Accident News: ಎರಡು ಕಾರುಗಳ ನಡುವೆ ಭೀಕರ ಅಪಘಾತ: ಐವರು ಸಾವು
Accident News: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕರ್ನಾಟಕ ಮೂಲದ 5 ಜನ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇವರು ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿ ದರ್ಶನ ಮುಗಿಸಿಕೊಂಡು ಊರಿನ ಕಡೆಗೆ ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಸ್ವಿಫ್ಟ್ ಡಿಜೈರ್‌ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫಾರ್ಚೂನರ್ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರಲ್ಲಿ ಮೂವರು ವಯಸ್ಕರು ಮತ್ತು ಇಬ್ಬರು ಮಕ್ಕಳು ಎಂದು ತಿಳಿದುಬಂದಿದೆ.
ಅಡೋನಿ ಕಡೆಗೆ ಪ್ರಯಾಣಿಸುತ್ತಿದ್ದ ಫಾರ್ಚೂನರ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಹಿನ್ನೆಲೆ ಎದುರುಗಡೆ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಅಪಘಾತದಲ್ಲಿ ಮೃತರು ಕರ್ನಾಟಕದವರಾಗಿದ್ದು, ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೋಗಿ ವಾಪಾಸ್ ಆಗುತ್ತಿದ್ದರು, ಬಗ್ಗೆ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.
ಅಪಘಾತದಲ್ಲಿ ಪುಟ್ಟ ಮಗು ಸಾವು: ಆಟೋ-ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಈ ವೇಳೆ ಪುಟ್ಟ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಲ್ಲೂಕಿನಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಓವರ್ಟೇಕ್ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿ ಹೊಡೆದಿದೆ.
ಸುಳ್ಯ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಚಾಲಕ ಬಸ್ನ ಓವರ್ಟೇಕ್ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯ ಆಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿತ್ತು. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀರು ಪ್ರಕರಣ ದಾಖಲು ಮಾಡಿಕೊಂಡಿದ್ದರು.












Click it and Unblock the Notifications