ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾಯಮೂರ್ತಿ ಅರುಣ್ ಮಿಶ್ರಾ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರಾಗುವ ಸಾಧ್ಯತೆ

|
Google Oneindia Kannada News

ನವದೆಹಲಿ, ಜೂ. 1: ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಜಸ್ಟಿಸ್‌ ಅರುಣ್ ಮಿಶ್ರಾ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ನೂತನ ಅಧ್ಯಕ್ಷರಾಗಿ ನೇಮಕರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉನ್ನತ ಮಟ್ಟದ ಶಿಫಾರಸು ಸಮಿತಿಯು ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿರ ಹೆಸರನ್ನು ಪ್ರಸ್ತಾಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಸೆಪ್ಟೆಂಬರ್ 2, 2020 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸ್ಥಾನದಿಂದ ನಿವೃತ್ತರಾದರು.

ಸುಪ್ರೀಂಕೋರ್ಟ್‌ಗೆ ವಿದಾಯ ಹೇಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾಸುಪ್ರೀಂಕೋರ್ಟ್‌ಗೆ ವಿದಾಯ ಹೇಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾ

ಆಯ್ಕೆ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್‌, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇದ್ದರು ಎಂದು ವರದಿಯಾಗಿದೆ.

ದಲಿತ, ಆದಿವಾಸಿ ಅಥವಾ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯನ್ನು ಆಯ್ಕೆ ಮಾಡಿ

ಮೋದಿ ದಾರ್ಶನಿಕ, ಬಹುಮುಖ ಪ್ರತಿಭೆ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶ್ಲಾಘನೆಮೋದಿ ದಾರ್ಶನಿಕ, ಬಹುಮುಖ ಪ್ರತಿಭೆ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶ್ಲಾಘನೆ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದಲಿತ, ಆದಿವಾಸಿ ಅಥವಾ ಅಲ್ಪಸಂಖ್ಯಾತ ಸಮುದಾಯದಿಂದ ಅಧಿಕ ದೂರುಗಳು ಬರುತ್ತಿರುವ ಹಿನ್ನೆಲೆ ದಲಿತ, ಆದಿವಾಸಿ ಅಥವಾ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನೇ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಶಿಫಾರಸು ಮಾಡಿದ್ದಾರೆ ಎಂದು ಕೂಡಾ ವರದಿ ತಿಳಿಸಿದೆ.

ದಲಿತ, ಆದಿವಾಸಿ ಅಥವಾ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯನ್ನು ಆಯ್ಕೆ ಮಾಡಿ

ದಲಿತ, ಆದಿವಾಸಿ ಅಥವಾ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯನ್ನು ಆಯ್ಕೆ ಮಾಡಿ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದಲಿತ, ಆದಿವಾಸಿ ಅಥವಾ ಅಲ್ಪಸಂಖ್ಯಾತ ಸಮುದಾಯದಿಂದ ಅಧಿಕ ದೂರುಗಳು ಬರುತ್ತಿರುವ ಹಿನ್ನೆಲೆ ದಲಿತ, ಆದಿವಾಸಿ ಅಥವಾ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನೇ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಶಿಫಾರಸು ಮಾಡಿದ್ದಾರೆ ಎಂದು ಕೂಡಾ ವರದಿ ತಿಳಿಸಿದೆ.

ಅರುಣ್ ಮಿಶ್ರಾ ಹೊರತುಪಡಿಸಿ ಇತರ ಹೆಸರುಗಳು ಯಾವುದು?

ಅರುಣ್ ಮಿಶ್ರಾ ಹೊರತುಪಡಿಸಿ ಇತರ ಹೆಸರುಗಳು ಯಾವುದು?

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಜಸ್ಟಿಸ್‌ ಅರುಣ್ ಮಿಶ್ರಾ ಹೆಸರನ್ನು ಹೊರತುಪಡಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಮತ್ತು ಗುಪ್ತಚರ ಇಲಾಖೆಯ ಮಾಜಿ ನಿರ್ದೇಶಕ ರಾಜೀವ್ ಜೈನ್ ಹೆಸರು ಕೂಡಾ ಪ್ರಸ್ತಾಪ ಆಗಿದೆ ಎಂದು ತಿಳಿದು ಬಂದಿದೆ. ಸದ್ಯ ಅರುಣ್ ಮಿಶ್ರಾ ಎನ್‌ಎಚ್‌ಆರ್‌ಸಿ ಯ ನೂತನ ಅಧ್ಯಕ್ಷರಾಗುವ ಸಾಧ್ಯತೆ ಅಧಿಕವಾಗಿದೆ. ಸದ್ಯಕ್ಕೆ ಅಧಿಕೃತ ಅಧಿಸೂಚನೆಯನ್ನು ನಿರೀಕ್ಷಿಸಲಾಗಿದೆ.

