ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಮಾಚಲ: ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿಎಂ ಜೈರಾಮ್ ಠಾಕೂರ್ ಆಯ್ಕೆ

|
Google Oneindia Kannada News

ಶಿಮ್ಲಾ, ಡಿಸೆಂಬರ್‌ 25: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ರಾಜ್ಯದಲ್ಲಿ ಹೊಸದಾಗಿ ಚುನಾಯಿತ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕಾಂಗ ಸಭೆಯ ಸಂದರ್ಭದಲ್ಲಿ ಮಾಜಿ ಸಿಎಂ ಮತ್ತು ಆರು ಬಾರಿ ಶಾಸಕರಾಗಿದ್ದ ಠಾಕೂರ್ ಅವರನ್ನು 68 ಸದಸ್ಯರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಹೆಸರಿಸಲಾಯಿತು. ಸಭೆಯ ನಂತರ, ಜೈರಾಮ್ ಠಾಕೂರ್ ಅವರು ತಮ್ಮ ಪಕ್ಷದ ಸದಸ್ಯರು ಮತ್ತು ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವ ಭರವಸೆ ನೀಡಿದರು.

ಸ್ತ್ರೀ ಸಾಮರ್ಥ್ಯ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ಸ್ತ್ರೀ ಸಾಮರ್ಥ್ಯ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಬಿಜೆಪಿ ಕುಟುಂಬದ ಪ್ರತಿಯೊಂದು ಜವಾಬ್ದಾರಿಯನ್ನು ನಿರ್ವಹಿಸುವುದು ನಮ್ಮ ಪ್ರಾಥಮಿಕ ಜವಾಬ್ದಾರಿಯಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಜವಾಬ್ದಾರಿಯನ್ನು ನನಗೆ ನೀಡಿದ ಎಲ್ಲಾ ಬಿಜೆಪಿ ಶಾಸಕರು ಮತ್ತು ದಾಧಿಕಾರಿಗಳಿಗೆ ನನ್ನ ಹೃದಯದಿಂದ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲ ಮತ್ತು ಪ್ರೀತಿಯೊಂದಿಗೆ ನಾನು ಈ ಜವಾಬ್ದಾರಿಯನ್ನು ಪೂರ್ವಭಾವಿಯಾಗಿ ನಿರ್ವಹಿಸುತ್ತೇನೆ ಎಂದು ಬರೆದಿದ್ದಾರೆ.

Former CM Jairam Thakur elected as Leader of Opposition in Himachal Pradesh

ಡಿಸೆಂಬರ್ 11ರಂದು ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಮಾಜಿ ನಾಯಕ ಮುಖೇಶ್ ಅಗ್ನಿಹೋತ್ರಿ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.

ಇತ್ತೀಚೆಗೆ ನಡೆದ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಟ್ಟು 40 ಸ್ಥಾನಗಳನ್ನು ಗೆದ್ದುಕೊಂಡಿದೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದ್ದು, ಈ ಬಗ್ಗೆ ಸಭೆ ಕರೆದಿದ್ದೇವೆ ಎಂದು ಹೇಳಿದ್ದಾರೆ.

ಹಳೆಯ ಪಿಂಚಣಿ ಯೋಜನೆ ಜಾರಿಯಾಗಲಿದೆ. ಆ ನಿಟ್ಟಿನಲ್ಲಿ ಇಂದು ಸಭೆ ಕರೆದಿದ್ದೇವೆ. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ ನಮ್ಮ ಕಾರ್ಮಿಕರಿಗೆ ನಾವು ಹಳೆಯ ಪಿಂಚಣಿ ಯೋಜನೆಯನ್ನು ನೀಡಲಿದ್ದೇವೆ ಎಂದು ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ರಾಷ್ಟ್ರ ರಾಜಧಾನಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿ ಹೇಳಿದರು.

Former CM Jairam Thakur elected as Leader of Opposition in Himachal Pradesh

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕಳೆದ ಐದು ವರ್ಷಗಳಲ್ಲಿ ಕೇಂದ್ರದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದರು.

English summary
Former Chief Minister of Himachal Pradesh Jairam Thakur is the Leader of Opposition in the newly elected Legislative Assembly in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X