ಮೇವು ಹಗರಣ: ಲಾಲೂ ಪ್ರಸಾದ್ ವಿರುದ್ಧ ಮತ್ತೆ ತನಿಖೆಗೆ ಆದೇಶ
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಿಂದ ಸೋಮವಾರದಂದು ಮಹತ್ವದ ತೀರ್ಪು ಹೊರ ಬಂದಿದೆ. ಬಿಹಾರದ ಮಾಜಿ ಸಿಎಂ ಲಾಲೂ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.
ಬೆಂಗಳೂರು, ಮೇ 08: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಿಂದ ಸೋಮವಾರದಂದು ಮಹತ್ವದ ತೀರ್ಪು ಹೊರ ಬಂದಿದೆ. ಬಿಹಾರದ ಮಾಜಿ ಸಿಎಂ ಲಾಲೂ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.
ಲಾಲೂ ವಿರುದ್ಧದ ಕ್ರಿಮಿನಲ್ ಸಂಚು ಆರೋಪ ಕೈ ಬಿಡಲು ಸಾಧ್ಯವಿಲ್ಲ. ಎಲ್ಲಾ ಆರೋಪಗಳ ತನಿಖೆಯನ್ನು ಪ್ರತ್ಯೇಕವಾಗಿ ಕೈಗೆತ್ತಿಕೊಳ್ಳುವಂತೆ ಸೂಚಿಸಿದೆ. [2013: ಮೇವು ಹಗರಣ: ಲಾಲೂ ಯಾದವ್ ಗೆ ಜಾಮೀನು]
ಬಹುಕೋಟಿ ಮೇವು ಹಗರಣದಲ್ಲಿ ಅಪರಾಧಿಯಾಗಿ ಜೈಲುವಾಸಿಯಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಸುಪ್ರೀಂಕೋರ್ಟಿನಿಂದ 2013ರಲ್ಲಿ ಜಾಮೀನು ಮಂಜೂರಾಗಿತ್ತು. ಆರ್ ಜೆಡಿ ಮುಖ್ಯಸ್ಥ ಲಾಲೂ ಅವರಿಗೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು 5 ವರ್ಷ ಕಾಲ ಜೈಲುಶಿಕ್ಷೆ ವಿಧಿಸಿತ್ತು.
ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ನಂತರ 65 ವರ್ಷದ ಲಾಲು ಬಿರ್ಸಾ ಮುಂಡಾ ಜೈಲಿನಲ್ಲಿದ್ದರು.ಈ ಹಿಂದೆ ರೈಲ್ವೆ ಸಚಿವರಾಗಿದ್ದ ಲಾಲು ಸಂಸತ್ ಸ್ಥಾನವನ್ನು ಕಳೆದುಕೊಂಡಿದ್ದಲ್ಲದೆ 11 ವರ್ಷ ಸಂಸತ್ತಿನತ್ತ ಸುಳಿದಾಡುವಂತೆಯೂ ಇಲ್ಲ.
ಸುಮಾರು 21 ವರ್ಷಗಳ ಹಿಂದೆ ನಡೆದಿದ್ದ 900 ಕೋಟಿ ರೂ. ಮೊತ್ತದ ಮೇವು ಹಗರಣ ಸಂಬಂಧ ಒಟ್ಟು 53 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 44 ಪ್ರಕರಣಗಳ ತೀರ್ಪು ಈಗಾಗಲೇ ಹೊರಬಿದ್ದಿದೆ. ಲಾಲು ಪ್ರಸಾದ್ ಯಾದವ್ ವಿರುದ್ಧ ಆರು ಪ್ರಕರಣಗಳು ದಾಖಲಾಗಿವೆ.

ಲಾಲೂ ವಿರುದ್ಧ ತನಿಖೆಗೆ ಆದೇಶ
ಛಾಯ್ ಬಾಸಾ ಖಜಾನೆಯಿಂದ 37 ಕೋಟಿ ರೂ. ಹಣವನ್ನು ಅಕ್ರಮವಾಗಿ ಪಡೆದ ಆರೋಪವನ್ನು ಲಾಲು ಎದುರಿಸುತ್ತಿದ್ದಾರೆ. ಬಿಹಾರದ ಜಾನುವಾರುಗಳಿಗೆ ಮೇವು ಹಾಗೂ ಔಷಧ ಒದಗಿಸುವ ನೆಪದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಸರ್ಕಾರದ ಹಣವನ್ನು ಲೂಟಿ ಮಾಡಿದ್ದರು. 20 ವರ್ಷಗಳ ಕಾಲ ನಡೆದ ಈ ಲೂಟಿ ತಡವಾಗಿ ಬೆಳಕಿಗೆ ಬಂದಿತ್ತು.

