• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

1500 ದೇಶೀಯ ವಿಮಾನ ಪ್ರಯಾಣಿಕರಿಗೆ ಕೊರೊನಾ ಸೋಂಕು

|

ನವದೆಹಲಿ, ಆಗಸ್ಟ್ 04: ಕೊರೊನಾ ಲಾಕ್‌ಡೌನ್ ನಂತರ ದೇಶೀಯ ವಿಮಾನಗಳ ಕಾರ್ಯಾಚರಣೆ ಆರಂಭಗೊಂಡ ಬಳಿಕ ಇಲ್ಲಿಯವರೆಗೆ ಒಟ್ಟು 1500 ಪ್ರಯಾಣಿಕರಿಗೆ ಕೊರೊನಾ ಸೋಂಕು ತಗುಲಿದೆ.

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೀಡಿದ ಮಾಹಿತಿ ಪ್ರಕಾರ, ಮೇ 25 ರಿಂದ ಜೂನ್ 30ರವರೆಗೆ 45 ಲಕ್ಷ ಪ್ರಯಾಣಿಕರು ದೇಶೀಯ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.

ಆಗಸ್ಟ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ ವಿಸ್ತರಣೆ

ಪಂಜಾಬ್, ಉತ್ತರಾಖಂಡ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತ್ರಿಪುರ, ಆಂಧ್ರಪ್ರದೇಶದಿಂದ ಹೆಚ್ಚಿನ ಮಂದಿಯನ್ನು ಕೇವಲ ಏರ್‌ಪೋರ್ಟ್‌ಲ್ಲಿ ತಪಾಸಣೆ ನಡೆಸಲಾಗಿತ್ತು.

ಮಧ್ಯಪ್ರದೇಶ, ಗೋವಾ, ಪಶ್ಚಿಮ ಬಂಗಾಳ, ಛತ್ತೀಸ್‌ಗಢದಲ್ಲಿ ಲಕ್ಷಣವಿದ್ದವರನ್ನು ಮಾತ್ರ ಪರೀಕ್ಷಿಸಲಾಗಿತ್ತು.ಕೆಲವು ಬಾರಿ ತಾವು ತೆರಳು ಪ್ರದೇಶಗಳಿಗೆ ಹೋದ ಬಳಿಕ ಅವರಲ್ಲಿ ಕೊರೊನಾ ಸೋಂಕು ಕಂಡುಬಂದಿತ್ತು.

ಆದರೆ ಕೇಂದ್ರ ಸರ್ಕಾರದ ನಿಯಮವನ್ನು ಎಷ್ಟು ರಾಜ್ಯಗಳು ಪಾಲಿಸುತ್ತಿವೆ ಎಂಬುದನ್ನು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಮಹಾರಾಷ್ಟ್ರ, ಗುಜರಾತ್, ಚೆನ್ನೈ, ತಮಿಳುನಾಡಿನಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೊವಿಡ್ ಪರೀಕ್ಷೆ ಮಾಡಿಸಿರಲೇಬೇಕು.

English summary
Of the total number of passengers that have flown on domestic flights since resumption of services on May 25, around 1,500 have tested positive for coronavirus at their destinations, according to official data.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X