ಕಾಂಗ್ರೆಸ್‌ನ ಹಿರಿಯ ನಾಯಕ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ ನಿಧನ

ಶಿಮ್ಲಾ, ಜುಲೈ 08: ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ (87) ನಿಧನರಾಗಿದ್ದಾರೆ.

ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ, ವೀರಭದ್ರಸಿಂಗ್ ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವೀರಭದ್ರ ಸಿಂಗ್ ಅವರಿಗೆ ಏಪ್ರಿಲ್ 13ರಂದು ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು.

Former Himachal Pradesh Chief Minister Virbhadra Singh Dies

ಕೆಲವೇ ಕೆಲವು ದಿನಗಳ ಬಳಿಕ ಮತ್ತೆ ಆರೋಗ್ಯ ಸ್ಥಿತಿ ತುಂಬಾ ಹದಗೆಟ್ಟಿತ್ತು, ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಹಿಮಾಚಲಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿ ವೀರಭದ್ರ ಸಿಂಗ್ ಸೇವೆ ಸಲ್ಲಿಸಿದ್ದರು. ಅವರು 9 ಬಾರಿ ಶಾಸಕ, ಐದು ಬಾರಿ ಸಂಸದರಾಗಿದ್ದರು. ಅವರ ಪತ್ನಿ ಪ್ರತಿಭಾ ಸಿಂಗ್ ಮಾಜಿ ಸಂಸದರಾಗಿದ್ದಾರೆ, ಪುತ್ರ ವಿಕ್ರಮಾದಿತ್ಯ ಶಿಮ್ಲಾ ಗ್ರಾಮೀಣ ಶಾಸಕರಾಗಿದ್ದಾರೆ.

ಸೋಮವಾರ ಅವರಿಗೆ ಹೃದಯಾಘಾತವಾಗಿತ್ತು, ಆರೋಗ್ಯ ಸ್ಥಿತಿ ತುಂಬಾ ಹದಗೆಟ್ಟಿತ್ತು, ಐಸಿಯುನಲ್ಲಿ ಇರಿಸಲಾಗಿತ್ತು. ವೀರಭದ್ರಸಿಂಗ್ ಅವರಿಗೆ ಜೂನ್ 11ರಂದು ಕೊರೊನಾ ಸೋಂಕು ಎರಡನೇ ಬಾರಿಗೆ ತಗುಲಿತ್ತು, ಏಪ್ರಿಲ್‌ನಲ್ಲಿ ಚಂಡೀಗಢ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+