ಇದೇ ಮೊಟ್ಟ ಮೊದಲು ಮದುವೆ ಸಮಾರಂಭಕ್ಕೆ ಸಜ್ಜಾದ ರಾಷ್ಟ್ರಪತಿ ಭವನ
ಇದೇ ಮೊಟ್ಟ ಮೊದಲ ಬಾರಿ ರಾಷ್ಟ್ರಪತಿ ಭವನ ಮದುವೆ ಸಮಾರಂಭಕ್ಕೆ ಅದ್ಧೂರಿಯಾಗಿ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್‌ಓ ಆಗಿರುವ ಸಿಆರ್‌ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ಅವರ ಮದುವೆ ಸಿದ್ಧತೆಗಳು ಅದ್ಧೂರಿಯಾಗಿ ನಡೆಯುತ್ತಿವೆ. ಹಾಗಾದರೆ ಪೂನಾಂ ಗುಪ್ತಾ ಅವರು ಯಾರ ಜೊತೆ ವಿವಾಹ ಆಗುತ್ತಿದ್ದಾರೆ ಹಾಗೂ ಇವರ ಹಿನ್ನೆಲೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಷ್ಟ್ರಪತಿ ಭವನದಲ್ಲಿನ ಮದರ್ ಥೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ಫೆಬ್ರವರಿ 12ರಂದು ನಡೆಯುವ ವಿವಾಹಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶೇಷ ಒಪ್ಪಿಗೆ ನೀಡಿದ್ದಾರೆ. ಜಮ್ಮು & ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಅವನೀಶ್ ಜೊತೆ ಪೂನಂ ಗುಪ್ತಾ ವಿನಾಹ ನಿಗದಿಯಾಗಿದೆ. ಈ ವಿವಾಹದಲ್ಲಿ ದೊಡ್ಡ ದೊಡ್ಡ ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ.

ಪ್ರಸ್ತುತ ರಾಷ್ಟ್ರಪತಿ ಭವನದಲ್ಲಿ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪೂನಂ ಗುಪ್ತಾ 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಪೂರ್ಣ ಮಹಿಳಾ ತುಕಡಿಯನ್ನು ನಿರ್ವಹಿಸಿದ್ದರು. ಗಣಿತಶಾಸ್ತ್ರ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಪೂನಂ ಗ್ವಾಲಿಯರ್‌ನ ಜಿವಾಜಿ ವಿಶ್ವವಿದ್ಯಾಲಯದಿಂದ BEd ಪದವಿ ಪಡೆದುಕೊಂಡಿದ್ದಾರೆ.
2018ರ ಯುಪಿಎಸ್‌ಸಿ ಸಿಆರ್‌ಪಿಎಫ್ ಪರೀಕ್ಷೆಯಲ್ಲಿ 81ನೇ ರ‍್ಯಾಂಕ್ ವಿಜೇತರಾಗಿದ್ದರು. ಬಿಹಾರದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದ ಪೂನಂ ಆ ಬಳಿಕ ಕಠಿಣ ಪ್ರದೇಶಗಳಲ್ಲೂ ತಮ್ಮ ಕರ್ತವ್ಯ ನಿಷ್ಠೆ ಮೆರೆದು ಗಮನ ಸೆಳೆದಿದ್ದರು. ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ಪೂನಂ, ಆಗಾಗ್ಗೆ ಮಹಿಳಾ ಸಬಲೀಕರಣ ಹಾಗೂ ಸ್ಫೋರ್ತಿದಾಯಕ ಸಂದೇಶಘಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಜೊತೆಗೆ ಸಾರ್ವಜನಿಕರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಾ ಬರುತ್ತಿದ್ದಾರೆ.
ದ್ರೌಪದಿ ಮುರ್ಮು ಹೇಳಿದ್ದೇನು?: ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗಷ್ಟೇ ಹೇಳಿದ್ದರು.
ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಅದರಲ್ಲಿ ಹಲವು ವಿಷಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರದ ಮೂರನೇ ಅವಧಿಯು ಹಿಂದಿನ ಆಡಳಿತಗಳಿಗಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದರು.
ದೇಶದ ವಾಯುಯಾನ ವಲಯವು ವೇಗವಾಗಿ ಪ್ರಗತಿ ಸಾಧಿಸುತ್ತಿದೆ, ವಿಮಾನಯಾನ ಕಂಪನಿಗಳು 1,700 ಹೊಸ ವಿಮಾನಗಳಿಗೆ ಆರ್ಡರ್ ನೀಡುತ್ತಿವೆ. ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆ ಪೂರ್ಣಗೊಂಡಿದೆ. ಈಗ ದೇಶವನ್ನು ಕಾಶ್ಮೀರದಿಂದ ಕನ್ಯಾಕುಮಾರಿಗೆ ರೈಲು ಮಾರ್ಗದ ಮೂಲಕ ಸಂಪರ್ಕಿಸಲಾಗುವುದು. ಸೈಬರ್ ಭದ್ರತೆಯಲ್ಲಿ ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಡಿಜಿಟಲ್ ವಂಚನೆ, ಸೈಬರ್ ಅಪರಾಧ ಮತ್ತು ಡೀಪ್‌ಫೇಕ್ ಸಾಮಾಜಿಕ, ಹಣಕಾಸು ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಸವಾಲುಗಳಾಗಿವೆ ಎಂದು ಹೇಳಿದ್ದರು.












Click it and Unblock the Notifications