ಆಂಧ್ರದಲ್ಲಿ ಅಪಘಾತ, ನೆಲಮಂಗಲ ಮೂಲದ ಐವರ ಸಾವು

Posted By:
Subscribe to Oneindia Kannada

ಅನಂತಪುರ, ಜುಲೈ 23 : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಪತಿಗೆ ಹೊರಟಿದ್ದ ಬೆಂಗಳೂರು ಮೂಲದ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 6 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅನಂತಪುರ ಜಿಲ್ಲೆಯ ಮುದಿಗುಬ್ಬ ಮಂಡಲದ ಸಂಕೇಪಲ್ಲಿ ಎಂಬಲ್ಲಿ ಶನಿವಾರ ಮುಂಜಾನೆ ಲಾರಿ ಮತ್ತು ಟವೇರಾ ಮುಖಾಮುಖಿ ಡಿಕ್ಕಿಯಾಗಿವೆ. ಮಗು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.[ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

road accident

ಮೃತಪಟ್ಟವರೆಲ್ಲಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮೂಲದವರು. ಟವೇರಾದಲ್ಲಿ ಬೆಂಗಳೂರಿಂದ 11 ಜನರು ತಿರುಪತಿಗೆ ತೆರಳುತ್ತಿದ್ದರು. ಮುದಿಗುಬ್ಬ ಸಮೀಪ ಲಾರಿ ಟವೇರಾಕ್ಕೆ ಡಿಕ್ಕಿ ಹೊಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. [ಅಪಘಾತವಾದಾಗ ಜೀವ ಉಳಿಸಲು ನೆರವಾಗಿ]

Also Read : ತಿರುಪತಿಯಲ್ಲಿ ಉರುಳು ಸೇವೆ ಮಾಡಲು ಆಧಾರ್ ಕಡ್ಡಾಯ!

ಅಪಘಾತದಲ್ಲಿ 6 ಜನರು ಗಾಯಗೊಂಡಿದ್ದು, ಅನಂತಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಲಾರಿ ಚಾಲಕ ಪಾನಮತ್ತನಾಗಿದ್ದ ಎಂದು ಶಂಕಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru Nelamangala based five killed in road accident at Mudigubba, Anantapur district Andhra Pradesh on Saturday, July 23 early morning.
Please Wait while comments are loading...