ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೈ ದರ್ಶನಕ್ಕೆ ಮಹಿಳೆಯರಿಗೆ ಕೇರಳ ಸರ್ಕಾರ ಅನುಮತಿ

By ವಿಕಾಸ್ ನಂಜಪ್ಪ
|
Google Oneindia Kannada News

ತಿರುವನಂತಪುರಂ, ನವೆಂಬರ್, 7: ಪ್ರಸಿದ್ಧ ಪುಣ್ಯಕ್ಷೇತ್ರ ಕೇರಳದ ಶಬರಿ ಮಲೈ ಆಲಯಕ್ಕೆ ಮಹಿಳೆಯರು ಪ್ರವೇಶಿಸಲು ಕೇರಳ ಸರ್ಕಾರ ಸಮ್ಮತಿ ಸೂಚಿಸಿದೆ. ಮಹಿಳೆಯರ ಆಲಯ ಪ್ರವೇಶಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಸರ್ಕಾರ ಸುಪ್ರೀಂಕೋರ್ಟ್ ಗೆ ಸೋಮವಾರ ತಿಳಿಸಿದೆ.

ದೇವಸ್ಥಾನಕ್ಕೆ ಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೂ ಅವಕಾಶ ಕಲ್ಪಿಸಬೇಕೆಂದು ಸರ್ಕಾರ ಒತ್ತಾಯಿಸಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿದ್ದ ತೀರ್ಮಾನಕ್ಕೆ ವಿರುದ್ಧವಾಗಿ ಪ್ರಸ್ತುತ ಎಲ್ ಡಿ ಎಫ್ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಮಹಿಳೆಯರ ಆಲಯ ಪ್ರವೇಶ ಕುರಿಂತಂತೆ ಸೋಮವಾರ ನಡೆದ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಕೇರಳ ಸರ್ಕಾರದ ವಾದ ಆಲಿಸಿದ್ದು, ವಿಚಾರಣೆಯನ್ನು 2017 ಫೆಬ್ರುವರಿಗೆ ಮುಂದೂಡಿದೆ.

Favour entry of women into Sabarimala, Kerala govt tells SC

ಮಹಿಳೆಯರನ್ನು ಸಹಜವಾಗಿ ಕಾಡುವ ಋತುಚಕ್ರ ಸಂಬಂಧಿತ ಸಮಸ್ಯೆಗಳಿಂದಾಗಿ ಅವರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಬಾರದು ಎಂಬ ವಾದ ಒಂದೆಡೆಯಾದರೆ, ಶಬರಿಮಲೈ ಅಯ್ಯಪ್ಪ ಸ್ವಾಮಿ ಬ್ರಹ್ಮಚಾರಿಯಾಗಿರುವುದರಿಂದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂಬುದು ಮತ್ತೊಂದು ವಾದವಾಗಿದೆ.

ಶಬರಿಮಲೈ ಆಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಲು ಕೇರಳ ಸರ್ಕಾರ ಸಿದ್ಧವಾಗಿದೆ ಎಂದು ಕೇರಳ ಮುಜರಾಯಿ ಇಲಾಖೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಕಳೆದ ಜೂನ್ ನಲ್ಲಿ ಹೇಳಿಕೆ ನೀಡಿದ್ದರು.

10ರಿಂದ 50 ವರ್ಷದೊಳಗಿನ ಮಹಿಳೆಯರು ಶಬರಿಮಲೈ ದೇವಸ್ಥಾನವನ್ನು ಪ್ರವೇಶಿಸುವುದು ನಿಷಿದ್ಧ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿದ್ದ ತೀರ್ಮಾನವನ್ನು ಎಲ್ ಡಿ ಎಫ್ ಸರ್ಕಾರ ಅಧಿಕಾರಕ್ಕೆ ಬಂದ ನಂತರವೂ ಸಹ ಮುಂದುವರೆಸಿತ್ತು.

ಆದರೆ ಸಿಪಿಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರು ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳ ನಂತರ ಶಬರಿ ಮಲೈ ದೇವಸ್ಥಾನ ಪ್ರವೇಶಕ್ಕೆ ಮಹಿಳೆಯರ ಮೇಲೆ ನಿರ್ಬಂಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಕೇವಲ ಶಬರಿಮಲೈ ಒಂದೇ ಅಲ್ಲದೆ ದೇಶದ ಎಲ್ಲಾ ದೇವಸ್ಥಾನಗಳಲ್ಲೂ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕೆಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಈ ಬಗ್ಗೆ ಕಳೆದ ವರ್ಷ ಪ್ರತಿಕ್ರಿಯೆ ನೀಡಿದ್ದ ಶಬರಿ ಮಲೈ ದೇವಸ್ಥಾನ ಸಮಿತಿ ಚೇರ್ಮನ್ ಪ್ರಯಾರ್ ಗೋಪಾಲಕೃಷ್ಣನ್ ಅವರು "ಮಹಿಳೆಯರು ಮುಟ್ಟಾಗಿದ್ದಾರೋ ಇಲ್ಲವೋ ಎಂಬುದನ್ನು ಪತ್ತೆಹಚ್ಚುವ ಯಂತ್ರ ಬಂದಮೇಲೆ ಮಹಿಳೆರಿಗೆ ಆಲಯ ಪ್ರವೇಶ ಕಲ್ಪಿಸಲಾಗುವುದು" ಎಂದು ವಿವಾದಸ್ಪದ ಹೇಳಿಕೆ ನೀಡಿದ್ದರು.

2007ರಲ್ಲಿಯೂ ಸಹ ಇದೇ ರೀತಿ ಅಂದಿನ ಎಲ್ ಡಿ ಎಫ್ ಸರ್ಕಾರ ಶಬರಿಮಲೈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕೆಂದು ಒತ್ತಾಯಿಸಿತ್ತು. ಆದರೆ ನಂತರ ಬಂದ ಕಾಂಗ್ರೆಸ್ ಸರ್ಕಾರ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಈಗ ಮತ್ತೆ ಎಲ್ ಡಿ ಎಫ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಆಲಯ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸುತ್ತಿದೆ.

English summary
The Kerala government today said that women of all ages must be allowed into the Sabarimala shrine in Kerala. The stand taken by the government is opposite to what the earlier Congress-led government had said on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X