Manohar Joshi: ತೀವ್ರ ಅನಾರೋಗ್ಯದಿಂದ ಮಾಜಿ ಸಿಎಂ ಆಸ್ಪತ್ರೆಗೆ ದಾಖಲು

ಮುಂಬೈ, ಮೇ 23: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಲೋಕಸಭಾಧ್ಯಕ್ಷರಾದ ಮನೋಹರ್ ಜೋಶಿ (85) ಅವರು ತೀವ್ರ ಅನಾರೋಗ್ಯ ಸಮಸ್ಯೆಗೆ ತುತ್ತಾಗಿದ್ದಾರೆ. ಹೀಗಾಗಿ ಅವರನ್ನು ಮುಂಬೈನ್ ಮಾಹಿಮ್ ನಲ್ಲಿರುವ ಹಿಂದೂಜಾ ಆಸ್ಪತ್ರೆಗೆ ಸೋಮವಾ ರಾತ್ರಿ ದಾಖಲಿಸಲಾಗಿದೆ.

ಆಸ್ಪತ್ರೆಯ ವೈದ್ಯಾಧಿಕಾರಿಗಳ ಪ್ರಕಾರ, ಮನೋಹರ್ ಜೋಶಿ ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಸ್ತುತದಲ್ಲಿ ಅವರನ್ನು ತೀವ್ರ ನಿಗಾ ಘಟಕ (ICU) ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮಾಜಿ ಮುಖ್ಯಮಂತ್ರಿಗಳು ಶಿವಸೇನಾ ಮುಖ್ಯಸ್ಥ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಆಪ್ತರಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿದ್ದರು.

Former Maharashtra CM Manohar Joshi Admitted to Hospital

85 ವರ್ಷದ ಮಾಜಿ ಸಿಎಂ ಮನೋಹರ್ ಜೋಶಿ ಅವರಿಗೆ ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಈ ಸಂಬಂಧ ಅವರಿಗೆ ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇತ್ತು. ಹೀಗಾಗಿ ಅವರನ್ನು ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.

ಜೋಶಿ ಅವರು ವೆಂಟಿಲೇಟರ್ ಸಹಾಯವಿಲ್ಲದೇ ಸ್ವಂತಹವಾಗಿ ಉಸಿರಾಡುತ್ತಿದ್ದಾರೆ. ಬ್ರೈನ್ ಟ್ಯೂಮರ್‌ನಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರುಗಳಾಗಿವೆ. ಐಸಿಯುನಲ್ಲಿ ಇಟ್ಟು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಸದ್ಯ ಮಾಜಿ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹಿಂದೂಜಾ ವೈದ್ಯರ ಮೂಲಗಳು ಮಾಹಿತಿ ನೀಡಿವೆ.

ಸದ್ಯ ಜೋಶಿ ಅವರ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ವೈದ್ಯಕೀಯ ಬುಲೆಟಿನ್ ಇದುವರೆಗೂ ಬಿಡುಗಡೆ ಮಾಡಿಲ್ಲ. ಮನೋಹರ್ ಜೋಶಿ ಅವರು ಮುಂಬೈನ ಮಹಾನಗರ ಪಾಲಿಕೆಯ ಮೇಯರ್ ಆಗಿ, ಶಾಸಕರಾಗಿ, 1995 ರಿಂದ 1999 ರವರೆಗೆ ಮಹಾರಾಷ್ಟ್ರ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ 2002ರಿಂದ ಮೂರು ವರ್ಷ ಲೋಕಸಭಾಧ್ಯಕ್ಷರಾಗಿ ಸೇವೆ ನೀಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+