ಸಿಬಿಐ ಮಾಜಿ ನಿರ್ದೇಶಕ ರಾಕೇಶ್ ಆಸ್ತಾನಾ ಈಗ BSF ಡಿಜಿ
ನವದೆಹಲಿ, ಆ. 17: ಸಿಬಿಐನಲ್ಲಿ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಅವರೊಂದಿಗೆ ಜಗಳವಾಡುವ ಮೂಲಕ ವಿವಾದಕ್ಕೀಡಾಗಿ ಸುದ್ದಿಯಾಗಿದ್ದ ಸಿಬಿಐನ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ಮತ್ತೆ ಸುದ್ದಿಯಲ್ಲಿದ್ದಾರೆ. ನಾಗರಿಕ ವಿಮಾನಯಾನ ಭದ್ರತಾ ಇಲಾಖೆಗೆ ವರ್ಗಾವಣೆಯಾಗಿದ್ದ ರಾಕೇಶ್ ಆಸ್ತಾನಾ ಅವರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋದ ಹೆಚ್ಚುವರಿ ಅಧಿಕಾರ ನೀಡಲಾಗಿತ್ತು. ಈಗ ಗಡಿ ಭದ್ರತಾ ಪಡೆ(BSF) ಪ್ರಧಾನ ನಿರ್ದೇಶಕ (DG) ರನ್ನಾಗಿ ನೇಮಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿಯು ಆಸ್ತಾನಾ ಅವರನ್ನು ಮಾದಕವಸ್ತು ನಿಯಂತ್ರಣ ಬ್ಯೂರೋದ (ಎನ್‌ಸಿಬಿ) ಮಹಾ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿತ್ತು. ಇದಲ್ಲದೆ ರಾಕೇಶ್ ಅವರ ಅಧಿಕಾರ ಅವಧಿಯನ್ನು ಮೊಟಕುಗೊಳಿಸಲಾಗಿದ್ದು, ಸಿಬಿಐನಿಂದ ಕೂಡಾ ವರ್ಗಾಯಿಸಿ ಆದೇಶ ಹೊರಡಿಸಲಾಗಿತ್ತು. ರಾಕೇಶ್ ಆಸ್ತಾನ ಅವರ ಅಧಿಕಾರ ಅವಧಿ ಜುಲೈ 2021ರ ತನಕವಿತ್ತು.
ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಅವರ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಅಲೋಕ್ ವರ್ಮಾ ಅವರನ್ನು ಅಗ್ನಿಶಾಮಕ ದಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಆ ಹುದ್ದೆಯನ್ನು ಒಪ್ಪಿಕೊಳ್ಳದೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಅಲೋಕ್ ವರ್ಮಾ ಹಾಗೂ ರಾಕೇಶ್ ಆಸ್ತಾನ ಇಬ್ಬರು ಪರಸ್ಪರ ಭ್ರಷ್ಟಾಚಾರದ ಆರೋಪ ಹೊರೆಸಿ, ಕಿತ್ತಾಡಿಕೊಂಡಿದ್ದು, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಲಂಚ ಮತ್ತು ಸುಲಿಗೆ ಆರೋಪಗಳನ್ನು ಎದುರಿಸುತ್ತಿದ್ದ ಸುಪ್ರೀಂಕೋರ್ಟ್‌ನ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ಮತ್ತು ಡಿಎಸ್‌ಪಿ ದೇವೇಂದರ್ ಕುಮಾರ್ ಹಾಗೂ ಇತರರಿಗೆ ಸಿಬಿಐ ಮಂಗಳವಾರ ಕ್ಲೀನ್ ಚಿಟ್ ನೀಡಿತ್ತು.
ವಿಜಯ್ ಮಲ್ಯ ಮನಿಲಾಂಡ್ರಿಂಗ್ ಕೇಸ್, ಅಗಸ್ಟಾ ವೆಸ್ಟ್ ಲ್ಯಾಂಡ್ ಕೇಸ್, ಐಎಎಫ್ ಮುಖ್ಯಸ್ಥರಾಗಿದ್ದ ಎಸ್ ಪಿ ತ್ಯಾಗಿ ಬಂಧನ ಎಲ್ಲವೂ ರಾಕೇಶ್ ಆಸ್ತಾನ ಅವರ ಅವಧಿಯಲ್ಲಿನ ಬೆಳವಣಿಗೆಗಳು, ಗುಜರಾತ್ ಕೇಡರ್ ನ ಐಪಿಎಸ್ ಅಧಿಕಾರಿ ಅವರು ಏಪ್ರಿಲ್ 2016ರಲ್ಲಿ ಸಿಬಿಐ ಸೇರಿದರು, ಡಿಸೆಂಬರ್ 2016ರಿಂದ ಜನವರಿ 2017ರ ತನಕ ಸಿಬಿಐನ ಮಧ್ಯಂತರ ನಿರ್ದೇಶಕರಾಗಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications