ಜಮ್ಮು ಕಾಶ್ಮೀರ: ಕುಪ್ವಾರದಲ್ಲಿ ಗುಂಡಿನ ಚಕಮಕಿ, ಐವರು ವಿದೇಶಿ ಭಯೋತ್ಪಾದಕರ ಹತ್ಯೆ
ಶ್ರೀನಗರ, ಜೂನ್. 16: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಸೇನೆ ಮತ್ತು ಪೊಲೀಸರ ಜಂಟಿ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ. ಎಲ್‌ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದ ನಂತರ ಎನ್‌ಕೌಂಟರ್ ನಡೆದಿದೆ.

An #encounter has started between #terrorists and joint parties of Army & Police on a specific input of Kupwara Police in Jumagund area of LoC of #Kupwara district. Further details shall follow.@JmuKmrPolice
— Kashmir Zone Police (@KashmirPolice) June 15, 2023
"ಕುಪ್ವಾರಾ ಜಿಲ್ಲೆಯ ಎಲ್‌ಒಸಿಯ ಜುಮಗುಂಡ್ ಪ್ರದೇಶದಲ್ಲಿ ಕುಪ್ವಾರ ಪೊಲೀಸರ ನಿರ್ದಿಷ್ಟ ಮಾಹಿತಿ ಮೇರೆಗೆ ಭಯೋತ್ಪಾದಕರು ಮತ್ತು ಸೇನೆ ಮತ್ತು ಪೊಲೀಸರ ಜಂಟಿ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಜೂನ್ 13 ರಂದು ಕುಪ್ವಾರದ ಎಲ್‌ಒಸಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾಶ್ಮೀರ ವಲಯ ಪೊಲೀಸರು ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ದೋಬನಾರ್ ಮಚ್ಚಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
"ಕುಪ್ವಾರಾ ಜಿಲ್ಲೆಯ ದೋಬನಾರ್ ಮಚ್ಚಲ್ ಪ್ರದೇಶದಲ್ಲಿ (ಎಲ್‌ಒಸಿ) ಸೇನೆ ಮತ್ತು ಕುಪ್ವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು (02) ಭಯೋತ್ಪಾದಕರನ್ನು ರನ್‌ಕೌಂಟರ್ ಮಾಡಲಾಗಿದೆ. ಶೋಧ ಇನ್ನೂ ಮುಂದುವರೆದಿದೆ" ಎಂದು ಟ್ವೀಟ್ ಮಾಲಾಗಿತ್ತು.
ಈ ತಿಂಗಳ ಆರಂಭದಲ್ಲಿ ಅಂದರೆ ಜೂನ್ 2 ರಂದು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ರಜೌರಿ ಬಳಿಯ ದಸ್ಸಾಲ್ ಗುಜ್ರಾನ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ನಂತರ ಸೇನೆ ಮತ್ತು ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ತಿಳಿಸಿದ್ದರು.












Click it and Unblock the Notifications