ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒರಿಸ್ಸಾದಲ್ಲಿ ನವೀನ್ ಪಟ್ನಾಯಕ್ ಗೆ ತಲೆನೋವಾದ ಬಿಜೆಪಿ ಸಾಧನೆ

ಒರಿಸ್ಸಾದಲ್ಲಿ ಸ್ಥಳೀಯ ಸಂಸ್ಥೆಗಳಿಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಊಹಿಸಲೂ ಅಸಾಧ್ಯವಾದ ಸಾಧನೆ ಮಾಡುವ ಮೂಲಕ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗೆ ಇದು ತಲೆನೋವಾಗಿ ಪರಿಣಮಿಸಿದೆ.

|
Google Oneindia Kannada News

ಭುವನೇಶ್ವರ, ಫೆ 19: ಒರಿಸ್ಸಾದಲ್ಲಿ ಸ್ಥಳೀಯ ಸಂಸ್ಥೆಗಳಿಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಊಹಿಸಲೂ ಅಸಾಧ್ಯವಾದ ಸಾಧನೆ ಮಾಡುವ ಮೂಲಕ, ಬಿಜೆಪಿಯ ಈ ಸಾಧನೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗೆ ತಲೆನೋವಾಗಿ ಪರಿಣಮಿಸಿದೆ.

ಮೂರು ಹಂತದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೊದಲ ಹಂತದ ಚುನಾವಣೆ ಈಗಾಗಲೇ ಮುಗಿದಿದ್ದು, ಎರಡನೇ ಹಂತದ ಚುನಾವಣೆ ಭಾನುವಾರ (ಫೆ 19) ನಡೆಯುತ್ತಿದ್ದರೆ, ಕೊನೆಯ ಹಂತದ ಚುನಾವಣೆ ಫೆ 21ರಂದು ನಡೆಯಲಿದೆ. ಫೆಬ್ರವರಿ 25ರಂದು ಫಲಿತಾಂಶ ಹೊರಬೀಳಲಿದೆ.

 First time in the history, BJP impressive performance in Odisha

ಸ್ಥಳೀಯ ಅಧಿಕಾರಿಗಳ ಮಾಹಿತಿಯ ಪ್ರಕಾರ ಮೊದಲ ಹಂತದಲ್ಲಿ 537 ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಅದರಲ್ಲಿ ನವೀನ್ ಪಟ್ನಾಯಕ್ ಅವರ ಬಿಜೆಡಿ 300, ಬಿಜೆಪಿ 180 ಮತ್ತು ಕಾಂಗ್ರೆಸ್ 40ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಇನ್ನು ನಾಲ್ಕು ಜಿಲ್ಲೆಗಳಲ್ಲಿ ಬಿಜೆಪಿ ಯಾರ ಬೆಂಬಲವೂ ಇಲ್ಲದೇ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಾಲಹಂದಿ, ಮಯೂರಬಂಜ್, ಭರ್ಗಾ ಮತ್ತು ಬಾಲಂಗೀರ್ ಜಿಲ್ಲೆಗಳಲ್ಲಿ ಬಿಜೆಪಿ ತನ್ನ ಪ್ರಾಭಲ್ಯ ಸ್ಥಾಪಿಸಿದೆ.

ಬಲ್ಲ ಮಾಹಿತಿಗಳ ಪ್ರಕಾರ, ಮೊದಲ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್ ದಯನೀಯ ಸೋಲು ಅನುಭವಿಸಿದೆ. ಕಳೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ (2012) ಬಿಜೆಪಿ ಖಾತೆಯನ್ನೇ ತೆರೆದಿರಲಿಲ್ಲ.

ಬಿಜೆಪಿಯ ಈ ಸಾಧನೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಈಗಾಗಲೇ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. (ಮಾಹಿತಿ : ಟೈಮ್ಸ್ ಆಫ್ ಇಂಡಿಯಾ)

English summary
Odisha civic polls, BJP for the first time is on the verge of ruling zila parishads (ZPs) in at least four districts on its own. BJP's impressive performance is a big worry for chief minister Naveen Patnaik.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X