ವಿಚಾರಣೆ ಜಾರಿಯಲ್ಲಿದೆ
ಈ ಹಗರಣದಿಂದಾಗಿ ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡಿದ್ದ ಲಾಲು ಪ್ರಸಾದ್ ಯಾದವ್ ಜೈಲಿಗೂ ಹೋಗಿಬಂದಿದ್ದರು. ಲಾಲು ವಿರುದ್ಧ ದಾಖಲಾಗಿರುವ ಆರು ಪ್ರಕರಣಗಳ ಪೈಕಿ ಐದರ ವಿಚಾರಣೆ ಜಾರ್ಖಂಡ್ ನಲ್ಲಿ, ಒಂದು ಪ್ರಕರಣದ ವಿಚಾರಣೆ ಬಿಹಾರದಲ್ಲೂ ನಡೆಯುತ್ತಿದೆ. ಜಾರ್ಖಂಡ್ ರಚನೆಯಾದ ಬಳಿಕ ಬಹುತೇಕ ಪ್ರಕರಣಗಳ ವಿಚಾರಣೆಯನ್ನು ಆ ರಾಜ್ಯಕ್ಕೆ ವರ್ಗಾಯಿಸಲಾಗಿತ್ತು. ಜಾರ್ಖಂಡ್ ನಿಂದ ಹಾಗೂ ಸುಪ್ರೀಂಕೋರ್ಟಿನಿಂದ ಜಾಮೀನು ಪಡೆದು ಮತ್ತೆ ರಾಜಕೀಯರಂಗಕ್ಕೆ ಇಳಿದಿದ್ದರು.

ದೋಷಾರೋಪ ಪಟ್ಟಿ ಕಥೆ
ಲಾಲೂ ವಿರುದ್ಧದ ಕ್ರಿಮಿನಲ್ ಸಂಚು ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಎಲ್ಲಾ ಆರೋಪಗಳನ್ನು ಪ್ರತ್ಯೇಕವಾಗಿ ತನಿಖೆಗೊಳಪಡಿಸಿ, ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಲು ಸಿಬಿಐಗೆ ಅವಕಾಶ ಸಿಕ್ಕಿದೆ.
ಆದರೆ, ಚಾರ್ಜ್ ಶೀಟ್ ರದ್ದುಗೊಳಿಸದಂತೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯ ತೀರ್ಪು ಇನ್ನೂ ಬಾಕಿಯಿದೆ.
ಅವಿಭಜಿತ ಬಿಹಾರದ ಭ್ರಷ್ಟಾಚಾರ
ಅವಿಭಜಿತ ಬಿಹಾರದ ಈ ಮಹಾನ್ ಭ್ರಷ್ಟಾಚಾರ ಪ್ರಕರಣದಲ್ಲಿ ಲಾಲೂ ಪ್ರಸಾದ್ ಅಲ್ಲದೆ. ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ, ಮಾಜಿ ಪಶುಸಂಗೋಪಣಾ ಸಚಿವ ವಿದ್ಯಾಸಾಗ್ರ್ ನಿಶಾದ್ ಹಾಗೂ ಚಂದ್ರದೇವ್ ಪ್ರಸಾದ್ ವರ್ಮ, ಜೆಡಿಯು ಸಂಸದ ಜಗದೀಶ್ ಶರ್ಮ, ಬಿಜೆಪಿ ಮುಖಂಡ ಧ್ರುವ ಭಗತ್, ಮಾಜಿ ಆರ್ ಜೆ ಡಿ ಸಂಸದ ಆರ್ ಕೆ ರಾಣಾ ಕೂಡಾ ಆರೋಪಿಗಳಾಗಿದ್ದಾರೆ.
{promotion-urls}
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications