ರಾಹುಲ್ ಗಾಂಧಿ ಭೇಟಿ ದಿನವೇ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಯಲ್ಲಿ ಓರ್ವ ಸಾವು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವ ದಿನವೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದ ಬಗ್ಗೆ ವರದಿಯಾಗಿದೆ. ಗುರುವಾರ ಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿದ ನಂತರ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Firing Incident in Manipurs Imphal West District

ರಾಹುಲ್ ಗಾಂಧಿ ಎರಡು ದಿನಗಳ ಮಣಿಪುರ ಪ್ರವಾಸವನ್ನು ಕೈಗೊಂಡಿದ್ದಾರೆ. ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೂ, ಮಣಿಪುರಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಲು ಮುಂದಾಗಿದ್ದಾರೆ. ಅವರು, ಚುರಚಂದ್‌ಪುರ ಮತ್ತು ಬಿಷ್ಣುಪುರ್ ಜಿಲ್ಲೆಗಳ ಕೆಲವು ಪರಿಹಾರ ಶಿಬಿರಗಳಿಗೆ ತೆರಳಿ ನಿರಾಶ್ರಿತ ಜನರನ್ನು ಭೇಟಿ ಮಾಡಲಿದ್ದಾರೆ.

ಬಹುಸಂಖ್ಯಾತ ಮೈತೆಯಿ ಮತ್ತು ಕುಕಿ ಬುಡಕಟ್ಟು ಜನಾಂಗದವರ ನಡುವಿನ ಹಿಂಸಾಚಾರದಿಂದಾಗಿ ಇದುವರೆಗೂ ಮಣಿಪುರದಲ್ಲಿ ಕನಿಷ್ಠ 115 ಜನರು ಸಾವನ್ನಪ್ಪಿದ್ದಾರೆ ಮತ್ತು 60,000 ಜನರು ಸ್ಥಳಾಂತರಗೊಂಡಿದ್ದಾರೆ. ಹಿಂಸಾಚಾರವನ್ನು ನಿಲ್ಲಿಸುವಂತೆ ಸರ್ಕಾರ ಮನವಿ ಮಾಡಿದ್ದರೂ, ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗುತ್ತಿವೆ.

ಇಂಫಾಲಕ್ಕೆ ತಲುಪಿದ ರಾಹುಲ್ ಗಾಂಧಿ

ಗುರುವಾರ ಬೆಳಗ್ಗೆ ದೆಹಲಿಯಿಂದ ಹೊರಟಿದ್ದ ರಾಹುಲ್ ಗಾಂಧಿ ಮಣಿಪುರದ ಇಂಫಾಲವನ್ನು ತಲುಪಿದ್ದಾರೆ. ರಾಜಧಾನಿ ಇಂಫಾಲದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಬಿಷ್ಣುಪುರದಲ್ಲಿ ರಾಹುಲ್ ಬೆಂಗಾವಲು ಪಡೆಯನ್ನು ತಡೆದೆರುವ ವರದಿಯಾಗಿದೆ. ನಂತರ ರಾಹುಲ್ ಗಾಂಧಿ ಚುರಚಂದ್‌ಪುರಕ್ಕೆ ತೆರಳಿದರು, ಇದು ಈಗ ಹಲವು ವಾರಗಳಿಂದ ರಾಜ್ಯವನ್ನು ಅಲುಗಾಡಿಸಿರುವ ಜನಾಂಗೀಯ ಹಿಂಸಾಚಾರದ ಭೀಕರತೆಗೆ ಸಾಕ್ಷಿಯಾಗಿದೆ. ಎರಡು ದಿನಗಳ ಕಾಲ ಮಣಿಪುರದಲ್ಲಿ ತಂಗಲಿದ್ದು ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಇಂಫಾಲ್ ಮತ್ತು ಚುರಾಚಂದಪುರದಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಆಡಳಿತ ಪಕ್ಷದ ನಾಯಕರೇ ಭೇಟಿ ನೀಡದೇ ಇರುವಾಗ ಕಾಂಗ್ರೆಸ್‌ನ ರಾಹುಲ್ ಗಾಂಧಿ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ. ರಾಹುಲ್ ಗಾಂಧಿ ಪ್ರವಾಸದ ಸಂದರ್ಭದಲ್ಲಿ ಎಲ್ಲಾ ಬಿಗಿ ಭದ್ರತೆಗಳನ್ನು ಕೈಗೊಳ್ಳಲಾಗಿದೆ.

ಮಣಿಪುರದಲ್ಲಿ ಮೇ 3 ರಿಂದ 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಪ್ರತಿಪಕ್ಷಗಳು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಒತ್ತಾಯಿಸುತ್ತಿವೆ. ಸರ್ಕಾರವು ರಾಜ್ಯದಲ್ಲಿ ಸುಮಾರು 36,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದೆ ಮತ್ತು 40 ಐಪಿಎಸ್ ಅಧಿಕಾರಿಗಳು ಮಣಿಪುರದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+