Lok Sabha Elections 2024: ಗೆಲುವಿನ ಖಾತೆಯನ್ನು ತೆರೆದ ಬಿಜೆಪಿ
ಸೂರತ್ ಏಪ್ರಿಲ್ 22: ಭಾರತದಲ್ಲಿ ಲೋಕಸಭಾ ಚುನಾವಣೆಗೆ ಮೊದಲನೇ ಹಂತದ ಮತದಾನ ಪೂರ್ಣಗೊಂಡಿದೆ. ಇನ್ನೂ ಆರು ಹಂತದ ಮತದಾನ ನಡೆಯಬೇಕಿದೆ. ಅದಾಗಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಹೌದು... ಚುನಾವಣೆಗೂ ಮುನ್ನ ಬಿಜೆಪಿ ಗೆಲುವು ಕಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಕೇಸರಿ ಬಾವುಟವನ್ನು ಆರಿಸಿದೆ. ಲೋಕಸಭೆ ಚುನಾವಣೆಗೂ ಮುನ್ನ ಸೂರತ್‌ನಲ್ಲಿ ಬಿಜೆಪಿ ಭರ್ಜರಿ ಜಯ ಕಂಡಿದ್ದು ಗೆಲುವಿನ ಬಾವುಟ ಹಾರಿಸಿದೆ.

ಸೂರತ್‌ನಲ್ಲಿ ಒಟ್ಟು ಎಂಟು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಆದರೆ ಆರು ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ. ಇನ್ನುಳಿದ ಅಭ್ಯರ್ಥಿ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಅದನ್ನು ತಿರಸ್ಕರಿಸಲಾಗಿದೆ. ಹೀಗಾಗಿ ಸೂರತ್‌ನಲ್ಲಿ ಬಿಜೆಪಿ ಚುನಾವಣೆಗೂ ಮುನ್ನ ಎದುರಾಳಿಗಳಿಲ್ಲದೆ ಗೆಲವು ಸಾಧಿಸಿದೆ.
માનનીય પ્રધાનમંત્રી શ્રી નરેન્દ્રભાઇ મોદી સાહેબને સુરતે પહેલું કમળ અર્પણ કર્યું !!
— C R Paatil (Modi Ka Parivar) (@CRPaatil) April 22, 2024
સુરત લોકસભા બેઠકના ઉમેદવાર શ્રી મુકેશભાઇ દલાલને બિનહરીફ ચૂંટાવવા બદલ ખૂબ ખૂબ અભિનંદન અને શુભેચ્છાઓ પાઠવ્યા !! #PhirEKBarModiSarkar#AbkiBaar400Paar pic.twitter.com/w87WSrla5s
ಸೂರತ್ ಲೋಕಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನಾಂಕವಾಗಿತ್ತು. ಆದರೆ ಅಭ್ಯರ್ಥಿಗಳು ಸ್ಪರ್ಧೆಯಿಂದ ಹಿಂದೆ ಸರಿದಿದ್ದು ಬಿಜೆಪಿಯ ಮುಖೇಶ್ ದಲಾಲ್ (Mukesh Dalal) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಮಾತನಾಡಿದ ಗುಜರಾತ್ ಘಟಕದ ಮುಖ್ಯಸ್ಥ ಸಿಆರ್ ಪಾಟೀಲ್ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂರತ್ ಮೊದಲ ಉಡುಗೊರೆಯನ್ನು ನೀಡಿದೆ. ಸೂರತ್ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ' ಎಂದು ಹೇಳಿದರು.
ಅಂದಹಾಗೆ ಸೂರತ್ ಚುನಾವಣಾ ಅಖಾಡದಲ್ಲಿ ಇಳಿಯಲು ಒಟ್ಟು ಎಂಟು ಜನ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದರು. ಇವರಲ್ಲಿ ಏಳು ಜನ ಪಕ್ಷೇತರ ಅಭ್ಯರ್ಥಿಗಳಾಗಿದ್ದರು. ಆದರೆ ಇವರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.
ಸೂರತ್‌ನ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ (Nilesh Kumbhani) ಅವರ ನಾಮಪತ್ರದ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸೌರಭ್ ಪರ್ಘಿ (Saurabh Parghi) ಅವರು ಭಾನುವಾರ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಮಾತ್ರವಲ್ಲದೆ ಸೂರತ್‌ನಿಂದ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವೂ ಅಮಾನ್ಯವಾಗಿದೆ.
ಇನ್ನೂ ನಾಲ್ಕು ಕಾಂಗ್ರೆಸ್ ಅಭ್ಯರ್ಥಿಗಳು ಸಲ್ಲಿಸಿರುವ ನಾಲ್ಕು ನಾಮಪತ್ರಗಳು ಅಸಲಿಯಾಗಿ ಕಂಡುಬಂದಿಲ್ಲ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಇದರಿಂದಾಗಿ ಅಮಗೆ ಅನ್ಯಾಯವಾಗಿದೆ ಎಂದು ನ್ಯಾಕ್ಕಾಗಿ ಕಾಂಗ್ರೆಸ್ ಹೈಕೋರ್ಟ್ ಮತ್ತು ಸುಪ್ರೀ ಕೋರ್ಟ್‌ಗೆ ಮೊರೆ ಹೋಗಲಿದೆ.












Click it and Unblock the Notifications