ಗಡಿ ನಿಯಂತ್ರಣ ರೇಖೆ ಬಳಿ ಐವರು ನಾಗರಿಕರ ದುರ್ಮರಣ
ಶ್ರೀನಗರ, ಮಾರ್ಚ್ 18: ಭಾರತ ಹಾಗೂ ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಾಗರಿಕರು ದುರಂತ ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಮೃತಪಟ್ಟಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಮೆಂಧರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಡೆಸಿದ ಶೆಲ್ಲಿಂಗ್ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ದಾಳಿ ನಡೆಸಿದೆ.
ಮೃತರನ್ನು ಸ್ಥಳೀಯ ನಿವಾಸಿಗಳಾದ ಚೌಧರಿ ರಮ್ಜಾನ್, ಅವರ ಪತ್ನಿ ಮಾಲ್ಕ ಬಿ ಹಾಗೂ ಮೂವರು ಪುತ್ರರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.












Click it and Unblock the Notifications