Video: ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಕಾಲ್ಸೇತುವೆ ಕುಸಿದು ನಾಲ್ವರಿಗೆ ಗಾಯ
ಚಂದ್ರಾಪುರ್, ನವೆಂಬರ್ 27: ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಾಡುವ ಕಾಲು ಸೇತುವೆಯ ಚಪ್ಪಡಿ ಕುಸಿದು ನಾಲ್ವರು ಗಾಯಗೊಂಡಿದ್ದಾರೆ. ನಗರದ ಬಲ್ಲಾರ್ ಶಾ ರೈಲು ನಿಲ್ದಾಣದಲ್ಲಿ ಸಂಜೆ 5 ಗಂಟೆ ವೇಳೆಗೆ ಈ ಘಟನೆ ನಡೆದಿದೆ.
ಫುಟ್‌ಬ್ರಿಡ್ಜ್‌ನಲ್ಲಿದ್ದ ಜನರು ಕೆಳಗಿನ ರೈಲು ಹಳಿಗಳ ಮೇಲೆ ಬಿದ್ದಿದ್ದಾರೆ. ಅದೃಷ್ಟವಶಾತ್ ಈ ಸಮಯದಲ್ಲಿ ಆ ಹಳಿಗಳಲ್ಲಿ ಯಾವುದೇ ರೈಲು ಸಂಚರಿಸುತ್ತಿರಲಿಲ್ಲ ಎಂದು ಗೊತ್ತಾಗಿದೆ. ಈ ಪಾದಚಾರಿ ಸೇತುವೆಯು 60 ಅಡಿ ಎತ್ತರವಿದ್ದು ಸಾಕಷ್ಟು ಹಳೆಯದಾಗಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದ ಚಂದ್ರಾಪುರದ ರೈಲ್ವೆ ನಿಲ್ದಾಣದಲ್ಲಿ ಕುಸಿತ ಕಂಡಿರುವ ಕಾಲು ಸೇತುವೆಯು ಒಂದು ಮತ್ತು ನಾಲ್ಕು ಪ್ಲಾಟ್‌ಫಾರ್ಮ್‌ಗಳ ನಡುವೆ ಸಂಪರ್ಕ ಕೊಂಡಿಯಾಗಿತ್ತು ಎಂದು ತಿಳಿದು ಬಂದಿದೆ.

ಸಿವಿಲ್ ಆಸ್ಪತ್ರೆಗೆ ಗಾಯಾಳುಗಳು ದಾಖಲು:
ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಗಾಯಗೊಂಡ ಎಲ್ಲರನ್ನು ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ರೈಲ್ವೆ ವಕ್ತಾರ ಶಿವಾಜಿ ಸುತಾರ್ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.
#WATCH | Slabs fall off of a foot over bridge at Balharshah railway junction in Maharashtra's Chandrapur; people feared injured pic.twitter.com/5VT8ry3ybe
— ANI (@ANI) November 27, 2022
ಗಾಯಾಳುಗಳಿಗೆ ಪರಿಹಾರ: ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ.












Click it and Unblock the Notifications