ತೆಲಂಗಾಣಕ್ಕೆ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿ ನೇಮಕ, ಯಾರು ತಿಳಿಯಿರಿ?
ಹೈದರಾಬಾದ್, ಜನವರಿ 11: ತೆಲಂಗಾಣ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎ ಶಾಂತಿ ಕುಮಾರಿ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ ಶಾಂತಿ ಕುಮಾರಿ ತೆಲಂಗಾಣದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.
ಆಂಧ್ರಪ್ರದೇಶ ಕೇಡರ್‌ಗೆ ಹಾಲಿ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರ ಹಂಚಿಕೆಗೆ ತಡೆ ನೀಡಿ, ಹೈದರಾಬಾದ್ ಪೀಠದ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಶಾಂತಿ ಕುಮಾರಿ ಅವರ ನೇಮಕವಾಗಿದೆ. ಈ ಮೂಲಕ ಶಾಂತಿ ಕುಮಾರಿ ತೆಲಂಗಾಣದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.
ಕೋರ್ಟ್ ಆದೇಶದ ಬಳಿಕ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಶಾಂತಿಕುಮಾರಿ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲು ನಿರ್ಧರಿಸಿದರು. ಈ ಕುರಿತು ಸರ್ಕಾರಿ ಆದೇಶವನ್ನು (ಜಿಒ) ಹೊರಡಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಶಾಂತಿ ಕುಮಾರಿ ಸಿಎಂ ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ನೇಮಕಾತಿಗಾಗಿ ಧನ್ಯವಾದ ಸಲ್ಲಿಸಿದರು.

1989 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಂತಿ ಕುಮಾರಿ ಅವರು ಅರಣ್ಯ ಇಲಾಖೆಯಲ್ಲಿ ವಿಶೇಷ ಮುಖ್ಯ ಕಾರ್ಯದರ್ಶಿ, ಸಿಎಂ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಮತ್ತು ಆರೋಗ್ಯ ಮತ್ತು ಇತರ ಇಲಾಖೆಗಳಲ್ಲಿ ಹಿರಿಯ ಅಧಿಕಾರಿಯಾಗಿ ಹಲವಾರು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಹಾಲಿ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರನ್ನು ಆಂಧ್ರಪ್ರದೇಶ ಕೇಡರ್‌ಗೆ ಹಂಚಿಕೆ ಮಾಡುವುದನ್ನು ತಡೆಯುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ), ಹೈದರಾಬಾದ್ ಪೀಠದ ಆದೇಶವನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿತು. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರ್ದೇಶನದಂತೆ ಸೋಮೇಶ್ ಕುಮಾರ್ ಅವರು ಗುರುವಾರ ಆಂಧ್ರಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಇಂದು ತಿಳಿಸಿವೆ. "ಸೋಮೇಶ್ ಕುಮಾರ್ ನಾಳೆ (ಜನವರಿ 12) ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿಗೆ ವರದಿ ಮಾಡಲು ವಿಜಯವಾಡಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications