ನವದೆಹಲಿ: ಏಷ್ಯಾದ ಅತಿದೊಡ್ಡ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ
ನವದೆಹಲಿ, ಸೆಪ್ಟಂಬರ್ 29: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಥಳೀಯವಾಗಿ ಆಜಾದ್‌ಪುರ ಮಂಡಿ ಎಂದು ಕರೆಯಲ್ಪಡುವ ಆಜಾದ್‌ಪುರ ತರಕಾರಿ ಮಾರುಕಟ್ಟೆಯಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಿತ್ಯ ಸಾವಿರಾರು ಮಂದಿ ಓಡಾಡುವ ಈ ಮಾರುಕಟ್ಟೆಯಲ್ಲಿ ಶುಕ್ರವಾರ ಸಂಜೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಆದರೆ, ಮೂಲಗಳ ಪ್ರಕಾರ ಈ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಎಎನ್‌ಐ ವರದಿ ಆಗಿದೆ.

ಆಜಾದ್‌ಪುರ ತರಕಾರಿ ಮಾರುಕಟ್ಟೆ (ಮಂಡಿ) ಯಲ್ಲಿ ಟೊಮೆಟೊ ಮಾರಾಟಗಾರರ ಮಳಿಗೆಗಳ ಹಿಂದೆ ಬೆಂಕಿ ಕಾಣಿಸಿಕೊಂಡಿದೆ. ಮಳಿಗೆಗಳ ಹಿಂದೆ ವ್ಯಾಪಕ ಕಸದ ರಾಶಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ನೋಡು ನೋಡುತ್ತಿದ್ದಂತೆ ಸ್ವಲ್ಪ ಸಮಯದಲ್ಲೇ ಬೆಂಕಿ ಕೆನ್ನಾಲಿಗೆ ವ್ಯಾಪಕವಾಗಿ ಹರಡಿಸಿದ್ದರಿಂದ ಇದು ಜ್ವಲೆಯಾಗಿ ಹರಡಿತು ಎಂದು ನೋಡಿದ ಸ್ಥಳೀಯರು ತಿಳಿಸಿದ್ದಾರೆ.
ಬೆಂಕಿಯು ಚಾಚುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗೆ ದೂರುವಾಣಿ ಮೂಲಕ ಸಂಪರ್ಕಿಸಲಾಗಿದೆ. ಕೂಡಲೇ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಉತ್ತರ ದೆಹಲಿಯಲ್ಲಿನ ಮಾರುಕಟ್ಟೆಯು ಏಷ್ಯಾದಲ್ಲಿ ಈ ರೀತಿಯ ಅತೀ ದೊಡ್ಡ ಮಾರುಕಟ್ಟೆ ಎಂದು ಪರಿಗಣಿಸಲಾಗಿದೆ.
ಶುಕ್ರವಾರ ಮುಂಜಾನೆ, ಗಾಜಿಯಾಬಾದ್‌ನ ಕೊತ್ವಾಲಿ ಘಂಟಾಘರ್ ಪ್ರದೇಶದಲ್ಲಿನ ರಾಸಾಯನಿಕ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಎಎನ್‌ಐ ವರದಿ ಮಾಡಿದೆ.












Click it and Unblock the Notifications