ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ: ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿ ಬಿಡುಗಡೆ

|
Google Oneindia Kannada News

ನವದೆಹಲಿ, ಆಗಸ್ಟ್ 31 : ಕೇಂದ್ರ ಸರ್ಕಾರ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಸಿಆರ್) ಅಂತಿಮ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. 3.11 ಕೋಟಿ ಜನರನ್ನು ಅಂತಿಮ ಪಟ್ಟಿಯಲ್ಲಿ ಸೇರಿಸಲಾಗಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ ಎಂದರೇನು?, ವಿವಾದ, ವಿವರರಾಷ್ಟ್ರೀಯ ಪೌರತ್ವ ನೋಂದಣಿ ಎಂದರೇನು?, ವಿವಾದ, ವಿವರ

ಶನಿವಾರ ಕೇಂದ್ರ ಗೃಹ ಸಚಿವಾಲಯ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. 19,06,657 ಜನರ ಹೆಸರನ್ನು ಅಂತಿಮ ಪಟ್ಟಿಯಿಂದ ಕೈ ಬಿಡಲಾಗಿದೆ. ಕಳೆದ ವರ್ಷದ ಜುಲೈ 30ರಂದು ಎನ್‌ಆರ್‌ಸಿ ಅಂತಿಮ ಕರಡು ಪಟ್ಟಿ ಬಿಡುಗಡೆ ಮಾಡಿತ್ತು.

Final List Of National Register Of Citizens Published

ಎನ್‌ಆರ್‌ಸಿ ಅಂತಿಮ ಪಟ್ಟಿ ಬಿಡುಗಡೆ ಹಿನ್ನಲೆಯಲ್ಲಿ ಅಸ್ಸಾಂನಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 144 ಸೆಕ್ಷನ್‌ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಸ್ಸಾಂ ರಾಜ್ಯ ಪಕ್ಕದ ಬಾಂಗ್ಲಾದೇಶದ ಜೊತೆ ಗಡಿಯನ್ನು ಹಂಚಿಕೊಂಡಿದೆ. ಆದ್ದರಿಂದ, ಬಾಂಗ್ಲಾದವರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಸಿದ್ಧಪಡಿಸುವ ಕಾರ್ಯ ನಡೆದಿತ್ತು.

ಅಸ್ಸಾಂ : ಆತಂಕದಲ್ಲಿದ್ದ 40 ಲಕ್ಷ ಜನಕ್ಕೆ ರಾಜನಾಥ್ ಅಭಯಅಸ್ಸಾಂ : ಆತಂಕದಲ್ಲಿದ್ದ 40 ಲಕ್ಷ ಜನಕ್ಕೆ ರಾಜನಾಥ್ ಅಭಯ

ಅಸ್ಸಾಂ ನಿವಾಸಿಗಳ ಅಂತಿಮ ಪಟ್ಟಿಯಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಸಿದ್ಧಪಡಿಸುವ ಕಾರ್ಯ ನಾಲ್ಕು ವರ್ಷಗಳ ಕಾಲ ಸುಪ್ರೀಂಕೋರ್ಟ್‌ ನಿರ್ದೇಶನದಂತೆ ನಡೆದಿತ್ತು. 2018ರ ಜುಲೈ 31ರಂದು ಎನ್‌ಆರ್‌ಸಿ ಕರಡು ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 40.7 ಲಕ್ಷ ಕಾಯಂ ನಿವಾಸಿಗಳ ಹೆಸರನ್ನು ತೆಗೆದುಹಾಕಲಾಗಿತ್ತು.

ಅಕ್ರಮ ವಲಸಿಗರನ್ನು ಗುಂಡಿಕ್ಕಿ ಕೊಲ್ಲಬೇಕು: ಬಿಜೆಪಿ ಶಾಸಕಅಕ್ರಮ ವಲಸಿಗರನ್ನು ಗುಂಡಿಕ್ಕಿ ಕೊಲ್ಲಬೇಕು: ಬಿಜೆಪಿ ಶಾಸಕ

ಪಟ್ಟಿಯಿಂದ ಹೊರಗುಳಿದರೆ : ಎನ್‌ಆರ್‌ಸಿ ಪಟ್ಟಿಯಲ್ಲಿ ಹೆಸರು ಇರದ ಯಾವುದೇ ವ್ಯಕ್ತಿಯನ್ನು ವಿದೇಶಿ ಎಂದು ಘೋಷಣೆ ಮಾಡಲಾಗುತ್ತದೆ. ಅವರಿಗಾಗಿಯೇ ನ್ಯಾಯಾಧೀಕರಣ ಸ್ಥಾಪನೆ ಮಾಡಲಾಗುತ್ತದೆ. ಪಟ್ಟಿಯಲ್ಲಿ ಹೆಸರು ಇಲ್ಲದವರು ಅಲ್ಲಿ ತಮ್ಮ ಹಕ್ಕನ್ನು ಪಡೆಯಲು ವಾದ ಮಂಡಿಸಬೇಕು. ಅವರು ವಿದೇಶಿಯರು ಎಂದು ನ್ಯಾಯಾಧೀಕರಣ ಘೋಷಣೆ ಮಾಡುವ ತನಕ ಅವರನ್ನು ಬಂಧಿಸುವುದಿಲ್ಲ ಎಂದು ಸರ್ಕಾರ ಹೇಳಿದೆ.

English summary
Home ministry announced final list of National Register of Citizens (NRC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X