ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಐ ಮಾಜಿ ನಿರ್ದೇಶಕ ರಾಕೇಶ್ ಆಸ್ತಾನಾ ಈಗ BSF ಡಿಜಿ

|
Google Oneindia Kannada News

ನವದೆಹಲಿ, ಆ. 17: ಸಿಬಿಐನಲ್ಲಿ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಅವರೊಂದಿಗೆ ಜಗಳವಾಡುವ ಮೂಲಕ ವಿವಾದಕ್ಕೀಡಾಗಿ ಸುದ್ದಿಯಾಗಿದ್ದ ಸಿಬಿಐನ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ಮತ್ತೆ ಸುದ್ದಿಯಲ್ಲಿದ್ದಾರೆ. ನಾಗರಿಕ ವಿಮಾನಯಾನ ಭದ್ರತಾ ಇಲಾಖೆಗೆ ವರ್ಗಾವಣೆಯಾಗಿದ್ದ ರಾಕೇಶ್ ಆಸ್ತಾನಾ ಅವರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋದ ಹೆಚ್ಚುವರಿ ಅಧಿಕಾರ ನೀಡಲಾಗಿತ್ತು. ಈಗ ಗಡಿ ಭದ್ರತಾ ಪಡೆ(BSF) ಪ್ರಧಾನ ನಿರ್ದೇಶಕ (DG) ರನ್ನಾಗಿ ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿಯು ಆಸ್ತಾನಾ ಅವರನ್ನು ಮಾದಕವಸ್ತು ನಿಯಂತ್ರಣ ಬ್ಯೂರೋದ (ಎನ್‌ಸಿಬಿ) ಮಹಾ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿತ್ತು. ಇದಲ್ಲದೆ ರಾಕೇಶ್ ಅವರ ಅಧಿಕಾರ ಅವಧಿಯನ್ನು ಮೊಟಕುಗೊಳಿಸಲಾಗಿದ್ದು, ಸಿಬಿಐನಿಂದ ಕೂಡಾ ವರ್ಗಾಯಿಸಿ ಆದೇಶ ಹೊರಡಿಸಲಾಗಿತ್ತು. ರಾಕೇಶ್ ಆಸ್ತಾನ ಅವರ ಅಧಿಕಾರ ಅವಧಿ ಜುಲೈ 2021ರ ತನಕವಿತ್ತು.

ಲಂಚ ಪ್ರಕರಣ: ಸಿಬಿಐ ಮಾಜಿ ವಿಶೇಷ ನಿರ್ದೇಶಕ ಆಸ್ತಾನಾಗೆ ಕ್ಲೀನ್‌ಚಿಟ್ಲಂಚ ಪ್ರಕರಣ: ಸಿಬಿಐ ಮಾಜಿ ವಿಶೇಷ ನಿರ್ದೇಶಕ ಆಸ್ತಾನಾಗೆ ಕ್ಲೀನ್‌ಚಿಟ್

ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಅವರ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಅಲೋಕ್ ವರ್ಮಾ ಅವರನ್ನು ಅಗ್ನಿಶಾಮಕ ದಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಆ ಹುದ್ದೆಯನ್ನು ಒಪ್ಪಿಕೊಳ್ಳದೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Former CBI Special Director Rakesh Asthana appointed as BSF DG

ಅಲೋಕ್ ವರ್ಮಾ ಹಾಗೂ ರಾಕೇಶ್ ಆಸ್ತಾನ ಇಬ್ಬರು ಪರಸ್ಪರ ಭ್ರಷ್ಟಾಚಾರದ ಆರೋಪ ಹೊರೆಸಿ, ಕಿತ್ತಾಡಿಕೊಂಡಿದ್ದು, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಲಂಚ ಮತ್ತು ಸುಲಿಗೆ ಆರೋಪಗಳನ್ನು ಎದುರಿಸುತ್ತಿದ್ದ ಸುಪ್ರೀಂಕೋರ್ಟ್‌ನ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ಮತ್ತು ಡಿಎಸ್‌ಪಿ ದೇವೇಂದರ್ ಕುಮಾರ್ ಹಾಗೂ ಇತರರಿಗೆ ಸಿಬಿಐ ಮಂಗಳವಾರ ಕ್ಲೀನ್ ಚಿಟ್ ನೀಡಿತ್ತು.

ವಿಜಯ್ ಮಲ್ಯ ಮನಿಲಾಂಡ್ರಿಂಗ್ ಕೇಸ್, ಅಗಸ್ಟಾ ವೆಸ್ಟ್ ಲ್ಯಾಂಡ್ ಕೇಸ್, ಐಎಎಫ್ ಮುಖ್ಯಸ್ಥರಾಗಿದ್ದ ಎಸ್ ಪಿ ತ್ಯಾಗಿ ಬಂಧನ ಎಲ್ಲವೂ ರಾಕೇಶ್ ಆಸ್ತಾನ ಅವರ ಅವಧಿಯಲ್ಲಿನ ಬೆಳವಣಿಗೆಗಳು, ಗುಜರಾತ್ ಕೇಡರ್ ನ ಐಪಿಎಸ್ ಅಧಿಕಾರಿ ಅವರು ಏಪ್ರಿಲ್ 2016ರಲ್ಲಿ ಸಿಬಿಐ ಸೇರಿದರು, ಡಿಸೆಂಬರ್ 2016ರಿಂದ ಜನವರಿ 2017ರ ತನಕ ಸಿಬಿಐನ ಮಧ್ಯಂತರ ನಿರ್ದೇಶಕರಾಗಿದ್ದರು.

English summary
Former CBI Special Director Rakesh Asthana was on Monday appointed Director-General (DG) of the Border Security Force (BSF).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X