Flood in Delhi: ದೆಹಲಿಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ- ರಾಷ್ಟ್ರ ರಾಜಧಾನಿಗೆ ಜಲಪ್ರಳಯದ ಭೀತಿ

ನವದೆಹಲಿ, ಜುಲೈ 10: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಕೆಲ ದಶಕಗಳ ನಂತರ ಯಮುನಾ ನಡಿ ಅಪಾಯದ ಮಟ್ಟವನ್ನೂ ಮೀರಿ ಹರಿಯುತ್ತಿದೆ. 204.5 ಮೀಟರ್‌ಗಳ ಅಪಾಯದ ಗಡಿಯಲ್ಲಿ ಯಮುನಾ ನದಿ ಹರಿಯುತ್ತಿದೆ ಎಂದು ಸರ್ಕಾರ ತಿಳಿಸಿದೆ. 205.33 ಮೀಟರ್‌ ತಲುಪಿದರೆ, ದೆಹಲಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ಹಳೆ ರೈಲ್ವೆ ಸೇತುವೆ ಬಳಿ ನೀರಿನ ಮಟ್ಟವು ಸೋಮವಾರ ಮಧ್ಯರಾತ್ರಿ 1 ಗಂಟೆಗೆ 203.46 ಮೀಟರ್‌ಗಳಿಂದ ಮಧ್ಯಾಹ್ನ 2 ಗಂಟೆ ಸುಮಾರಿಗೆ 204.50 ಮೀಟರ್‌ಗೆ ಏರಿದೆ.

Flood in Delhi

ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಯಮುನಾ ನದಿಯು 206 ಮೀಟರ್ ಗಡಿಯನ್ನು ದಾಟಿದ ನಂತರ ಸುತ್ತಮುತ್ತಲಿನ ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ದೆಹಲಿಯಲ್ಲಿ ಪ್ರವಾಹದಂತಹ ಪರಿಸ್ಥಿತಿ ಬರುವುದಿಲ್ಲ. ಒಂದು ವೇಳೆ, ಪ್ರವಾಹ ಸಂಭವಿಸಿದರೂ, ಅದಕ್ಕೆ ಸರ್ಕಾರವು ಸಿದ್ಧವಾಗಿದೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ಇಂತಹ ಕುಂಭದ್ರೋಣ ಮಳೆಯನ್ನು ನಿಭಾಯಿಸಲು ದೆಹಲಿಯ ಒಳಚರಂಡಿ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಬೇಕಿದೆ ಎಂದು ಅವರು ತಿಳಿಸಿದರು.

ಹವಾಮಾನ ಮುನ್ಸೂಚನೆಗಳ ಪ್ರಕಾರ, ಯಮುನಾದಲ್ಲಿ ನೀರಿನ ಮಟ್ಟವು ತುಂಬಾ ಹೆಚ್ಚಾಗುವ ನಿರೀಕ್ಷೆಯಿಲ್ಲ. ಪ್ರವಾಹದಂತಹ ಪರಿಸ್ಥಿತಿ ಉಂಟಾಗುವು ಸಾಧ್ಯತೆ ಕಡಿಮೆ ಇದೆ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

Flood in Delhi

ಜುಲೈ 8 ಮತ್ತು 9 ರಂದು ದೆಹಲಿಯಲ್ಲಿ 153 ಮಿಮೀ ಮಳೆಯಾಗಿದೆ. ಇಂತಹ ರಣಮಳೆಯನ್ನು ತೆಗೆದುಕೊಳ್ಳಲು ದೆಹಲಿಯ ವ್ಯವಸ್ಥೆಗಳು ವಿನ್ಯಾಸಗೊಂಡಿಲ್ಲ. ಆದ್ದರಿಂದ ಜನರು ತೊಂದರೆಗಳನ್ನು ಎದುರಿಸಿದರು ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ದೆಹಲಿ ಸಚಿವೆ ಅತಿಶಿ ಅವರು ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡಿದ್ದಾರೆ. ಯಮುನಾ ನದಿಯ ಮೇಲ್ಭಾಗಕ್ಕೆ ಹೆಚ್ಚಿನ ಪ್ರಮಾಣದ ನೀರನ್ನು ಬಿಡಲಾಗುತ್ತಿರುವುದರಿಂದ ಮಂಗಳವಾರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಅಪಾಯದ ಮಟ್ಟವನ್ನು ದಾಟುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

'ಭಾನುವಾರ ಬೆಳಗಿನ ಜಾವದವರೆಗೆ ಹರಿಯಾಣದಿಂದ ಯಮುನಾ ನದಿಗೆ ಸುಮಾರು 43,000 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಇದೀಗ ಸುಮಾರು ಮೂರು ಲಕ್ಷ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆ 10-11 ಗಂಟೆ ಸುಮಾರಿಗೆ ಯಮುನಾದಲ್ಲಿ ನೀರಿನ ಮಟ್ಟ ಅಪಾಯದ ಮಟ್ಟ ತಲುಪುವ ನಿರೀಕ್ಷೆಯಿದೆ' ಎಂದು ಅತಿಶಿ ಪಿಟಿಐಗೆ ತಿಳಿಸಿದ್ದಾರೆ.

Flood in Delhi

ಪ್ರವಾಹ ಪೀಡಿತ ಪ್ರದೇಶಗಳು ಮತ್ತು ಯಮುನಾ ನದಿಯ ನೀರಿನ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಕೇಜ್ರಿವಾಲ್ ಸರ್ಕಾರವು ಕೇಂದ್ರ ನಿಯಂತ್ರಣ ಕೊಠಡಿ ಸೇರಿದಂತೆ 16 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ.

ಭಾನುವಾರ ಬೆಳಿಗ್ಗೆ 8:30 ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 153 ಮಿಮೀ ಮಳೆಯಾಗಿದೆ. 1982 ರಿಂದ ಈ ವರೆಗೆ ಇಷ್ಟೊಂದು ದಾಖಲಾಗಿಲ್ಲ. ದಶಕಗಳ ನಂತರ ದೆಹಲಿ ಕಂಡ ಅತಿ ಹೆಚ್ಚು ಮಳೆ ಇದಾಗಿದೆ.

ಸೋಮವಾರ ಬೆಳಿಗ್ಗೆ 8:30 ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ, ರಾಷ್ಟ್ರ ರಾಜಧಾನಿಯಾದ್ಯಂತ 107 ಮಿಮೀ ಹೆಚ್ಚುವರಿ ಮಳೆಯಾಗಲಿದೆ. ಹಲವಾರು ಪ್ರದೇಶಗಳು ಜಲಾವೃತವಾಗಿದೆ. ದೆಹಲಿ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+