• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಬ್ಬಕ್ಕೆ ಅಗ್ಗದ ಸಾಲದಲ್ಲಿ ಟಿವಿ, ಮೊಬೈಲ್‌ ಖರೀದಿಸಿ

By Srinath
|

Festive season - Cheap loans for consumer goods by PSU banks  - RBI and FM,
ನವದೆಹಲಿ, ಅ.5: ಕ್ಲಿಷ್ಟ ಆರ್ಥಿಕ ಪರಿಸ್ಥಿತಿಯ ಮುನ್ನೆಲೆಯಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವಂತಿಲ್ಲ ಎಂದು ಆದೇಶಿಸಿದ್ದ ಕೇಂದ್ರ ಸರ್ಕಾರ ತನ್ನ ನೀತಿಯಲ್ಲಿ ಸ್ವಲ್ಪ ಮಾರ್ಪಾಡು ಮಾಡಿಕೊಂಡು ಟಿವಿ, ದುಬಾರಿ ಮೊಬೈಲ್‌, ವಾಹನಗಳ ಖರೀದಿಗಾಗಿ ಅಗ್ಗದ ಬಡ್ಡಿದರದಲ್ಲಿ ಸಾಲ ಒದಗಿಸುವಂತೆ ಬ್ಯಾಂಕುಗಳಿಗೆ ಸೂಚಿಸಿದೆ.

ಹಬ್ಬದ ದಿನಗಳಲ್ಲಿ ವಾಹನ, ಟಿವಿ, ದುಬಾರಿ ಮೊಬೈಲ್‌, ವಾಷಿಂಗ್‌ ಮೆಷಿನ್‌ ಸೇರಿದಂತೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಮುಂದಾಗುತ್ತಾರೆ. ಈ ವೇಳೆ ಅವರಿಗೆ ಅಗ್ಗದ ದರದಲ್ಲಿ ಸಾಲ ನೀಡಿದಲ್ಲಿ ಖರೀದಿ ಪ್ರಕ್ರಿಯೆಗೆ ಮತ್ತಷ್ಟು ಚಾಲನೆ ನೀಡಬಹುದು.

ಇದು ಕುಸಿದಿರುವ ಆರ್ಥಿಕತೆಗೆ ಉತ್ತೇಜನ ನೀಡುವಲ್ಲಿ ನೆರವಾಗುತ್ತದೆ. ಹೀಗಾಗಿ ಗ್ರಾಹಕರಿಗೆ ಹಬ್ಬದ ದಿನಗಳಲ್ಲಿ ಅಗ್ಗದ ದರದಲ್ಲಿ ಸಾಲ ನೀಡಿ ಎಂದು ಕೇಂದ್ರ ಹಣಕಾಸು ಸಚಿವ ಚಿದಂಬರಂ ಬ್ಯಾಂಕುಗಳಿಗೆ ಸೂಚಿಸಿದ್ದಾರೆ.

ಆರ್‌ ಬಿಐ ಗವರ್ನರ್‌ ರಘುರಾಂ ರಾಜನ್‌ ಅವರನ್ನು ಭೇಟಿ ಮಾಡಿದ ಬಳಿಕ ಚಿದಂಬರಂ ಈ ಘೋಷಣೆ ಮಾಡಿದ್ದಾರೆ. ಈ ಕುರಿತು ಅವರು ಶೀಘ್ರವೇ ವಿವಿಧ ಬ್ಯಾಂಕುಗಳ ಮುಖ್ಯಸ್ಥರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೇ ವೇಳೆ ಇಂತಹ ಸಾಲ ನೀಡಲು ಅಗತ್ಯವಾಗುವಂತೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಶೀಘ್ರವೇ ಹಣಕಾಸಿನ ನೆರವನ್ನು ಒದಗಿಸಲಾಗುವುದು ಎಂಬ ಭರವಸೆಯನ್ನೂ ಚಿದಂಬಂರಂ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Festive season - Cheap loans for consumer goods by PSU banks - RBI and FM. The banks will lend loans to borrowers in selected sector such as two-wheeler, consumer durables, etc at lower rates in order to stimulate demand. 

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more