ಇತಿಹಾಸದಲ್ಲಿ ಮೊದಲ ಬಾರಿಗೆ ಸುಪ್ರಿಂ ನ್ಯಾಯಮೂರ್ತಿಗಳಿಂದ ಪತ್ರಿಕಾಗೋಷ್ಠಿ
ನವದೆಹಲಿ, ಜನವರಿ 12: ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸುಪ್ರಿಂ ಕೋರ್ಟ್ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದಾರೆ. ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಪತ್ರಿಕಾಗೋಷ್ಠಿ ನಡೆಯಲಿದೆ.
ನ್ಯಾಯಮೂರ್ತಿ ಚೆಲಮೇಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್, ಕುರಿಯನ್ ಜೋಸೆಫ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸುವ ನಿರ್ಧಾರವನ್ನು ನ್ಯಾ. ಚೆಲಮೇಶ್ವರ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸುಪ್ರಿಂ ಕೋರ್ಟ್ ಕೊಲಿಜಿಯಂಗೆ ಸಂಬಂಧಿಸಿದಂತೆ ಈ ಮಹತ್ವದ ಪತ್ರಿಕಾಗೋಷ್ಠಿ ಕರೆದಿದ್ದಾರೆ ಎನ್ನಲಾಗಿದೆ.

ಭಾರತದ ಇತಿಹಾಸದಲ್ಲಿ ನ್ಯಾಯಾಧೀಶರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವುದು ಇದೇ ಮೊದಲು.












Click it and Unblock the Notifications