ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಛತ್ತೀಸ್‌ಗಡದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ; ಐವರು ಯೋಧರ ಸಾವು

|
Google Oneindia Kannada News

ಬಿಜಾಪುರ, ಏಪ್ರಿಲ್ 3: ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಮಾವೋವಾದಿ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಐವರು ಸಿಬ್ಬಂದಿ ಸಾವನ್ನಪ್ಪಿದ್ದು, ಹನ್ನೆರಡು ಮಂದಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ತಾರೆಂ ಸಮೀಪದ ಸಿಲಿಗಾರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಭದ್ರತಾ ಪಡೆ ತೆರಳಿದ್ದ ಸಂದರ್ಭ ಗುಂಡಿನ ಕಾಳಗ ನಡೆದಿದ್ದು, ಐವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಛತ್ತೀಸ್‌ಗಡ ಪೊಲೀಸ್ ಮಹಾನಿರ್ದೇಶಕ ಡಿಎಂ ಅವಾಸ್ಥಿ ಮಾಹಿತಿ ನೀಡಿದ್ದಾರೆ.

Five Security Personnel Killed In Encounter With Naxals In Chhattisgarh

ಈ ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್ ಕಮಾಂಡೊ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್ ಯುನಿಟ್, ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ಹಾಗೂ ವಿಶೇಷ ಭದ್ರತಾ ಪಡೆಯ ಸಿಬ್ಬಂದಿ ಇದ್ದರು.

ಎನ್‌ಕೌಂಟರ್‌ನಲ್ಲಿ ಹನ್ನೆರಡು ಮಂದಿ ಗಾಯಗೊಂಡಿದ್ದು, ಕೆಲವು ನಕ್ಸಲರು ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಮಹಿಳಾ ನಕ್ಸಲ್ ಶವ ಪತ್ತೆಯಾಗಿದೆ ಎಂದು ನಕ್ಸಲ್ ವಿರೋಧಿ ಕಾರ್ಯಾಚರಣೆ ಡಿಜಿ ಒಪಿ ಪಾಲ್ ತಿಳಿಸಿದ್ದಾರೆ.

English summary
Five security personnel were killed and 12 others injured in an encounter with Naxals in Chhattisgarh's Bijapur district on Saturday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X