ಸುಪ್ರೀಂ ಕೋರ್ಟ್ ನಿವೃತ್ತ ಮು.ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಇನ್ನಿಲ್ಲ
ಕೋಲ್ಕತಾ, ಫೆಬ್ರವರಿ. 19 : ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಭಾನುವಾರ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.
ಜುಲೈ 19, 1948ರಲ್ಲಿ ಜನಿಸಿದ್ದ ಕಬೀರ್ ಅವರು ಮೂಲತಹ ಪಶ್ಚಿಮ ಬಂಗಾಳ ರಾಜ್ಯದವರು. ಕಲ್ಕತ್ತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದ ಅಲ್ತಮಸ್ ಕಬೀರ್ 1973 ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು.

ಅಗಸ್ಟ್ 6,1990ರಲ್ಲಿ ಕಲ್ಕತ್ತ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದರು. ನಂತರ ಇವರು ಮಾರ್ಚ್ 01,2005 ರಲ್ಲಿ ಮುಖ್ಯ ನ್ಯಾಯಮೂರ್ತಿ ಸೇವೆ ಸಲ್ಲಿಸಿದ್ದಾರೆ.
ಬಳಿಕ ಇವರು ಸೆಪ್ಟೆಂಬರ್ ಮಾರ್ಚ್ 09 ,2005ರಿಂದ ಸುಪ್ರೀಂಕೋರ್ಟ್ ನಲ್ಲಿ ವಕಾಲತ್ತು ನಡೆಸುತ್ತಿದ್ದರು. ಅಲ್ತಮಸ್ ಕಬೀರ್ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.












Click it and Unblock the Notifications