ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ನಿಧನ

ಕೋಲ್ಕತ್ತಾ, ಆಗಸ್ಟ್ 13: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ(89) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

Former Lok Sabha speaker Somnath Chatgerjee passes away

ಸಿಪಿಎಂ ಮುಖಂಡರಾಗಿದ್ದ ಸೋಮನಾಥ ಚಟರ್ಜಿ ಅವರು ಇಂದು ಬೆಳಿಗ್ಗೆ 8.15 ಕ್ಕೆ ಬೆಲ್ಲೆ ವೆಯು ಆಸ್ಪತ್ರೆಯಲ್ಲಿ ನಲ್ಲಿ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಳೆದ ತಿಂಗಳಷ್ಟೇ 40 ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಆಗಸ್ಟ್ 1 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

2004 ರಿಂದ 2009ರವರೆಗೆ ಲೋಕಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದ ಚಟರ್ಜಿ ಅವರು, ಕಮ್ಯುನಿಸ್ಟ್ ವಿಚಾರಧಾರೆಯಿಂದ ಪ್ರಭಾವಿತರಾಗಿದ್ದರು.

1929 ಜುಲೈ 25 ರಂದು ಅಸ್ಸಾಮಿನ ತೆಜ್ ಪುರದಲ್ಲಿ ಜನಿಸಿದ ಸೋಮನಾಥ ಚಟರ್ಜಿ ಅವರು 1968 ರಿಂದ ಕಮ್ಯುನಿಸ್ಟ್ ಪಕ್ಷದೊಂದಿಗೆ ಒಡನಾಟ ಆರಂಭಿಸಿದರು. ನಂತರ 1971 ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಅವರ ಅಗಲಿಕೆಗೆ ದೇಶದ ನಾನಾ ಗಣ್ಯರು, ಕಮ್ಯುನಿಸ್ಟ್ ಪಕ್ಷದ ನಾಯಕರು ಕಂಬನಿ ಮಿಡಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+