Delhi Election: ದೆಹಲಿ ಚುನಾವಣೆ ಕಣದಲ್ಲಿರುವ ಐವರು ಶತಕೋಟ್ಯಧಿಪತಿಗಳು ಇವರು!

ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಎಎಪಿ ನಡುವೆ ಈ ಬಾರಿ ಚುನಾವಣೆಯಲ್ಲಿ ರೋಚಕ ಸೆಣೆಸಾಟ ಇರುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ. ದೆಹಲಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಸ್ತಿ ವಿವರ ಕುತೂಹಲ ಮೂಡಿಸಿದೆ. ಅದರಲ್ಲೂ ಐವರು ಅಭ್ಯರ್ಥಿಗಳು 100 ಕೋಟಿ ರೂಪಾಯಿಗೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ.

ಚುನಾವಣಾ ಕಾವಲು ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳು ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದೆ. ದೆಹಲಿ 2025 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 699 ಅಭ್ಯರ್ಥಿಗಳ ಆಸ್ತಿ ಘೋಷಣೆ ಮಾಡಿರುವ ಅಫಿಡವಿಟ್‌ಗಳನ್ನು ಎಡಿಆರ್ ಪರಿಶೀಲನೆ ನಡೆಸಿದೆ.

five billionaires contesting delhi elections bjp

ಶತಕೋಟ್ಯಧಿಪತಿಗಳಲ್ಲಿ ಮೂವರು ಬಿಜೆಪಿಯವರಾಗಿದ್ದರೆ. ಕಾಂಗ್ರೆಸ್, ಎಎಪಿ ಪಕ್ಷದಲ್ಲಿ ತಲಾ ಒಬ್ಬರು ಶತಕೋಟ್ಯಧಿಪತಿ ಅಭ್ಯರ್ಥಿಗಳಿದ್ದಾರೆ. ಶಕುರ್ ಬಸ್ತಿ ಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಕರ್ನೈಲ್ ಸಿಂಗ್, ₹259 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದಾರೆ.

ರಾಜೌರಿ ಗಾರ್ಡನ್‌ನಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಂಜಿಂದರ್ ಸಿಂಗ್ ಸಿರ್ಸಾ, ₹248 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು ಎರಡನೇ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ಕೂಡ ಶತಕೋಟ್ಯಧಿಪತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕೃಷ್ಣ ನಗರದಿಂದ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ನಾಯಕ ಗುರುಚರಣ್ ಸಿಂಗ್, 130 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ರಾಜೌರಿ ಗಾರ್ಡನ್‌ನ ಎಎಪಿ ಅಭ್ಯರ್ಥಿ ಧನ್ವತಿ ಚಂದೇಲಾ 109 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ 699 ಅಭ್ಯರ್ಥಿಗಳಲ್ಲಿ 5 ಜನ ಶತಕೋಟ್ಯಧಿಪತಿಗಳಾಗಿದ್ದಾರೆ. 699 ಅಭ್ಯರ್ಥಿಗಳ ಒಟ್ಟು ಆಸ್ತಿ ₹3,952 ಕೋಟಿಗಳಷ್ಟಿದೆ ಎಂದು ಎಡಿಆರ್ ವರದಿ ತಿಳಿಸಿದೆ. ಇದರಲ್ಲಿ 23 ಅಭ್ಯರ್ಥಿಗಳು ₹50 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ.

ಕಡಿಮೆ ಆಸ್ತಿ ಹೊಂದಿರುವ ಅಭ್ಯರ್ಥಿಗಳು

ಅಂಬೇಡ್ಕರ್ ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಸ್ವತಂತ್ರ ಅಭ್ಯರ್ಥಿ ಅಶೋಕ್ ಕುಮಾರ್ 6,000 ರೂಪಾಯಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದು ಕಡಿಮೆ ಆಸ್ತಿ ಹೊಂದಿರುವ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ನವದೆಹಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಅನಿತಾ 9,000 ರೂಪಾಯಿ ಆಸ್ತಿ ಮೌಲ್ಯ ಘೋಷಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+