ನನ್ನ ಮನೆಗಳ ಮೇಲೆ ಐಟಿ ದಾಳಿಗೆ ಸಂಚು: ಚಿದಂಬರಂ ಆರೋಪ

ನವದೆಹಲಿ, ಏಪ್ರಿಲ್ 8: ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ಅಡ್ಡಿಪಡಿಸುವ ಸಲುವಾಗಿ ತಮ್ಮ ಮನೆ ಮೇಲೆ ಅದಾಯ ತೆರಿಗೆ ಇಲಾಖೆ ದಾಳಿ ನಡೆಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ ಎಂದು ಮಾಜಿ ಸಚಿವ ಪಿ. ಚಿದಂಬರಂ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ನಡೆಗಳನ್ನು ದೇಶದ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ಸರಿಯಾದ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

'ಶಿವಗಂಗಾ ಕ್ಷೇತ್ರ ಮತ್ತು ಚೆನ್ನೈನಲ್ಲಿರುವ ನನ್ನ ಮನೆಗಳ ಮೇಲೆ ದಾಳಿ ನಡೆಸಲು ಅದಾಯ ತೆರಿಗೆ ಇಲಾಖೆ ಯೋಜನೆ ರೂಪಿಸಿದೆ ಎಂದು ನನಗೆ ತಿಳಿದುಬಂದಿದೆ. ಪತ್ತೆ ತಂಡವನ್ನು ನಾವು ಸ್ವಾಗತಿಸುತ್ತೇವೆ' ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

former finance minister P Chidambaram alleged IT raid on his residences welcome the search party

'ನಮ್ಮಲ್ಲಿ ಮುಚ್ಚಿಡಲು ಏನೂ ಇಲ್ಲ ಎಂಬುದು ಆದಾಯ ತೆರಿಗೆ ಇಲಾಖೆಗೆ ತಿಳಿದಿದೆ. ಅವರು ಮತ್ತು ಇತರೆ ಸಂಸ್ಥೆಗಳು ಈ ಹಿಂದೆಯೂ ನಮ್ಮ ಮನೆಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಏನೂ ಸಿಕ್ಕಿರಲಿಲ್ಲ. ಚುನಾವಣಾ ಪ್ರಚಾರವನ್ನು ಕೆಡಿಸುವುದೇ ಇದರ ಉದ್ದೇಶ' ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಈ ಸರ್ಕಾರದ ಎಲ್ಲ ನಡವಳಿಕೆಗಳನ್ನು ಜನರು ನೋಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಪಿ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ತಮಿಳುನಾಡಿನ ಶಿವಗಂಗಾ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕಾರ್ತಿ ವಿರುದ್ಧ ವಿವಿಧ ಭ್ರಷ್ಟಾಚಾರ ಪ್ರಕರಣಗಳಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+