ಕೇಂದ್ರದಿಂದ ಕೊಡುಗೆ : ಕನಿಷ್ಟ ಪಿಂಚಣಿ ಮೊತ್ತ ಹೆಚ್ಚಳಕ್ಕೆ ಶಿಫಾರಸು
ನವದೆಹಲಿ, ಜನವರಿ 25: ಲೋಕಸಭೆ ಚುನಾವಣೆಗೂ ಮುನ್ನ ನಿರೀಕ್ಷೆಯಂತೆ 7ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಸಮ್ಮತಿ ನೀಡಲು ಮೋದಿ ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ, ಕೇಂದ್ರ ನೌಕರರ ಪಿಂಚಣಿ ಯೋಜನೆ ಹೊಸದಾಗಿ ರೂಪಿಸಲು ಮುಂದಾಗಿದೆ. ಕನಿಷ್ಠ ಮಾಸಿಕ ಪಿಂಚಣಿ ಮೊತ್ತವನ್ನು 2000 ರೂ.ಗೆ ಏರಿಕೆ ಮಾಡುವಂತೆ ವಿತ್ತ ಸಚಿವಾಲಯ ಶಿಫಾರಸು ಮಾಡಿದೆ.
ಕಾರ್ವಿುಕ ಸಚಿವಾಲಯದ ಉನ್ನತ ಮಟ್ಟದ ಸಮಿತಿ ಈ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಪ್ರಸ್ತುತ ನೌಕರರ ಭವಿಷ್ಯ ನಿಧಿ ಸಂಸ್ಥೆ(EPFO)ಯ ಸದಸ್ಯರಾಗಿರುವವರು ಹೊಸ ಯೋಜನೆಯ ಸದಸ್ಯತ್ವ ಪಡೆಯಲಿದ್ದಾರೆ. ಇಪಿಎಸ್ ಅನ್ವಯ ಪಿಂಚಣಿಗಾಗಿ ವಾರ್ಷಿಕ 9 ಸಾವಿರ ಕೋಟಿ ರೂ. ಗಳನ್ನು ಸರ್ಕಾರವು ವೆಚ್ಚ ಮಾಡುತ್ತಿದೆ. ಹೊಸ ಯೋಜನೆ ಅನ್ವಯ ಹೆಚ್ಚುವರಿಯಾಗಿ 3 ಸಾವಿರ ಕೋಟಿ ರೂ. ವೆಚ್ಚ ಮಾಡಬೇಕಾಗುತ್ತದೆ.
ಭವಿಷ್ಯ ನಿಧಿ ವಿಥ್ ಡ್ರಾ ನಿಯಮದಲ್ಲಿ ಏನಿದು ಹೊಸ ಬದಲಾವಣೆ
60 ಲಕ್ಷಕ್ಕೂ ಅಧಿಕ ಪಿಂಚಣಿದಾರರಿದ್ದು, ಈ ಪೈಕಿ 40 ಲಕ್ಷಕ್ಕೂ ಅಧಿಕ ಮಂದಿ 1,500 ರು ಪ್ರತಿ ತಿಂಗಳಿಗೆ ಪಡೆಯುತ್ತಿದ್ದಾರೆ. 18 ಲಕ್ಷ ಮಂದಿ ಕನಿಷ್ಟ ಪಿಂಚಣಿ ಮೊತ್ತ 1,000 ರು ಪ್ರತಿ ತಿಂಗಳು ಪಡೆಯುತ್ತಿದ್ದಾರೆ. ಪಿಂಚಣಿ ನಿಧಿಯಾಗಿ 3 ಲಕ್ಷ ಕೋಟಿ ರು ಗಳನ್ನು ಕೇಂದ್ರ ಸರ್ಕಾರ ಬಳಸುತ್ತಿದೆ.
ಎಸ್ಎಂಎಸ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಹೇಗೆ?
ಪಿಎಫ್ ಲೆಕ್ಕಾಚಾರ: ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. ನೌಕರನ ಸಂಬಳ 15 ಸಾವಿರಕ್ಕಿಂತ ಕಡಿಮೆಯಿದ್ರೆ ಆತನ ಸಂಬಳದಲ್ಲಿ ಪ್ರತಿ ತಿಂಗಳು ಶೇಕಡಾ 12ರಷ್ಟು ಭಾಗ ಪಿಎಫ್ ಖಾತೆ ಸೇರುತ್ತದೆ. ಕಂಪನಿ ಶೇಕಡಾ 8.33ರಷ್ಟು ಪಿಂಚಣಿ ಯೋಜನೆಗೆ ಹಾಗೂ ಶೇಕಡಾ 3.67ರಷ್ಟು ಇಪಿಎಫ್ ಗೆ ಹಣ ನೀಡುತ್ತದೆ.