• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ಆತ್ಮಹತ್ಯೆ

|

ಶಿಮ್ಲಾ, ಅಕ್ಟೋಬರ್ 07: ಸಿಬಿಐ ಮಾಜಿ ನಿರ್ದೇಶಕ ಹಾಗೂ ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಮ್ಲಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಶಿಮ್ಲಾದ ಎಸ್‌ಪಿ ಮೋಹಿತ್ ಚಾವ್ಲಾ ಈ ಕುರಿತು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಅಶ್ವನಿ ಕುಮಾರ್ 2014ರ ಜೂನ್ 25 ರಂದು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಳಿಕ ಶಿಮ್ಲಾಗೆ ಬಂದಿದ್ದರು. 69 ವರ್ಷ ಅಶ್ವನಿ ಕುಮಾರ್ ಸಿಬಿಐನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಅವರು 2013ರಲ್ಲಿ ನಾಗಾಲ್ಯಾಂಡ್ ರಾಜ್ಯಪಾಲರಾಗಿ ಅಧಿಕಾರ ಪಡೆದಿದ್ದರು.

ಬಿಜೆಪಿಯ ಜನರಲ್ ಸೆಕ್ರೆಟರಿ ಆಗಿದ್ದ ಅಮಿತ್ ಶಾರನ್ನು ಗುಜರಾತ್‌ನಲ್ಲಿ ಸುಳ್ಳು ಎನ್‌ಕೌಂಟರ್ ಪ್ರಕರಣದಲ್ಲಿ ಬಂಧಿಸುವಾಗ ಅಶ್ವನಿ ಕುಮಾರ್ ಅವರು ಸಿಬಿಐ ನಿರ್ದೇಶಕರಾಗಿದ್ದರು.ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಪೊಲೀಸರು ಡೆತ್‌ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2014ರಲ್ಲಿ ನಾಗಾಲ್ಯಾಂಡ್‌ನ ರಾಜ್ಯಪಾಲರಾಗಿಯೂ ನೇಮಕವಾಗಿದ್ದರು. ಅದಕ್ಕೂ ಮೊದಲು 2013ರಲ್ಲಿ ಅತ್ಯಂತ ಕಡಿಮೆ ಅವಧಿಗೆ ಮಣಿಪುರದ ಗವರ್ನರ್ ಆಗಿದ್ದರು. 2008ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕಗೊಳ್ಳುವ ಮೊದಲು 2006 ರಿಂದ 2008ರವರೆಗೆ ಹಿಮಾಚಲಪ್ರದೇಶದ ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

English summary
Former Governor of Manipur and Nagaland, and Ex-CBI Director Ashwani Kumar found hanging at his residence in Shimla
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X