Breaking: ಡಿ.28ರಂದು ಏಮ್ಸ್ ನಿಂದ ನಿರ್ಮಲಾ ಸೀತಾರಾಮನ್ ಡಿಸ್ಚಾರ್ಜ್
ನವದೆಹಲಿ, ಡಿಸೆಂಬರ್ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಅಲ್ಪ ಪ್ರಮಾಣದ ಹೊಟ್ಟೆನೋವಿನಿಂದ ಸೋಮವಾರ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಂಗಳವಾರ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಈ ಹಿನ್ನೆಲೆ ಬುಧವಾರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬಹುದು ಎಂದು ತಿಳಿದು ಬಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ, ಡಿಸೆಂಬರ್ 26 ರಂದು ನವದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿರ್ಮಲಾ ಸೀತಾರಾಮನ್ ಅನ್ನು ಸೋಮವಾರ ಮಧ್ಯಾಹ್ನದ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್, ಅವರಿಗೆ ಪುಷ್ಪನಮನ ಸಲ್ಲಿಸಿದ್ದರು. ಬಳಿಕ ದೆಹಲಿಯ ಸದೈವ್ ಅಟಲ್ ಅವರನ್ನು ನಿರ್ಮಲಾ ಭೇಟಿ ಮಾಡಿದ್ದರು. ತಮಿಳುನಾಡಿನ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಭಾರತವು ಜಾಗತಿಕ ಗುಣಮಟ್ಟದ ಔಷಧವನ್ನು ಸಮಂಜಸವಾದ ಬೆಲೆಯಲ್ಲಿ ಒದಗಿಸುವುದರಿಂದ ಭಾರತವನ್ನು ವಿಶ್ವದ ಫಾರ್ಮಸಿ ಎಂದು ಕರೆಯಲಾಗುತ್ತದೆ ಎಂದು ಹಣಕಾಸು ಸಚಿವೆ ಹೇಳಿದ್ದರು.












Click it and Unblock the Notifications