ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್‌ಗೆ 2ನೇ ಬಾರಿ ಕೊರೊನಾ ಸೋಂಕು

|
Google Oneindia Kannada News

ಶಿಮ್ಲಾ, ಜೂನ್ 11: ಹಿಮಾಚಲಪ್ರದೇಶ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್‌ಗೆ ಎರಡನೇ ಬಾರಿ ಕೊರೊನಾ ಸೋಂಕು ತಗುಲಿದೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಆರು ಬಾರಿ ಹಿಮಾಚಲ ಪ್ರದೇಶದ ಸಿಎಂ ಆಗಿದ್ದ ವೀರಭದ್ರ ಸಿಂಗ್ ಅವರು ಈ ಹಿಂದೆ ಏಪ್ರಿಲ್ 12ರಂದು ಕೋವಿಡ್ ಸೋಂಕಿಗೆ ತುತ್ತಾಗಿ ಚಂಡೀಘಡದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಏಪ್ರಿಲ್ 30 ಗುಣಮುಖರಾಗಿದ್ದರು.

ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಅವರಿಗೆ ಹೃದಯ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Virbhadra Singh

ಹಿಮಾಚಲ ಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ಅವರು ಮತ್ತೆ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆ ಮೂಲಕ ಅವರು ಕೇವಲ 2 ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಕೋವಿಡ್-19 ಸೋಂಕಿಗೆ ತುತ್ತಾಗಿದ್ದಾರೆ.

ಒಂಬತ್ತು ಬಾರಿ ಶಾಸಕ ಮತ್ತು ಐದು ಬಾರಿ ಸಂಸದರಾಗಿದ್ದ ವೀರಭದ್ರ ಸಿಂಗ್ ಅವರು ಆರು ಅವಧಿಗೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 86 ವರ್ಷದ ವೀರಭದ್ರಸಿಂಗ್ ಅವರು ಪ್ರಸ್ತುತ ಸೋಲನ್ ಜಿಲ್ಲೆಯ ಅರ್ಕಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

ಇದೀಗ ಮತ್ತೆ ಅವರಿಗೆ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು (ಐಜಿಎಂಸಿ) ಆಸ್ಪತ್ರೆಗೆ ದಾಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವಿಶೇಷ ಕಾರ್ಯದರ್ಶಿ (ಆರೋಗ್ಯ) ನಿಪುಣ್ ಜಿಂದಾಲ್ ತಿಳಿಸಿದ್ದಾರೆ.

English summary
Former Himachal Pradesh chief minister Virbhadra Singh has tested positive for COVID-19 for the second time in two months, a health official said on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X