಪಟುಗಳನ್ನು ಹೀಗೆ ನಡೆಸಿಕೊಳ್ಳುತ್ತಿರುವುದಕ್ಕೆ ಆಕ್ಷೇಪವ್ಯಕ್ತಪಡಿಸಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ 45 ದಿನಗಳಲ್ಲಿ WFI ಗಾಗಿ ಹೊಸ ಚುನಾವಣೆಗಳನ್ನು ನಡೆಸುವ ತನ್ನ ಭರವಸೆಯನ್ನು ಉಳಿಸಿಕೊಳ್ಳದಿದ್ದರೇ ಫೆಡರೇಶನ್‌ಅನ್ನು ಅಮಾನತುಗೊಳಿಸುವ ಎಚ್ಚರಿಕೆ ನೀಡಿದೆ.












Click it and Unblock the Notifications