ನಿವೃತ್ತಿ ಬಳಿಕ ನ್ಯಾಯಾಧೀಶರು ಸರ್ಕಾರಿ ಹುದ್ದೆಗೆ ಏರಬಾರದು- ದೀಪಕ್ ಗುಪ್ತಾನಿವೃತ್ತಿ ಬಳಿಕ ನ್ಯಾಯಾಧೀಶರು ಸರ್ಕಾರಿ ಹುದ್ದೆಗೆ ಏರಬಾರದು- ದೀಪಕ್ ಗುಪ್ತಾ

2020 ರ ಡಿಸೆಂಬರ್‌ ಬಳಿಕ ಎನ್‌ಎಚ್‌ಆರ್‌ಸಿ ಅಧ್ಯಕ್ಷ ಹುದ್ದೆಗೆ ನೇಮಕವಾಗಿಲ್ಲ

2020 ರ ಡಿಸೆಂಬರ್‌ ಬಳಿಕ ಎನ್‌ಎಚ್‌ಆರ್‌ಸಿ ಅಧ್ಯಕ್ಷ ಹುದ್ದೆಗೆ ನೇಮಕವಾಗಿಲ್ಲ

2020 ರ ಡಿಸೆಂಬರ್‌ನಲ್ಲಿ ಎನ್‌ಎಚ್‌ಆರ್‌ಸಿಯ ಅಧ್ಯಕ್ಷರಾಗಿದ್ದ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್‌ ಎಚ್.ಎಲ್ ದತ್ತು ನಿವೃತ್ತರಾದಾಗಿನಿಂದ ಈವರೆಗೆ ಎನ್‌ಎಚ್‌ಆರ್‌ಸಿ ಯ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿಲ್ಲ. ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರಫುಲ್ಲಾ ಚಂದ್ರ ಪಂತ್ ಪ್ರಸ್ತುತ ಕಾರ್ಯಕಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಜಸ್ಟಿಸ್‌ ಅರುಣ್ ಮಿಶ್ರಾರ ಕುರಿತು

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಜಸ್ಟಿಸ್‌ ಅರುಣ್ ಮಿಶ್ರಾರ ಕುರಿತು

ನ್ಯಾಯಮೂರ್ತಿ ಅರುಣ್‌ ಮಿಶ್ರಾ ಮಧ್ಯಪ್ರದೇಶದ ಹೈಕೋರ್ಟ್‌ನ ನ್ಯಾಯಾಧೀಶರಾಗಿ 1999 ರ ಅಕ್ಟೋಬರ್ 25 ರಂದು ನೇಮಕಗೊಂಡಿದ್ದರು. ಬಳಿಕ ಅವರನ್ನು 2010 ರ ನವೆಂಬರ್‌ನಲ್ಲಿ ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ನಂತರ 2012 ರ ಡಿಸೆಂಬರ್‌ನಲ್ಲಿ ಕೋಲ್ಕತ್ತಾ ಹೈಕೋರ್ಟ್‌ಗೆ ಮುಖ್ಯನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ. 2014 ರ ಜೂನ್‌ನಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಅರುಣ್‌ ಮಿಶ್ರಾ, ತನ್ನ ನಿವೃತ್ತಿಯ ಐದು ವರ್ಷಗಳಲ್ಲಿ ರಾಜಕೀಯವಾಗಿ ಸೂಕ್ಷ್ಮ ಮತ್ತು ಉನ್ನತ ಮಟ್ಟದ ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ. ಪ್ರಶಾಂತ್ ಭೂಷಣ್ ಪ್ರಕರಣ ಮತ್ತು ಭೂಸ್ವಾಧೀನ ಪ್ರಕರಣದ ವಿಚಾರಣೆಯನ್ನು ಮಿಶ್ರಾ ನಡೆಸಿದ್ದರು ಎಂದು ನೆನಪಿಸಿಕೊಳ್ಳಬಹುದು.

"ಸಿಎಎ ವಿರುದ್ಧ ಪ್ರತಿಭಟನೆ ತಪ್ಪಲ್ಲ, ರಸ್ತೆ ಬಂದ್ ಮಾಡುವುದು ಸರಿಯಲ್ಲ"

ಪ್ರಧಾನಿ ನರೇಂದ್ರ ಮೋದಿಯನ್ನು ಶ್ಲಾಘಿಸಿದ್ದ ಅರುಣ್‌ ಮಿಶ್ರಾ

ಪ್ರಧಾನಿ ನರೇಂದ್ರ ಮೋದಿಯನ್ನು ಶ್ಲಾಘಿಸಿದ್ದ ಅರುಣ್‌ ಮಿಶ್ರಾ

2020 ರ ಅಂತರರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ನ್ಯಾಯಮೂರ್ತಿ ಮಿಶ್ರಾ ಶ್ಲಾಘಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ನಡೆದ ನ್ಯಾಯಾಂಗ ಮತ್ತು ಬದಲಾಗುತ್ತಿರುವ ಜಗತ್ತು ಕುರಿತ ತಮ್ಮ ಭಾಷಣದಲ್ಲಿ ನ್ಯಾಯಮೂರ್ತಿ ಮಿಶ್ರಾ ಮೋದಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ, ಬಹುಮುಖ ಪ್ರತಿಭೆ ಹೊಂದಿರುವ, ಜಾಗತಿಕವಾಗಿ ಯೋಚಿಸಿ ಸ್ಥಳೀಯವಾಗಿ ಕಾರ್ಯನಿರ್ವಹಿಸುವ ವ್ಯಕ್ತಿ ಎಂದು ಹೊಗಳಿದ್ದರು. ಆದರೆ ಈ ಬೆನ್ನಲ್ಲೇ ನ್ಯಾಯಾಧೀಶರೊಬ್ಬರು ರಾಜಕೀಯ ಪಕ್ಷದ ಬಾಲಂಗೋಚಿಯಾಗಿರುವುದು ದೇಶದ ಪ್ರಜಾಪ್ರಭುತ್ವದ ಅವನತಿ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.

(ಒನ್ಇಂಡಿಯಾ ಸುದ್ದಿ)

English summary
Former judge in the Supreme Court of India, Justice Arun Mishra, is likely to be appointed as the new chairperson of the National Human Rights Commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X