Layoff: ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಉದ್ಯೋಗಿ ಆತ್ಮಹತ್ಯೆ
ಇಂದೋರ್, ಫೆಬ್ರವರಿ 27: ಆರ್ಥಿಕ ಬಿಕ್ಕಟ್ಟು ಕಾರಣ ನೀಡಿ ಉದ್ಯೋಗಿಗಳನ್ನು ಕಂಪನಿಗಳು ಕೆಲಸದಿಂದ ವಜಾ ಮಾಡುತ್ತಿರುವ ಘಟನೆಗಳು ಇತ್ತೀಚಿಗೆ ಹೆಚ್ಚಾಗಿದೆ. ಕೊರೊನಾ ಅಬ್ಬರದ ಬಳಿಕ ಉಂಟಾದ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ದೇಶದಾದ್ಯಂತ ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದಾರೆ. ಈ ಸರಣಿ ಮುಂದುವರಿಯುತ್ತಾ ಬಂದಿದ್ದು, ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಆತಂಕದಲ್ಲೇ ಕೆಲಸ ಮಾಡುತ್ತಿದ್ದಾರೆ.
ಇದೇ ರೀತಿ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.

ಪೇಟಿಎಂ ಸಿಬ್ಬಂದಿ ಗೌರವ್ ಗುಪ್ತಾ ಕೆಲವು ವರ್ಷಗಳಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ಕಂಪನಿಯಲ್ಲಿ ಲೇಆಫ್ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿತ್ತು. ಗೌರವ್ ಗುಪ್ತಾ ಕಳೆದ ಕೆಲವು ದಿನಗಳಿಂದ ಕಂಪನಿ ಮುಚ್ಚಬಹುದು ಮತ್ತು ಕೆಲಸ ಕಳೆದುಕೊಳ್ಳಬಹುದು ಎಂಬ ಭಯದಿಂದ ಒತ್ತಡದಲ್ಲಿದ್ದರು. ಈ ಕಾರಣದಿಂದ ಗೌರವ್ ಗುಪ್ತಾ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಇತ್ತೀಚಿಗಷ್ಟೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 15ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಅನ್ನು ನಿರ್ಬಂಧಿಸಿತ್ತು. ಹೀಗಾಗಿ ಕಳೆದ ಕೆಲವು ದಿನಗಳಿಂದ ಕಂಪನಿ ಮುಚ್ಚಬಹುದು ಎನ್ನುವ ಭಯ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ಕಂಪನಿ ಉದ್ಯೋಗಿಗಳನ್ನು ಕಾಡುತ್ತಿದೆ ಎನ್ನಲಾಗಿದೆ.
ಇನ್ನು 2024ರ ಈ ವರ್ಷ ಕೂಡ ಎಂಎನ್‌ಸಿ ಕಂಪನಿಗಳು ಉದ್ಯೋಗಿಗಳನ್ನು ಏಕಾಏಕಿ ಕೆಲಸದಿಂದ ತೆಗೆಯುವ ಪರ್ವ ಮುಂದುವರಿಸಿದೆ . ಈ ವರ್ಷದ ಮೊದಲ ತಿಂಗಳು ಜನವರಿಯಲ್ಲಿ 122 ಟೆಕ್ ಸಂಸ್ಥೆಗಳು ಮತ್ತು ಸ್ಟಾರ್ಟ್ಅಪ್ಗಳು 30 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿತ್ತು. ಇನ್ನು ಮುಂದಿನ ದಿನಗಳಲ್ಲೂ ಇದು ಮುಂದುವರಿಯುವ ಸಾಧ್ಯತೆ ಇದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications