ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಚುನಾವಣೆ: ಭಾನುವಾರ ಬಿಜೆಪಿಯ ಮೊದಲ ಸಮನ್ವಯ ಸಮಿತಿ ಸಭೆ

|
Google Oneindia Kannada News

ನವದೆಹಲಿ, ಜೂನ್ 19: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷವು ಭಾನುವಾರ ಮೊದಲ ಸಮನ್ವಯ ಸಮಿತಿ ಸಭೆಯನ್ನು ಕರೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಷ್ಟ್ರಪತಿ ಅಭ್ಯರ್ಥಿ ಯಾರು? ಎನ್ನುವುದರ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

ರಾಷ್ಟ್ರಪತಿ ಅಭ್ಯರ್ಥಿಯ ಬಗ್ಗೆ ಎಲ್ಲಾ ಮಿತ್ರಪಕ್ಷಗಳೊಂದಿಗೆ ಚರ್ಚಿಸುವ ಮೂಲಕ ಒಮ್ಮತ ಮೂಡಿಸುವ ಜವಾಬ್ದಾರಿಯನ್ನು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೆಗಲಿಗೆ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ರಾಜ್ಯ ಘಟಕಗಳು ಮತ್ತು ಮಿತ್ರಪಕ್ಷಗಳೊಂದಿಗೆ ಸಮನ್ವಯ ಸಾಧಿಸಲು 14 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಿದೆ.

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಆಗಲ್ಲ ಎಂದ ಫಾರೂಕ್ ಅಬ್ದುಲ್ಲಾ! ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಆಗಲ್ಲ ಎಂದ ಫಾರೂಕ್ ಅಬ್ದುಲ್ಲಾ!

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರವಧಿಯು ಜುಲೈ 24ರಂದು ಕೊನೆಗೊಳ್ಳಲಿದ್ದು, ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವುದಕ್ಕಾಗಿ ಜುಲೈ 18ರಂದು ಚುನಾವಣೆ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ. ಈ ನಿಟ್ಟಿನಲ್ಲಿ ಅಭ್ಯರ್ಥಿ ಆಯ್ಕೆ ಹಾಗೂ ಚುನಾವಣೆ ಸಿದ್ಧತೆಗಳ ಬಗ್ಗೆ ಬಿಜೆಪಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದ್ದು, ಈಗಾಗಲೇ ಅದಕ್ಕಾಗಿ ತಂಡವನ್ನು ರಚನೆ ಮಾಡಲಾಗಿದೆ.

First BJP coordination committee meet on Sunday to discuss presidential Election

ಬಿಜೆಪಿಯ ತಂಡದಲ್ಲಿ ಇರುವ ನಾಯಕರು?: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅನ್ನು ಬಿಜೆಪಿ ತನ್ನ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರನ್ನಾಗಿ ನೇಮಿಸಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಸಿ. ಟಿ. ರವಿ ಕೂಡ ಈ ಸಮಿತಿಯ ಸಹ ಸಂಚಾಲಕರಾಗಿದ್ದಾರೆ.

ಈ ತಂಡದಲ್ಲಿ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, ಅಶ್ವಿನಿ ವೈಷ್ಣವ್ ಮತ್ತು ಸರ್ಬಾನಂದ ಸೋನೋವಾಲ್, ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಆರೋಗ್ಯ ಭಾರತಿ ಪವಾರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ರಾಷ್ಟ್ರೀಯ ಉಪಾಧ್ಯಕ್ಷ ಡಿಕೆ ಅರುಣಾ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ರಿತುರಾಜ್ ಸಿನ್ಹಾ ಕೂಡ ಇದ್ದಾರೆ.

First BJP coordination committee meet on Sunday to discuss presidential Election

ಮತ್ತೊಂದೆಡೆ, ಬಿಜೆಪಿ ಮಹಿಳಾ ವಿಭಾಗದ ಮುಖ್ಯಸ್ಥೆ ವನತಿ ಶ್ರೀನಿವಾಸ್, ಸಿಲ್ಚಾರ್‌ನ ಲೋಕಸಭಾ ಸಂಸದ ಡಾ ರಾಜ್‌ದೀಪ್ ರಾಯ್ ಮತ್ತು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಕೂಡ ಈ ಚುನಾವಣಾ ನಿರ್ವಹಣಾ ಸಮಿತಿಯ ಭಾಗವಾಗಿದ್ದಾರೆ. ಭಾನುವಾರ ಕರೆದಿರುವ ಬಿಜೆಪಿ ಸಮನ್ವಯ ಸಮಿತಿಯ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಸಮಿತಿಯ ಸದಸ್ಯರ ಪಾತ್ರ ಮತ್ತು ಅವರ ಜವಾಬ್ದಾರಿಗಳನ್ನು ವಿವರಿಸುವ ಸಾಧ್ಯತೆಗಳಿವೆ.

ಯಾವಾಗ ನಡೆಯಲಿದೆ ರಾಷ್ಟ್ರಪತಿ ಚುನಾವಣೆ?: ರಾಷ್ಟ್ರಪತಿ ಚುನಾವಣೆಗೆ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. 16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆಗೆ ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ 14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮನಾಥ್ ಕೋವಿಂದ್ ಜುಲೈ 25, 2017 ರಂದು ಅಧಿಕಾರ ವಹಿಸಿಕೊಂಡಿದ್ದು, ಅವರ ಅವಧಿಯು ಜುಲೈ 24, 2022 ರಂದು ಕೊನೆಗೊಳ್ಳುತ್ತದೆ.

English summary
First BJP coordination committee meet on Sunday to discuss presidential Election. Party president J. P. Nadda to chair meeting. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X