ಅವಹೇಳನಕಾರಿ ಹೇಳಿಕೆ ಆರೋಪ: ಪತ್ರಕರ್ತ ಅಭಿಸಾರ್ ಶರ್ಮಾ ವಿರುದ್ಧ ಎಫ್‌ಐಆರ್ ದಾಖಲು
ಅಸ್ಸಾಂ ಮತ್ತು ಕೇಂದ್ರ ಸರ್ಕಾರದ ಬಗ್ಗೆ ಅವಹೇಳನಕಾರಿ ಹೇಳಿಕೆಯ ವೀಡಿಯೊವನ್ನು ಅಪ್ಲೋಡ್ ಮಾಡಲಾಗಿದೆ. ಈ ಮೂಲಕ ಸಾರ್ವಜನಿಕ ವಲಯದಲ್ಲಿದೆ ಕೋಮುಗಲಭೆ ಸೃಷ್ಟಿಸುವ ಕೆಲಸ ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಪತ್ರಕರ್ತ ಮತ್ತು ಯೂಟ್ಯೂಬರ್ ಅಭಿಸರ್ ಶರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಸ್ಸಾಂ ಮತ್ತು ಕೇಂದ್ರ ಸರ್ಕಾರದ ಬಗ್ಗೆ ಅವಹೇಳನಕಾರಿ ಹೇಳಿಕೆಯ ವೀಡಿಯೊ ಮಾಡಿದ್ದಾರೆಂಬ ಆರೋಪದ ಮೇಲೆ ಅಭಿಸರ್ ಶರ್ಮಾ ವಿರುದ್ಧ ಗುರುವಾರ ಎಫ್‌ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತಾ 2023ರ ಸೆಕ್ಷನ್ 152, 196 ಮತ್ತು 19ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ವಿಡಿಯೋ ರಾಷ್ಟ್ರೀಯ ಸಮಗ್ರತೆಗೆ ಅಪಾಯವನ್ನುಂಟು ಮಾಡುವ, ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಕೃತ್ಯಗಳಿಗೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

ಈ ವಿಡಿಯೋ ಸಂಬಂಧ ಗಣೇಶಗುರಿಯ ನಯನ್ಪುರ ನಿವಾಸಿಯಾಗಿರುವ 23 ವರ್ಷದ ಅಲೋಕ್ ಬರುವಾ ಎಂಬುವರು ದೂರು ನೀಡಿದ್ದರು. ಈ ದೂರಿನ ಅನ್ವಯ, ಶರ್ಮಾ ಅವರ ವೀಡಿಯೊದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲದೆ, ಈ ಅಭಿಸರ್ ಶರ್ಮಾ ಮಾಡಿದ್ದಾರೆ ಎನ್ನಲಾದ ವೀಡಿಯೊದಲ್ಲಿ ರಾಮ ರಾಜ್ಯದ ಪರಿಕಲ್ಪನೆಯನ್ನು ಅಣಕಿಸಲಾಗಿದೆ. ಅಲ್ಲದೆ, ಇಲ್ಲಿನ ರಾಜಕಾರಣಿಗಳು ಹಿಂದೂ-ಮುಸ್ಲಿಂ ಹೆಸರು ಬಳಸಿಕೊಂಡು ರಾಜಕೀಯ ಮಾಡುತ್ತಿದೆ ಅಂತಲೂ ಹೇಳಲಾಗಿದೆ ಎಂದು ವರದಿ ಆಗಿದೆ.
ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರಗಳನ್ನು ಕೆಣಕುವ ಮತ್ತು ಕೋಮು ಭಾವನೆಗಳನ್ನು ಕೆರಳಿಸುವ ದುರುದ್ದೇಶಪೂರಿತ ಉದ್ದೇಶದಿಂದ ಈ ಹೇಳಿಕೆಗಳನ್ನು ನೀಡಲಾಗಿದೆ ಎಂದು ಬರುವಾ ಆರೋಪ ಮಾಡಿದ್ದಾರೆ. ಈ ವೀಡಿಯೊ ಇದೀಗ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಶಾಂತಿ ಕದಡುವ ಆತಂಕ ಎದುರಾಗಿದೆ ಎಂದು ಹೇಳಿದ್ದಾರೆ.
ಅಭಿಸರ್ ಶರ್ಮಾ ಅವರ ಹೇಳಿಕೆಗಳು ಪ್ರಚೋದನಕಾರಿಯಾಗಿವೆ. ಕಾನೂನು ಪಾಲನೆ ಮಾಡುವ ಅಧಿಕಾರಿಗಳ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆ ಇದರಲ್ಲಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ.
STORY | FIR filed against journalist Abhisar Sharma by Guwahati police
— Press Trust of India (@PTI_News) August 21, 2025
The Guwahati Crime Branch has registered a First Information Report (FIR) against journalist and YouTuber @abhisar_sharma on the basis of a complaint filed by a local resident alleging that he had uploaded a… pic.twitter.com/4Vzrwsnykz
ಬಿಎನ್‌ಎಸ್ ಅಡಿಯಲ್ಲಿ, ಭಾರತದ ಸಾರ್ವಭೌಮತ್ವ ಮತ್ತು ಏಕತೆಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಸೆಕ್ಷನ್ 196 ಧರ್ಮ ಮತ್ತು ಜಾತಿಯಂತಹ ಆಧಾರದ ಮೇಲೆ ದ್ವೇಷವನ್ನು ಪ್ರಚೋದಿಸುವುದನ್ನು ತಿಳಿಸುತ್ತದೆ. ಆದರೆ, ಸೆಕ್ಷನ್ 197 ರಾಷ್ಟ್ರೀಯ ಏಕೀಕರಣವನ್ನು ಹದಗೆಡಿಸುವಂತಹ ಹೇಳಿಕೆಗೆ ಸಂಬಂಧಿಸಿದೆ.
-
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications