ಕೋಲ್ಕತ್ತಾ ಎಸ್ ಎಸ್ ಕೆ ಎಂ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

Posted By:
Subscribe to Oneindia Kannada

ಕೋಲ್ಕತ್ತಾ: ನವೆಂಬರ್, 21: ಇಲ್ಲಿಯ ಸೇಥ್ ಸುಖ್ಲಾಕ್ ಕರ್ನಾನಿ ಮೆಮೊರಿಯಲ್ (ಎಸ್ ಎಸ್ ಕೆ ಎಂ) ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಭಾರೀ ಅಗ್ನಿ ದುರಂತ ಸಂಭವಿಸಿದೆ.

ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಈ ದುರ್ಘಟನೆ ನಡೆದಿದ್ದು, ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ರೋನಾಲ್ಡ್ ರೌಸ್ ಗ್ರಂಥಾಲಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

Fire reported from Kolkata's SSKM hospital

10 ಅಗ್ನಿ ಶಾಮಕ ವಾಹನಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ಯಾವುದೇ ಸಾವು-ನೋವುಗಳು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ಅವಲೋಕಿಸುತ್ತಿದ್ದಾರೆ. ಎಂದು ಹೇಳಲಾಗಿದೆ.

ಅಗ್ನಿ ದುರಂತ ಸಂಭವಿಸಿದ ಪರಿಣಾಮ 5ನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಕಟ್ಟಡಗಳಿಗೂ ಹಬ್ಬುತ್ತಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A massive fire broke out in state-run SSKM Hospital on Monday morning.The fire was detected around 11 am in the library housed in the Ronald Ross building of the hospital.
Please Wait while comments are loading...