Video: ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ

ನವದೆಹಲಿ, ಅಕ್ಟೋಬರ್ 28: ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವು ಟೇಕ್ ಆಫ್ ಆಗುತ್ತಿದ್ದ ಸಂದರ್ಭದಲ್ಲಿ ವಿಮಾನದ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆೆಯು ದೆಹಲಿಯಲ್ಲಿ ನಡೆದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್, ದೆಹಲಿ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್ ಮಾಡಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಇಂಡಿಗೋ ವಿಮಾನ 6E-2131 ತನ್ನ ಟೇಕ್ ಆಫ್ ಅನ್ನು ಸ್ಥಗಿತಗೊಳಿಸಿತು. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ "ಪೂರ್ಣ ತುರ್ತುಸ್ಥಿತಿ" ಘೋಷಿಸಲಾಯಿತು ಎಂದು ವರದಿಗಳು ತಿಳಿಸಿವೆ.

Fire On Bengaluru-Bound IndiGo Flight, Aircraft landed In Delhi

ಈ ವೇಳೆ ಪ್ರಯಾಣಿಕರಲ್ಲಿ ಒಬ್ಬರಾದ ಪ್ರಿಯಾಂಕಾ ಕುಮಾರ್ ಘಟನೆಯ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದು ಎಂಜಿನ್‌ಗಳಲ್ಲಿ ಒಂದಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು ತೋರಿಸುತ್ತದೆ.

ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಟ್ವೀಟ್:

"ಟೇಕ್ ಆಫ್ ಆಗುವಾಗ ಇಂಜಿನ್‌ಗೆ ಬೆಂಕಿ ಕಾಣಿಸಿಕೊಂಡಿತು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಆದರೆ ನಾವು ಇನ್ನೂ ವಿಮಾನದಲ್ಲಿದ್ದೇವೆ," ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+