• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?

|

ನವದೆಹಲಿ, ಜನವರಿ.16: ರಾಷ್ಟ್ರ ರಾಜಧಾನಿಯಲ್ಲಿರುವ ಅಖಿಲ ಭಾರತ ವಿಜ್ಞಾನ ಮತ್ತು ವೈದ್ಯಕೀಯ ಸಂಸ್ಥೆ(ಏಮ್ಸ್)ಯಲ್ಲಿ ಮೊದಲ ಕೊವಿಡ್-19 ಲಸಿಕೆಯನ್ನು ಸ್ಯಾನಿಟೈಸರಿಂಗ್ ಸಿಬ್ಬಂದಿ ಮನೀಶ್ ಕುಮಾರ್ ಅವರಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

   ಮಂಡ್ಯ: 8 ಲಸಿಕ ಕೇಂದ್ರಗಳಲ್ಲಿ ಕೊರೊನಾ ಲಸಿಕೆ ವಿತರಣೆ, ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ | Oneindia Kannada

   ದೇಶದಲ್ಲಿ ಕೊವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಮೊದಲ ದಿನ 3 ಲಕ್ಷ ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿತ್ತು. ಆದರೆ 1.65 ಲಕ್ಷ ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಅಧಿಕೃತವಾಗಿ ಮಾಹಿತಿ ನೀಡಿದೆ.

   ಕೊವಿಡ್-19 ಲಸಿಕೆ ಬೇಕೇ; ಈ ದಾಖಲೆಗಳೊಂದಿಗೆ ನಿಯಮ ಅನುಸರಿಸಿ!

   ಭಾರತದಾದ್ಯಂತ 3351 ಕೊರೊನಾ ಲಸಿಕೆ ಕೇಂದ್ರಗಳಲ್ಲಿ ಮೊದಲ ದಿನ 1,65,714 ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆಯನ್ನು ಯಶಸ್ವಿಯಾಗಿ ನೀಡಲಾಗಿದೆ. ಕೊವಿಡ್-19 ಲಸಿಕೆ ವಿತರಣೆ ಕಾರ್ಯದಲ್ಲಿ 16,755 ವೈದ್ಯಕೀಯ ಸಿಬ್ಬಂದಿ ಭಾಗಿಯಾಗಿದ್ದರು ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

   ಕರ್ನಾಟಕದಲ್ಲಿ ಒಂದೇ ದಿನ 24,300 ಕೊರೊನಾ ಯೋಧರಿಗೆ ಲಸಿಕೆ

   ದೇಶದ 11 ರಾಜ್ಯಗಳಲ್ಲಿ ಕೊರೊನಾ ಲಸಿಕೆ:

   ಭಾರತದಲ್ಲಿ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿರುವ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿರುವ ಕೊವ್ಯಾಕ್ಸಿಲ್ ಲಸಿಕೆಯನ್ನು ಮೊದಲ ಹಂತದಲ್ಲಿ 11 ರಾಜ್ಯಗಳಲ್ಲಿ ನೀಡಲಾಯಿತು. ಅಸ್ಸಾಂ, ಬಿಹಾರ, ಹರಿಯಾಣ, ಕರ್ನಾಟಕ, ಒಡಿಶಾ, ರಾಜಸ್ಥಾನ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ನವದೆಹಲಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

   English summary
   First Day 1.65 Lakh Peoples Are Got Coronavirus Vaccinated At India: Health Ministry.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X