ತಿರುಪತಿ ದೇವಾಲಯದ ಬಳಿ ಅಗ್ನಿ ಆಕಸ್ಮಿಕ

Posted By:
Subscribe to Oneindia Kannada

ತಿರುಪತಿ, ಜೂನ್ 10 : ತಿರುಪತಿ ತಿಮ್ಮಪ್ಪನ ದೇವಾಲಯದ ಬಳಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಮೂರು ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿವೆ. ಅಗ್ನಿ ಆಕಸ್ಮಿಕದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಶುಕ್ರವಾರ ಬೆಳಗ್ಗೆ 6.30ರ ಸುಮಾರಿಗೆ ದೇವಾಲಯದ ಸಮೀಪದಲ್ಲಿರುವ ಲಡ್ಡು ತಯಾರು ಮಾಡುವ ಕೇಂದ್ರದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು. ಅಡುಗೆ ಮನೆಯಲ್ಲಿನ ಹೆಚ್ಚಿನ ಉಷ್ಣತೆಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. [ಅಂಚೆ ಕಚೇರಿಗಳಲ್ಲಿ ತಿಮ್ಮಪ್ಪನ ದರ್ಶನದ ಟಿಕೆಟ್ ಸಿಗುತ್ತೆ]

tirupati

ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಮೂರು ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ತಿರುಪತಿ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. [ನಂದಿನಿ ತುಪ್ಪದ ಘಮಲು ಕಳೆದುಕೊಂಡ ತಿರುಪತಿ ಲಡ್ಡು!]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A fire broke out near Venkateswara Temple, Tirupati Andhra Pradesh on Friday, Morning. Situation under control.
Please Wait while comments are loading...