ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಖರೆ ನೇಮಕ
ನವದೆಹಲಿ, ಅಕ್ಟೋಬರ್ 12: ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ಮಾಜಿ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಖರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಲಹೆಗಾರರಾಗಿ ನೇಮಕರಾಗಿದ್ದಾರೆ.
ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಆಗಿದ್ದ ಅಮಿತ್ ಖರೆ ಸೆಪ್ಟೆಂಬರ್ 30 ರಂದು ನಿವೃತ್ತರಾಗಿದ್ದು, ಈಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಎರಡು ವರ್ಷಗಳ ಕಾಲ ಪ್ರಧಾನ ಮಂತ್ರಿ ಕಚೇರಿಯ ಸಲಹೆಗಾರರಾಗಿ ಅಮಿತ್ ಖರೆ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಅಮಿತ್ ಖರೆ 1985 ರ ಬ್ಯಾಚ್‌ನ ಬಿಹಾರ-ಜಾರ್ಖಂಡ್ ಐಎಎಸ್ ಅಧಿಕಾರಿ ಆಗಿದ್ದಾರೆ. ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಆಗಿ ಅಮಿತ್ ಖರೆ 2019 ರಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ತಾನು ಅಧಿಕಾರ ಸ್ವೀಕಾರ ಮಾಡಿದ ಕೆಲವೇ ಸಮಯದಲ್ಲಿ ಅಮಿತ್ ಖರೆ "ರಾಷ್ಟ್ರೀಯ ಶಿಕ್ಷಣ ನೀತಿ 2020" ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿರ್ದೇಶನದಲ್ಲಿ ಮುನ್ನಡೆಸಿದ್ದಾರೆ.

2020 ರ ಜುಲೈ 29 ರಂದು ಈ "ರಾಷ್ಟ್ರೀಯ ಶಿಕ್ಷಣ ನೀತಿ 2020" ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಕಳೆದ ತಿಂಗಳು ನಿವೃತ್ತಿ ಆದ ಬಳಿಕ ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸ್ಥಾನದಿಂದ ಅಮಿತ್ ಖರೆ ಕೆಳಕ್ಕೆ ಇಳಿದಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಲಹೆಗಾರರಾಗಿ ಅಮಿತ್ ಖರೆ ಅವರ ನೇಮಕಕ್ಕೆ ಸಂಪುಟದ ನೇಮಕಾತಿಗಳ ಸಮಿತಿಯು ಅನುಮೋದನೆಯನ್ನು ನೀಡಿದೆ.
ಅಮಿತ್ ಖರೆ ಈ ಹಿಂದೆ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಆ ಸಂದರ್ಭದಲ್ಲಿ ಡಿಜಿಟಲ್ ಮಾಧ್ಯಮದ ನಿಯಂತ್ರಣಗಳಿಗೆ ಸಂಬಂಧಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಪ್ರಮುಖ ಬದಲಾವಣೆಯನ್ನು ತಂದಿದ್ದರು.
ಇನ್ನು ಪ್ರಧಾನಿ ಸಲಹೆಗಾರರಾಗಿ ಅಮಿತ್ ಖರೆ ನೇಮಕರಾಗಿರುವ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿ, "ಭಾರತ ಸರ್ಕಾರದ ಕಾರ್ಯದರ್ಶಿ ದರ್ಜೆಯ ಸ್ಥಾನಮಾನವನ್ನು ಅಮಿತ್ ಖರೆ ಅವರಿಗೆ ನೀಡಲಾಗುತ್ತದೆ. ಅವರು ಎರಡು ವರ್ಷದ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಲಹೆಗಾರರಾಗಿ ಮುಂದುವರಿಯಲಿದ್ದಾರೆ," ಎಂದು ಉಲ್ಲೇಖ ಮಾಡಿದೆ.
ಈ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಲಹೆಗಾರರಾಗಿದ್ದ ಸಂಪುಟದ ಮಾಜಿ ಕಾರ್ಯದರ್ಶಿ ಪಿ ಕೆ ಸಿನ್ಹಾ ಹಾಗೂ ಮಾಜಿ ಕಾರ್ಯದರ್ಶಿ ಅಮರ್ಜೀತ್ ಸಿನ್ಹಾ ತೊರೆದಿದ್ದಾರೆ. ಈಗ ಅಮಿತ್ ಖರೆರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
(ಒನ್‌ಇಂಡಿಯಾ ಸುದ್ದಿ)
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications