ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌: ಓರ್ವ ಸಾವು

ಉತ್ತರ ಪ್ರದೇಶದ ಗೊಂಡಾದಲ್ಲಿ ಗುರುವಾರ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವಿನ ಪಿಕೌರಾದಲ್ಲಿ ಈ ಘಟನೆ ನಡೆದಿದೆ.

ರಕ್ಷಣಾ ತಂಡವನ್ನು ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದು ಪ್ರಯಾಣಿಕರು ತಮ್ಮ ಲಗೇಜ್‌ಗಳೊಂದಿಗೆ ಟ್ರ್ಯಾಕ್‌ನ ಬದಿಗಳಲ್ಲಿ ನಿಂತಿರುವುದನ್ನು ದೃಶ್ಯಗಳು ತೋರಿಸುತ್ತವೆ.

Fatal Derailment of Chandigarh-Dibrugarh Express in Uttar Pradesh

12 ಬೋಗಿಗಳ ಪೈಕಿ ಎಸಿ ಕಂಪಾರ್ಟ್‌ಮೆಂಟ್‌ನ ನಾಲ್ಕು ಬೋಗಿಗಳು ಜುಲಾಹಿ ರೈಲ್ವೇ ನಿಲ್ದಾಣದ ಕೆಲವು ಕಿಲೋಮೀಟರ್‌ಗಳಷ್ಟು ಮೊದಲು ಹಳಿತಪ್ಪಿವೆ ಎಂದು ವರದಿಯಾಗಿದೆ.

"ನಾನು ಕೂದಲೆಳೆಯಲ್ಲಿ ಬಚಾವಾಗಿದ್ದೇನೆ, ಯಾವುದೇ ತೊಂದರೆಗೆ ಒಳಗಾಗದೆ ಪಾರಾಗಿದ್ದಕ್ಕೆ ಸಂತೋಷವಾಗಿದೆ. ಚಿಂತಿಸಬೇಡಿ ನಾನು ಚೆನ್ನಾಗಿದ್ದೇನೆ" ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದ ವೀಡಿಯೊಗಳು ಹಳಿತಪ್ಪಿದ ಬೋಗಿಗಳಿಂದ ಜನರು ತಮ್ಮ ಲಗೇಜ್‌ಗಳನ್ನು ಹೊರತೆಗೆಯುವುದನ್ನು ತೋರಿಸಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಪಘಾತ ನಡೆದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸುವಂತೆ ಸೂಚನೆ ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+